ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

Source: Vb | By I.G. Bhatkali | Published on 30th April 2024, 6:42 AM | State News |

ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ಸಿಟ್‌ಗೆ ಸೂಚಿ ಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರ ಮೇಶ್ವರ್ ತಿಳಿಸಿದ್ದಾರೆ

ಸೋಮವಾರ ಇಲ್ಲಿನ ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ ರಚನೆ ಮಾಡಿದ್ದು, ಪ್ರಕರಣದ ತನಿಖೆಯನ್ನು ಕೈಗೊಂಡಿದೆ. ಪೆನ್ ಡ್ರೈವ್‌ಗಳನ್ನು ವಶಪಡಿಸಿಕೊಂಡು ವೈಜ್ಞಾನಿಕ ವರದಿಗಾಗಿ ಎಫ್‌ಎಸ್‌ಎಲ್‌ಗೆ ರವಾನಿಸಲಿದ್ದಾರೆ. ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಿದ್ದಾರೆ ಎಂದು ವಿವರಿಸಿದರು. ಎಸ್‌ಐಟಿ ತಂಡವು ಮುಕ್ತವಾಗಿ ಕೆಲಸ ಮಾಡಲಿದೆ. ಪ್ರಕರಣದ ವರದಿ ಸಲ್ಲಿಸಲು ಯಾವುದೇ ರೀತಿಯ ಸಮಯ ನಿಗದಿಪಡಿಸಿಲ್ಲ. ತನಿಖೆ ವಿಳಂಬವಾಗಬಾರದು ಎಂಬ ದೃಷ್ಟಿಯಿಂದ ತ್ವರಿತಗತಿಯಲ್ಲಿ ತನಿಖೆ ನಡೆಸುವಂತೆ ಮೌಖಿಕವಾಗಿ ತಿಳಿಸಲಾಗಿದೆ. ವರದಿಯನ್ನು ನಾಳೆಯೇ ಕೊಡಿ, ನಾಡಿದ್ದು ಕೊಡಿ ಎಂದು ದಿನ ನಿಗದಿಪಡಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ರಾಜ್ಯ ಮಹಿಳಾ ಆಯೋಗವು ಬರೆದ ಪತ್ರದ ಆಧಾರದ ಮೇಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ದೂರುಗಳನ್ನು ಎಸ್‌ಐಟಿ ಪಡೆಯಲಿದೆ. ಸಂತ್ರಸ್ತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಎಸ್‌ಐಟಿ ಕೆಲಸ ಮಾಡಲಿದೆ ಸಂತ್ರಸ್ತರಿಗೆ ಜೀವ ಭಯವಿದ್ದರೆ ಪೊಲೀಸ್ ಭದ್ರತೆ ನೀಡಲಾಗುವುದು ಎಂದು ಪರಮೇಶ್ವರ್ ಅವರು ತಿಳಿಸಿದರು.

Read These Next

ಹುಬ್ಬಳ್ಳಿ-ಧಾರವಾಡ ಕೊಲೆ ಪ್ರಕರಣಗಳು ವರದಿ ಸಲ್ಲಿಸಲು ಎಡಿಜಿಪಿಗೆ ಸೂಚನೆ; ಪರಮೇಶ್ವ‌ರ್

ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪದೇ ಪದೇ ಸಂಭವಿಸುತ್ತಿರುವ ಕೊಲೆ ಪ್ರಕರಣಗಳ ಕುರಿತು ಪರಿಶೀಲನೆ ನಡೆಸಿ ಕೂಡಲೇ ವರದಿ ಸಲ್ಲಿಸುವಂತೆ ...

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆ; ಆರೋಪಿ ಪರಾರಿ | ಹುಬ್ಬಳ್ಳಿಯಲ್ಲಿ ನಡೆದ ಎರಡನೇ ಬರ್ಬರ ಕೃತ್ಯ

ಹುಬ್ಬಳ್ಳಿಯ ನೇಹಾ ಹಿರೇಮಠ, ಕೊಡಗು ಜಿಲ್ಲೆಯ ಸೋಮವಾರಪೇಟೆಯ ಮೀನಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಪ್ರೀತಿ ನಿರಾಕರಿಸಿದ ಕಾರಣಕ್ಕೆ ...