ಪ್ರಸವ ಪೂರ್ವ ಲಿಂಗಪತ್ತೆ ತಡೆ ಕಾಯ್ದೆ ಕಾರ್ಯಕ್ರಮ

Source: so news | Published on 22nd March 2020, 12:06 AM | Coastal News | Don't Miss |

ಮಂಗಳೂರು:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟೀ ಆಶ್ರಯದಲ್ಲಿ ಜರುಗಿದ ಮಗಳನ್ನು ಉಳಿಸಿ, ಮಗಳನ್ನು ಬೆಳಸಿ ಕಾರ್ಯಕ್ರಮದ ಅಂಗವಾಗಿ ಪ್ರಸವ ಪೂರ್ವ ಲಿಂಗಪತ್ತೆ ತಡೆ ಕಾಯ್ದೆ ಕಾರ್ಯಕ್ರಮವನ್ನು  ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು  ಉದ್ಫಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿಲ್ಪ ಎ.ಜಿ., ಲಿಂಗ ಪತ್ತೆ ತಂತ್ರಜ್ಞಾನವು ದುರ್ಬಳಕೆಯಾಗಿ ಗರ್ಭಸ್ಥ ಶಿಶು ಹೆಣ್ಣು ಎಂದು ಕಂಡುಬಂದ ತಕ್ಷಣ ಅದನ್ನು ಗರ್ಭದಲ್ಲೇ ಕೊಲೆ ಮಾಡುವ ಪ್ರವೃತ್ತಿ ದೇಶದಾದ್ಯಂತ ಬೆಳೆದು ಬಂದಿದೆ. ಇದರ ಪರಿಣಾಮದಿಂದ ಪುರುಷರು ಮತ್ತು ಮಹಿಳೆಯರ ಅನುಪಾತದಲ್ಲಿ ವ್ಯತ್ಯಾಸಗಳುಂಟಾಗುತ್ತದೆ, ಮಹಿಳಾ ಸ್ವಯಂ ಸೇವಾ ಸಂಸ್ಥೆಗಳು, ಆರೋಗ್ಯ ಸಂಸ್ಥೆಗಳು, ಗ್ರಾಮಮಟ್ಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಆರೋಗ್ಯ ಕರ್ತೆಯರು, ಚುನಾಯಿತ ಮಹಿಳಾ ಪ್ರತಿನಿಧಿಗಳು ಸಂಘಟಿತರಾಗಿ ಕಾರ್ಯನಿರ್ವಹಿಸಿದರೆ ಸ್ತ್ರೀ ಭ್ರೂಣ ಹತ್ಯೆ ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳಾ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ವಹಿಸಿದ್ದರು.  ಕಾರ್ಮಿಕಾಧಿಕಾರಿ ವಿಲ್ಮಾ, ನ್ಯಾಯವಾದಿ ನಿಕೇಶ್ ಶೆಟ್ಟಿ, ಮಕ್ಕಳ ಅಭಿವೃದ್ಧಿ ಸಮಿತಿ ಅಧ್ಯಕ್ಷ ರೆನ್ನಿ ಡಿ ಸೋಜಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಸುಮಾರು 400 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...