ಸಿದ್ದಾರ್ಥ ಪದವಿ ಮಹಾವಿದ್ಯಾಲಯ ದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಹೊಸ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Source: S.O. News Service | By MV Bhatkal | Published on 18th July 2019, 5:40 PM | Coastal News | Don't Miss |

ಭಟ್ಕಳ:ಸಿದ್ಧಾರ್ಥ ಪದವಿ ಮಹಾವಿದ್ಯಾಲಯ, ಶಿರಾಲಿಯ ಪ್ರತಿಭಾ ಪುರಸ್ಕಾರ ಹಾಗೂ ಹೊಸ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ನಡೆಯಿತು. 
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಪಶುವೈದ್ಯ ರೊ.|| ಡಾ.ಗೌರೀಶ ಪಡುಕೋಣೆಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, “ ವಿದ್ಯಾರ್ಥಿಗಳು ಕಾಲೇಜಿನಲ್ಲಿ ದೊರೆಯುವ ಎಲ್ಲಾ ಶಿಕ್ಷಣ, ಕೌಶಲ್ಯ ತರಬೇತಿ ಹಾಗು ಪಠ್ಯೇತರ ಚಟುವಟಿಕೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪದವಿಯನ್ನಷ್ಟೆ ಅವಲಂಭಿಸದೆ ಇತರ ವ್ಯಕ್ತಿತ್ವ ಬೆಳವಣಿಗೆಯ ಕೌಶಲ್ಯಗಳನ್ನು ಬೆಳಸಿಕೊಳ್ಳಬೇಕು” ಎಂದು ನುಡಿದರು.   
ಸಿದ್ಧಾರ್ಥ ಎಜುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಕ್ಯಾಪ್ಟನ್ (ನಿವೃತ್ತ) ಕೆ. ಆರ್ ನಾಯ್ಕ ಅಧ್ಯಕ್ಷತೆ ವಹಿಸಿದರು. ಟ್ರಸ್ಟಿನ ಕಾರ್ಯದರ್ಶಿ ಹಾಗೂ  ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅರ್ಚನಾ ಸಭೆಯನ್ನು  ಉದ್ದೇಶಿಸಿ ಮಾತನಾಡಿದರು. ಸಿದ್ಧಾರ್ಥ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ.ಸುಜ್ಞಾನ.ಎಸ್.ಬೈಂದೂರ ಪ್ರಾಸ್ಥಾವಿಕ ಭಾಷಣ ಮಾಡಿದರು.  
ನಂತರ 2018-19ರ ಬಿ.ಎಸ್ಸಿ ಹಾಗೂ ಬಿ.ಕಾಂನ ಅಗ್ರಸ್ಥಾನಿಗಳಾದ ಕು.ಅಶ್ವಿನಿ ಪೈ ಹಾಗೂ ದಿವ್ಯಾ ನಾಯ್ಕ ಇವರನ್ನು ಪುರಸ್ಕರಿಸಲಾಯಿತು.  ಹಿರಿಯ ವಿದ್ಯಾರ್ಥಿಗಳಾದ ಕು.ವೈಶಾಲಿ ನಾಯ್ಕ ಕಾರ್ಯಕ್ರಮವನ್ನು ನಿರೂಪಿಸಿದರು, ಕು.ಕೃತಿಕಾ ನಾಡಕರ್ಣಿ ಸ್ವಾಗತಿಸಿದರು ಹಾಗೂ ಕು.ಕೇಶವ ನಾಯ್ಕ ಗೌರವ ವಂದಿಸಿದರು. ನಂತರ ನಡೆದ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ  ಎಲ್ಲರನ್ನು ಮೆಚ್ಚಿಸುವಲ್ಲಿ ಯಶಸ್ವಿಯಾಯಿತು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...