ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟ್ ಅಳೇಕೋಡಿ ವತಿಯಿಂದ ಪ್ರತಿಭಾ ಪುರಸ್ಕಾರ

Source: SO NEWS | By MV Bhatkal | Published on 21st October 2021, 10:03 PM | Coastal News | Don't Miss |

ಭಟ್ಕಳ:ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸ್ಟ್ ಅಳೇಕೋಡಿ, ಭಟ್ಕಳ ಇದರ ಆಶ್ರಯದಲ್ಲಿ ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮುದಾಯ ಭವನದಲ್ಲಿ 2019-20 ಮತ್ತು 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಪಡೆದ ಭಟ್ಕಳ ತಾಲೂಕಿನ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮಾಜಿ ಶಾಸಕ ಮಂಕಾಳು ವೈದ್ಯ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪ್ರತಿಭೆಗೆ ಯಾವುದೇ ಜಾತಿ, ಧರ್ಮ ಭೇದ ಇರುವುದಿಲ್ಲ. ಭಟ್ಕಳ ಅಳೇಕೋಡಿಯಲ್ಲಿ ನಡೆಯುತ್ತಿರುವ ಪ್ರತಿಭಾ ಪುರಸ್ಕಾರ ವಿಶೇಷತೆಯನ್ನು ಹೊಂದಿದೆ, ಭಟ್ಕಳದಲ್ಲಿ ಅಸಂಖ್ಯಾತ ಪ್ರತಿಭೆಗಳು ಇದ್ದು, ಐಎಎಸ್, ಐಎಫ್‌ಎಸ್‌ನಂತಹ ಉನ್ನತ ಪದವಿಯ ಕೊರತೆಯನ್ನು ನೀಗಿಸಲು ಪಣ ತೊಡಬೇಕಾಗಿದೆ. ನಿಮ್ಮ ಬೆಂಬಲಕ್ಕೆ ದಾನಿಗಳು ಇದ್ದಾರೆ ಎಂದರು. ಭಟ್ಕಳ ಅಳೇಕೋಡಿ ಶ್ರೀ ಮಾರಿಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷ ರಾಮಾ ಮೊಗೇರ ಮಾತನಾಡಿ, ಅನ್ವೇಕೋಡಿ ಶ್ರೀದೇವಿಯ ಕೃಪೆಯಿಂದ ಹಲವು ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಮುಂದಿನ ದಿನಗಳಲ್ಲಿ ಬಡ ಜನರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ಸಮುದಾಯ ಭವನವೊಂದು ಸದ್ಯದಲ್ಲಿಯೇ ಲೋಕಾರ್ಪಣೆಗೊಳ್ಳಲಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ ಮಾತನಾಡಿ, ಪ್ರತಿಭೆ ಯಾರ ಸ್ವತ್ತೂ ಅಲ್ಲ, ಅವಿರತ ಪರಿಶ್ರಮ ಯಶಸ್ಸನ್ನು ತಂದು ಕೊಡುತ್ತದೆ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಮಾಜಕ್ಕೆ ಕೊಡುಗೆ ನೀಡಬೇಕು, ಪ್ರತಿಭಾ ಪುರಸ್ಕೃತರು ಇಷ್ಟಕ್ಕೇ ತೃಪ್ತರಾಗಬಾರದು. ಪಾಲಕರು ಪ್ರತಿಷ್ಠೆಗೆ ಜೋತು ಬಿದ್ದು ಮಕ್ಕಳ ಮೇಲೆ ಒತ್ತಡ ಹೇರಬಾರದು, ಮಕ್ಕಳ ಆಸಕ್ತಿಯನ್ನು ಗಮನಿಸಿ ಪ್ರೋತ್ಸಾಹಿಸಬೇಕು. ಮಕ್ಕಳ ಚಟುವಟಿಕೆಗಳ ಬಗ್ಗೆ
ಅವಲೋಕನ ನಡೆಸಬೇಕು, ತಪ್ಪುಗಳನ್ನು ತಿದ್ದಿ ಮುನ್ನಡೆಸಬೇಕು ಎಂದು ವಿವರಿಸಿದರು. ಶ್ರೀ ದುರ್ಗಾದೇವಿ ಚಾರಿಟೇಬಲ್ ಟ್ರಸಿನ ಅಧ್ಯಕ್ಷ ತಿಮ್ಮಪ್ಪ ಹೊನ್ನಿಮನೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯದರ್ಶಿ ನಾರಾಯಣ ದೈಮನೆ ಎಲ್ಲರನ್ನೂ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಅರವಿಂದ ಪೈ ವರದಿಯನ್ನು ವಾಚಿಸಿದರು. ವೇದಿಕೆಯಲ್ಲಿ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹನುಮಂತ ನಾಯ್ಕ, ಶಿರಾಲಿ ಗ್ರಾಮ ಪಂಚಾಯತ ಅಧ್ಯಕ್ಷೆ ರೇವತಿ ನಾಯ್ಕ, ಉಪಾಧ್ಯಕ್ಷ ಭಾಸ್ಕರ ದೈಮನೆ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಯಲ್ಲಮ್ಮ. ಅಳೇಕೋಡಿ ಮೀನುಗಾರಿಕಾ ಸಹಕಾರಿ ಸಂಘದ ಅಧ್ಯಕ್ಷ ವಿಠಲ್ ದೈಮನೆ, ಉದ್ಯಮಿ ಬಾಬು ಮೊಗೇರ, ರಾದವ ಮೊಗೇರ, ಮಂಜುನಾಥ ಮೊಗೇರ, ಬಿಳಿಯಾ ನಾಯ್ಕ, ದೇವಸ್ಥಾನದ ಅರ್ಚಕ ನರಸಿಂಹ ಪುರಾಣಿಕ, ವ್ಯವಸ್ಥಾಪಕ ರಾಜು ಮೊಗೇರ, ಶಿಕ್ಷಕ ದೇವಪ್ಪ ಮೊದಲಾದವರು ಉಪಸ್ಥಿತರಿದ್ದರು. ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಆಲ್ವೇಕೋಡಿ ಇದರ ಮುಖ್ಯೋಪಾಧ್ಯಾಯ ಕೆ.ಬಿ.ಮಡಿವಾಳ, ನಾಗರಾಜ ಮೊಗೇರ, ರಾಜೀವಿ ಮೊಗೇರ ಕಾರ್ಯಕ್ರಮ ನಿರೂಪಿಸಿದರು. ಕಳೆದ 2 ವರ್ಷಗಳ ಅವಧಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ 365 ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.

Read These Next

ಕಾರವಾರ: ಚುನಾವಣಾ ವೀಕ್ಷಕರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ವೀಕ್ಷಣೆ; 17 ನಾಮಪತ್ರಗಳು ತಿರಸ್ಕೃತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬಂಧಿಸದಂತೆ ಜಿಲ್ಲೆಗೆ ಭಾರತ ಚುನಾವಣಾ ಆಯೋಗದಿಂದ ವೀಕ್ಷಕರಾಗಿ ನೇಮಕಗೊಂಡಿರುವ ರಾಜೀವ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...