ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಐವರು ಸಂತ್ರಸ್ತೆಯರು 'ಸಿಟ್' ಮುಂದೆ ಹಾಜರು;

Source: Vb | By I.G. Bhatkali | Published on 30th April 2024, 6:38 AM | State News | National News |

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್‌ಡ್ರೈವ್ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ(ಸಿಟ್)ದ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಐವರು ಸಂತ್ರಸ್ತ ಮಹಿಳೆಯರನ್ನು ವಿಚಾರಣೆ ನಡೆಸಿ, ಅವರ ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ.

ಸೋಮವಾರ ಸಿಟ್ ಅಧಿಕಾರಿ ಸೀಮಾ ಲಾಟ್ಕ‌ರ್ ನೇತೃತ್ವದ ತನಿಖಾ ತಂಡವು ಐವರು ಸಂತ್ರಸ್ತೆಯರನ್ನು ವಿಚಾರಣೆಗೊಳಪಡಿಸಿತು. ಜತೆಗೆ ವೀಡಿಯೊದಲ್ಲಿರುವ ದಾಖಲೆ ಜತೆಗೆ, ಅವರ ಹೇಳಿಕೆಗಳನ್ನು ದಾಖಲು ಮಾಡಿಕೊಂಡರು. ಈ ಸಂದರ್ಭದಲ್ಲಿ ಸಂತ್ರಸ್ತೆಯರು ಆರೋಪಿ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯವೆಸಗಿರುವ ಕುರಿತು ದೂರುಗಳನ್ನು ಸಲ್ಲಿಕೆ ಮಾಡಿದರು ಎಂದು ಮೂಲಗಳು ತಿಳಿಸಿವೆ.

ಸಭೆ: ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಸಿಐಡಿ ಪ್ರಧಾನ ಕಚೇರಿಯಲ್ಲಿ ಸಿಟ್ ಮುಖ್ಯಸ್ಥ ಬಿ.ಕೆ. ಸಿಂಗ್ ಅವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಐಪಿಎಸ್ ಅಧಿಕಾರಿಗಳಾದ ಸುಮನ್ ಡಿ. ಪನ್ನೇಕರ್, ಸೀಮಾ ಲಾಟ್ಕರ್ ಭಾಗವಹಿಸಿದ್ದರು.

ಸಭೆಯಲ್ಲಿ ಪ್ರಮುಖವಾಗಿ ವಿಶೇಷ ತನಿಖಾ ತಂಡದಲ್ಲಿ ಎಷ್ಟು ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿ ಇರಬೇಕು, ಯಾರನ್ನು ಈ ತಂಡಕ್ಕೆ ನೇಮಿಸಿಕೊಳ್ಳಬೇಕು, ಯಾವ ಯಾವ ವಿಭಾಗಗಳಿಂದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ತೆಗೆದುಕೊಳ್ಳಬೇಕು, ತನಿಖೆ ಯಾವ ಸ್ವರೂಪದಲ್ಲಿರಬೇಕು ಎಂಬಿತ್ಯಾದಿ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಾಸನದಲ್ಲಿ ಹರಿದಾಡುತ್ತಿದ್ದು, ರಾಜ್ಯ ಮಹಿಳಾ ಆಯೋಗ ಪ್ರಕರಣವನ್ನು ಸಿಟ್ ತನಿಖೆಗೆ ವಹಿಸಬೇಕೆಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಸರಕಾರ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಿದೆ.

Read These Next

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆ; ಆರೋಪಿ ಪರಾರಿ | ಹುಬ್ಬಳ್ಳಿಯಲ್ಲಿ ನಡೆದ ಎರಡನೇ ಬರ್ಬರ ಕೃತ್ಯ

ಹುಬ್ಬಳ್ಳಿಯ ನೇಹಾ ಹಿರೇಮಠ, ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮೀನಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪ್ರೀತಿ ನಿರಾಕರಿಸಿದ ಕಾರಣಕ್ಕೆ ...

ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟ; ಬಾಲಕಿಯರೇ ಮೇಲುಗೈ; ಶೇ.73.40ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ರಾಜ್ಯಾದ್ಯಂತ 2023-24ನೇ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.73.40ರಷ್ಟು ಉತ್ತೀರ್ಣತೆ ದಾಖಲಾಗಿದೆ. ...

ತಿಹಾರ್ ಜೈಲಿನಿಂದ ಹೊರಬಂದ ಕೇಜ್ರಿವಾಲ್ ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಬೇಕಿದೆ: ದಿಲ್ಲಿ ಸಿಎಂ

ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಬಳಿಕ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಶುಕ್ರವಾರ ತಿಹಾರ್ ಜೈಲಿನಿಂದ ...

ಕೇಜ್ರವಾಲ್‌ಗೆ ಜೂ.1ರವರೆಗೆ ಮಧ್ಯಂತರ ಜಾಮೀನು; ಮುಖ್ಯಮಂತ್ರಿ ಕಚೇರಿಗೆ ಹೋಗಬಾರದು: ಸುಪ್ರೀಂ ಕೋರ್ಟ್

ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದಿಲ್ಲಿ ಮುಖ್ಯಮಂತ್ರಿ ...

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...