ಭಟ್ಕಳದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಪೂರ್ವ ಭಾವಿ ಸಭೆ

Source: S.O. News Service | By MV Bhatkal | Published on 15th January 2021, 9:13 PM | Coastal News | Don't Miss |

ಭಟ್ಕಳ: ಜ.26ರ ಗಣರಾಜ್ಯೋತ್ಸವ ಆಚರಣೆಯ ಪ್ರಯುಕ್ತ ಪೂರ್ವಭಾವಿ ಸಭೆಯು ಭಟ್ಕಳ ಸಹಾಯಕ ಆಯುಕ್ತ ಭರತ್ ಅಧ್ಯಕ್ಷತೆಯಲ್ಲಿ ಇಲ್ಲಿನ ತಹಸೀಲ್ದಾರ ಕಚೇರಿಯಲ್ಲಿ ನಡೆಯಿತು. 
 ಸರಕಾರಿ ಶಿಷ್ಟಾಚಾರ ಹಾಗೂ ಕೋವಿಡ್ ತಡೆ ನಿಯಮ ಪಾಲನೆಯೊಂದಿಗೆ ಈ ಬಾರಿ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಗುವುದು, ತಾಲೂಕಿನ ಪ್ರತಿ ಕಾಲೇಜು ವತಿಯಿಂದ ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶನಕ್ಕೆ ಅವಕಾಶ ನೀಡಲಾಗಿದೆ. ಸ್ಕೌಟ್ಸ್ ಗೈಡ್ಸ, ಎನ್‍ಸಿಸಿ, ಪೊಲೀಸ್, ಫಾರೆಸ್ಟ್, ಅಗ್ನಿಶಾಮಕದಳ, ಕರಾವಳಿ ಕಾವಲು ಪಡೆ ಜಂಟಿಯಾಗಿ ಪಥಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ ಎಂದು ಸಭೆಯಲ್ಲಿ ತಿಳಿಸಲಾಯಿತು. ತಹಸೀಲ್ದಾರ ಎಸ್.ರವಿಚಂದ್ರ, ತಾಪಂ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ, ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ, ಪುರಸಭಾ ಮುಖ್ಯಾಧಿಕಾರಿ ದೇವರಾಜ, ಜಾಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಅಜಯ್ ಭಂಡಾರಕರ್ ಸೇರಿದಂತೆ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಇಲ್ಲಿನ ಮಜ್ಲಿಸೇ ಇಸ್ಲಾ ವ ತಂಜೀಮ್ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...