ಚುನಾವಣಾ ಜಾಹೀರಾತುಗಳಿಗೆ ಪೂರ್ವಾನುಮತಿ ಪಡೆಯುವುದು ಕಡ್ಡಾಯ: ಎನ್.ಮಂಜುಶ್ರೀ

Source: so news | By MV Bhatkal | Published on 13th March 2019, 12:49 AM | State News | Don't Miss |


ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಿಗೆ ನೀಡುವ ಜಾಹೀರಾತು, ಸಾಮಾಜಿಕ ಜಾಲತಾಣಗಳ ಜಾಹೀರಾತು ಹಾಗೂ ಕಾಸಿಗಾಗಿ ಸುದ್ಧಿ ಪ್ರಕಟಣೆಗಳ ಮೇಲೆ ನಿಗಾವಹಿಸಲು ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣಿಕರಣ ಹಾಗೂ ಕಣ್ಗಾವಲು ಸಮಿತಿಯನ್ನು ರಚಿಸಲಾಗಿದ್ದು ಪಕ್ಷ ಅಥವಾ ಚುನಾವಣಾ ಅಭ್ಯರ್ಥಿಗಳ ರಾಜಕೀಯ ಜಾಹೀರಾತುಗಳಿಗೆ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ ಎನ್.ಮಂಜುಶ್ರೀ ಅವರು ತಿಳಿಸಿದರು. 
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣಿಕರಣ ಹಾಗೂ ಕಣ್ಗಾವಲು ಸಮಿತಿಯ ಕಾರ್ಯಗಳ ಕುರಿತ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲಾಮಟ್ಟದ ಮಾಧ್ಯಮ ಪ್ರಮಾಣಿಕರಣ ಹಾಗೂ ಕಣ್ಗಾವಲು ಸಮಿತಿಯಿಂದ ವಿದ್ಯುನ್ಮಾನ ಮಾಧ್ಯಮ, ರೇಡಿಯೋ, ಕೇಬಲ್ ನೆಟ್‍ವರ್ಕ್, ಸಾಮಾಜಿಕ ಜಾಲತಾಣ, ಬಲ್ಕ್ ಎಸ್‍ಎಂಎಸ್ ಮೂಲಕ ಚುನಾವಣಾ ಜಾಹೀರಾತು ನೀಡುವವರು ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಪಕ್ಷ ಅಥವಾ ಅಭ್ಯರ್ಥಿಯು ನಿಗದಿತ ಅರ್ಜಿ ನಮೂನೆಯಲ್ಲಿ ಎಲ್ಲ ಅವಶ್ಯಕ ವಿವರ ಹಾಗೂ ಜಾಹಿರಾತು ವಿಷಯದ ಸಂಪೂರ್ಣ ವಿವರದ ದೃಢೀಕರಿಸಿದ ಸ್ಕ್ರಿಪ್ಟ್‍ನ್ನು ತಲಾ ಎರಡು ಪ್ರತಿಗಳನ್ನು ಸಲ್ಲಿಸಬೇಕು. ಜಾಹೀರಾತು ತಯಾರಿಕಾ ವೆಚ್ಚವನ್ನು ಹಾಗೂ ರೇಡಿಯೋ, ಕೇಬಲ್ ನೆಟ್‍ವರ್ಕ್, ಬಲ್ಕ್ ಎಸ್‍ಎಂಎಸ್ ಹಾಗೂ ವಿದ್ಯುನ್ಮಾನ ಮಾಧ್ಯಮದಗಳಲ್ಲಿ ಪ್ರದರ್ಶಿಸುವ ವೇಳಾ ಪಟ್ಟಿ ಹಾಗೂ ವೆಚ್ಚವನ್ನು ವಿವರವಾಗಿ ನೀಡಬೇಕು ಎಂದು ಅವರು ತಿಳಿಸಿದರು.
ಜಿಲ್ಲಾಮಟ್ಟದ ಮಾಧ್ಯಮ ಪ್ರಮಾಣಿಕರಣ ಹಾಗೂ ಕಣ್ಗಾವಲು ಸಮಿತಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಕಾಸಿಗಾಗಿ ಸುದ್ಧಿಯ ಪ್ರಕಟಣೆಯ ಬಗ್ಗೆ ಪರಿಶೀಲಿಸಬೇಕು. ಮುದ್ರಣ ಮಾಧ್ಯಮ, ವಿದ್ಯುನ್ಮಾನ ಮಾಧ್ಯಮ, ರೇಡಿಯೋ, ಕೇಬಲ್ ನೆಟ್‍ವರ್ಕ್, ಸಾಮಾಜಿಕ ಜಾಲತಾಣಗಳು ಸೇರಿದಂತೆ ಎಲ್ಲಾ ಮಾಧ್ಯಮಗಳ ಮೇಲೆ ನಿಗಾವಹಿಸಿ ಕಾಸಿಗಾಗಿ ಸುದ್ಧಿ ಎಂದು ಅನುಮಾನಿಸಲಾದ ಸುದ್ಧಿಯನ್ನು ಪರಿಶೀಲಿಸಿ ಸಂಬಂಧಿಸಿದವರಿಗೆ ನೋಟಿಸ್ ನೀಡಿ ವಿವರಣೆ ಪಡೆಯಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಕಾಸಿಗಾಗಿ ಸುದ್ಧಿ ಅಂತಹ ಸುದ್ಧಿಗಳು ಕಂಡುಬಂದಲ್ಲಿ ಕೂಡಲೇ ಪರಿಶೀಲಿಸಿ ಮಾಹಿತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಎಂ.ಜೆ.ರೂಪ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...