ಭಟ್ಕಳ: ಅ.20ರಂದು ಆಳ್ವೇಕೋಡಿ ದುರ್ಗಾಪರಮೇಶ್ವರ ಸಭಾ ಭವನದಲ್ಲಿ ಪ್ರತಿಭಾ ಪುರಸ್ಕಾರ

Source: sonews | By MV Bhatkal | Published on 17th October 2021, 7:59 PM | Coastal News |

ಭಟ್ಕಳ: ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟ್ ಅಳ್ವೇಕೋಡಿ ಇದರ ವತಿಯಿಂದ ಪ್ರತಿ ವರ್ಷ ನಡೆಸಲಾಗುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಈ ವರ್ಷ ಶ್ರೀ ಗೋಕರ್ಣ ಪರ್ತಗಾಳಿ ಶ್ರೀ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶತೀರ್ಥ ಸ್ವಾಮೀಜಿವರ ಆಶೀರ್ವಾದದೊಂದಿಗೆ ಅ.20ರಂದು ಆಳ್ವೇಕೋಡಿ ದುರ್ಗಾಪರಮೇಶ್ವರ ಸಭಾ ಭವನದಲ್ಲಿ ನಡೆಯಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಸುನಿಲ್ ನಾಯ್ಕ, ಮಾಜಿ ಶಾಸಕ ಮಂಕಾಳ ಎಸ್. ವೈದ್ಯ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮಿತಿ ಅಧ್ಯಕ್ಷ ಹನುಮಂತ ಮಂಜಪ್ಪ ನಾಯ್ಕ, ಮಾರಿಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ರಾಮಾ ಎಂ. ಮೊಗೇರ, ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಎಂ. ಮೊಗೇರ, ಶಿರಾಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇವತಿ ರವಿಶಂಕರ ನಾಯ್ಕ ಉಪಸ್ಥಿತರಿರುವರು ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

 

 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...