ಚುನಾವಣೋತ್ತರ ಹಿಂಸಾಚಾರ: ಪ.ಬಂಗಾಳ ಸರ್ಕಾರದ ಅರ್ಜಿ

Source: PTI | By MV Bhatkal | Published on 13th September 2021, 11:43 PM | National News | Don't Miss |

ನವದೆಹಲಿ: ಚುನಾವಣೋತ್ತರ ಹಿಂಸಾಚಾರ ಕುರಿತ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿರುವ ಕೋಲ್ಕತ್ತ ಹೈಕೋರ್ಟ್‌ನ ಆದೇಶದ ವಿರುದ್ಧ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿರುವ ವಿಶೇಷ ಅರ್ಜಿಯನ್ನು ಸೆ. 20ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸೋಮವಾರ ಸುಪ್ರೀಂಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿಗಳಾದ ವಿನೀತ್ ಸರಣ್ ಹಾಗೂ ಅನಿರುದ್ಧ ಬೋಸ್ ಅವರನ್ನೊಳಗೊಂಡ ನ್ಯಾಯಪೀಠವು ಪಶ್ಚಿಮ ಬಂಗಾಳ ಸರ್ಕಾರವು ಸಲ್ಲಿಸಿದ ಚಾರ್ಟ್ ಅನ್ನು ಪರಿಶೀಲಿಸಿ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.

ಸರ್ಕಾರದ ಪರವಾಗಿ ಹಾಜರಿದ್ದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಅತ್ಯಾಚಾರ ಮತ್ತು ಹಿಂಸಾಚಾರ ಪ್ರಕರಣವನ್ನು ತನಿಖೆ ಮಾಡಲು ರಚಿಸಲಾದ ಸಮಿತಿಯ ಸದಸ್ಯರನ್ನು ಉದ್ದೇಶಿಸಿ, ಮಾಹಿತಿಯನ್ನು ಸಂಗ್ರಹಿಸಲು ಈ ಸದಸ್ಯರನ್ನು ನೇಮಿಸಲಾಗಿದೆ ಎಂಬುದನ್ನು ಊಹಿಸಲು ಸಾಧ್ಯವೇ? ಇದು ಬಿಜೆಪಿ ತನಿಖಾ ಸಮಿತಿಯೇ? ಎಂದು ಪ್ರಶ್ನಿಸಿದರು.

‘ಅತ್ಯಾಚಾರ ಮತ್ತು ಹತ್ಯೆಯಂಥ ಪ್ರಕರಣಗಳ ತನಿಖೆಗೆ ಸಿಬಿಐ ಇದೆ. ಅಂತೆಯೇ ಇತರ ಪ್ರಕರಣಗಳನ್ನು ವಿಶೇಷ ತನಿಖಾ ದಳವು (ಎಸ್‌ಐಟಿ) ತನಿಖೆ ನಡೆಸುತ್ತದೆ’ ಎಂದು ಹೇಳಿದರು.

ತನಿಖಾ ಸಮಿತಿಯ ಸದಸ್ಯರು ಇನ್ನೂ ಬಿಜೆಪಿಗೆ ಸಂಬಂಧಿಸಿದ ಪೋಸ್ಟ್‌ಗಳನ್ನೇ ಪೋಸ್ಟ್ ಮಾಡುತ್ತಿದ್ದಾರೆ. ಅಂಥವರನ್ನು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಸದಸ್ಯರನ್ನಾಗಿ ಹೇಗೆ ನೇಮಿಸಿಕೊಳ್ಳಲು ಸಾಧ್ಯ ಎಂದೂ ಪ್ರಶ್ನಿಸಿದ ಸಿಬಲ್ ಅವರು, ಮಧ್ಯಂತರ ಆದೇಶ ನೀಡಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.

ನಂತರ ಅರ್ಜಿಯ ವಿಚಾರಣೆಯನ್ನು ಸೆ. 20ಕ್ಕೆ ನಡೆಸಲಾಗುವುದು ಎಂದು ನ್ಯಾಯಪೀಠವು ತಿಳಿಸಿತು.

ಚುನಾವಣೋತ್ತರ ಹಿಂಸಾಚಾರದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವ ವಿರುದ್ಧ ವಿಶೇಷ ಅರ್ಜಿ ಸಲ್ಲಿಸಿರುವ ಪಶ್ಚಿಮ ಬಂಗಾಳ ಸರ್ಕಾರವು, ಬಿಜೆಪಿಯು ತೃಣಮೂಲ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಕರಣಗಳನ್ನು ದಾಖಲಿಸುವಲ್ಲಿ ನಿರತವಾಗಿದೆ. ಹಾಗಾಗಿ, ಅದರಿಂದ ನ್ಯಾಯಯುತವಾದ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಅನುಮಾನ ವ್ಯಕ್ತಪಡಿಸಿದೆ.

ಚುನಾವಣೋತ್ತರ ಹಿಂಸಾಚಾರದ ಇತರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ, ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ಕೋಲ್ಕತ್ತ ಹೈಕೋರ್ಟ್ ಸೂಚಿಸಿತ್ತು.

Read These Next

ಆರ್ಯನ್ ಖಾನ್ ಬಿಡುಗಡೆಗೆ ಎನ್‌ಸಿಬಿಯ ವಾಂಖೆಡೆ, ಮಧ್ಯವರ್ತಿಗಳಿಂದ 25 ಕೋ.ರೂ. ಲಂಚದ ಬೇಡಿಕೆ ಸಾಕ್ಷಿ ಆರೋಪ

ಪ್ರಯಾಣಿಕರ ಹಡಗಿನಲ್ಲಿ ಮಾದಕ ದ್ರವ್ಯ ಪತ್ತೆ ಪ್ರಕರಣದ ಆರೋಪಿಯಾಗಿರುವ ಆರ್ಯನ್ ಖಾನ್ ಬಿಡುಗಡೆಗೆ ಮಾದಕ ದ್ರವ್ಯ ...

ತೈಲ ಬೆಲೆ ಹೆಚ್ಚಳದ ವಿರುದ್ಧ ಪ್ರತಿಭಟನೆ ನ.5ರಂದು ಲಾರಿ ಮಾಲಕರಿಂದ ವಿಧಾನಸೌಧ ಮುತ್ತಿಗೆ

ರಾಜ್ಯ ಸರಕಾರ ಈ ಕೂಡಲೇ ಇಂಧನ ಬೆಲೆ ತಗ್ಗಿಸುವಂತೆ ಆಗ್ರಹಿಸಿ ನ5ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದೆಂದು ಫೆಡರೇಷನ್ ಆಫ್ ...

ಹುಬ್ಬಳ್ಳಿ: ಹುಬ್ಬಳ್ಳಿಯ ಚರ್ಚ್‌ಗೆ ನುಗ್ಗಿ ಭಜನೆ ಮಾಡಿದ ಸಂಘಪರಿವಾರದ ಕಾರ್ಯಕರ್ತರು

ಬಲವಂತದಿಂದ ಮತಾಂತರಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ರವಿವಾರ ಬೆಳಗ್ಗೆ ಇಲ್ಲಿಯ ಭೈರಿದೇವರ ಕೊಪ್ಪದಲ್ಲಿರುವ ಚರ್ಚೆಂದಕ್ಕೆ ...

ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಕ್ರೀಡಾಕೂಟ. ಧಾರವಾಡ ಜಿಲ್ಲಾ ನೌಕರರ ಉತ್ತಮ ಸಾಧನೆ.

ಧಾರವಾಡ : 2021ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೂರು ದಿನಗಳ ಕಾಲ ...

ಅ.28 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ : ಸಚಿವ ವಿ. ಸುನೀಲ್ ಕುಮಾರ್

ಅಕ್ಟೋಬರ್ 28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ...