ಗರ್ಭಿಣಿಯರು ಪೌಷ್ಠಿಕ ಆಹಾರ ಸೇವಿಸುವುದರಿಂದ ಸಧೃಡ ಮಕ್ಕಳು ಬೆಳೆಯಲು ಸಾಧ್ಯ ನ್ಯಾಯಾಧೀಶ ಗಂಗಾಧರ.ಕೆ.ಎನ್

Source: so news | Published on 8th September 2019, 11:53 PM | State News | Don't Miss |


ಹುಬ್ಬಳ್ಳಿ: ಅಂಗನವಾಡಿಗಳಲ್ಲಿ ನೀಡುವ ಎಲ್ಲಾ ಬಗೆಯ ಪೌಷ್ಠಿಕಾಂಶ ಯುಕ್ತ ಆಹಾರವನ್ನು ಗರ್ಭಿಣಿಯರು ಸೇವಿಸಬೇಕು. ಇದರಿಂದ ಜನಿಸುವ ಮಕ್ಕಳು ಸಧೃಡವಾಗಿರುವುದರಿಂದ ಉತ್ತಮ ಬೆಳವಣಿಗೆ ಹೊಂದುತ್ತಾರೆ ಎಂದು ಹುಬ್ಬಳ್ಳಿ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಗಂಗಾಧರ.ಕೆ.ಎನ್ ಹೇಳಿದರು.
ಹುಬ್ಬಳ್ಳಿ ಮಿನಿ ವಿಧಾನಸೌಧದ ತಾ.ಪಂ ಸಭಾಭವನದಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣ್ ಅಭಿಯಾನ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
1973 ರಿಂದ ಪೌಷ್ಟಿಕ ಆಹಾರ ಸಪ್ತಾಹ ಹಾಗೂ ಪೋಷಣಾ ಅಭಿಯಾನವನ್ನು ಸರ್ಕಾರದಿಂದ ನಡೆಸಿಕೊಂಡು ಬರಲಾಗುತ್ತಿದೆ. ಆರೋಗ್ಯವಂತ ವ್ಯಕ್ತಿಗಳು ಈ ನಮ್ಮ ದೇಶದ ಆಸ್ತಿ. ಚಿಕ್ಕ ಮಕ್ಕಳು ಸಧೃಡವಾಗಿರಲು ಉತ್ತಮ ಆಹಾರ ಸೇವನೆ ಮಾಡಬೇಕು. ಮನುಷ್ಯ ಆರೋಗ್ಯವಂತನಾಗಿ ಬದುಕುವುದೇ ನಿಜವಾದ ಜೀವನ. ಅಂಗನವಾಡಿಗಳಲ್ಲಿ ಉತ್ತಮ ಗುಣಮಟ್ಟದ ಆಹಾರ ದೊರೆಯುತ್ತದೆ. ಚಿಕ್ಕಂದಿನಲ್ಲಿ ನಾನು ಸಹ ಅಂಗನವಾಡಿಗಳಿಂದ ಬಂದ ಆಹಾರವನ್ನೇ ಸ್ವಿಕರಿಸಿ ಸಧೃಡನಾಗಿ ಬೆಳದಿದ್ದೇನೆ. ಅಂಗನವಾಡಿಗಳಲ್ಲಿ ಎಲ್ಲಾ ಬಗೆಯ ಪೋಷಕಾಂಶ ಹಾಗೂ ಜೀವಸತ್ವಗಳು ಗರ್ಭಿಣಿಯರಿಗೆ ದೊರಕುವ ಹಾಗೆ ಆಹಾರಗಳನ್ನು ನೀಡಲಾಗುತ್ತದೆ. ಈ ಆಹಾರಗಳನ್ನು ಸೇವಿಸುವುದರಿಂದ ಗರ್ಭಿಣಿಯರು ಯಾವುದೇ ಅನಾರೋಗ್ಯದಿಂದ ಬಳಲುವುದಿಲ್ಲ. ಮಕ್ಕಳು ಸಹ ಆರೋಗ್ಯವಂತರಾಗಿರುತ್ತಾರೆ. ಸರ್ಕಾರದ ಈ ಕಾರ್ಯಕ್ರಮ ಸಂಪೂರ್ಣವಾಗಿ ಯಶಸ್ವಿಯಾಗಲು ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಹೆಣ್ಣುಮಕ್ಕಳೆ ಕಾರಣ. ಇವರ ಕಾರ್ಯವನ್ನು ಸಂಬಳದಿಂದ ನಿರ್ಧಾರ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬ ವ್ಯಕ್ತಿಯ ಜೀವನ ತಾಯಂದಿರು ನೀಡಿದ ಭಿಕ್ಷೆ. ಇದನ್ನು ಅರಿತು ಪ್ರತಿಯೊಬ್ಬರು ಸ್ತ್ರೀಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಗರ್ಭಿಣಿಯರಿಗೆ ಉಡಿತುಂಬುವ ಮತ್ತು ಚಿಕ್ಕ ಮಕ್ಕಳಿಗೆ ಅನ್ನಪ್ರಾಷಣ ಕಾರ್ಯಕ್ರಮವನ್ನು ನೇರವೆರಿಸಲಾಯಿತು.
ತಾಲೂಕು ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ನ್ಯಾ.ಮಹೇಶ್ ಪಾಟೀಲ್, ಜಿ.ಪಂ, ಸಿ.ಇ.ಓ ಡಾ. ಬಿ.ಸಿ.ಸತೀಶ, ಹುಬ್ಬಳ್ಳಿ ಗ್ರಾಮೀಣ ತಹಶಿಲ್ದಾರ್ ಸಂಗಪ್ಪ, ತಾ.ಪಂ.ಇ.ಓ, ಎಂ.ಎಂ.ಸವದತ್ತಿ, ವಕೀಲರ ಸಂಘದ ಅಧ್ಯಕ್ಷ ಅಶೋಕ. ಬಳಿಗಾರ, ಸಹಾಯಕ ಸರ್ಕಾರಿ ಅಭಿಯೋಜಕ ಪ್ರಕಾಶ.ಎಸ್.ಸುಂಕದ, ಸೇರಿದಂತೆ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎನ್.ಎ.ಪುಟ್ಟಪ್ಪನವರ ಸ್ವಾಗತಿಸಿದರು, ಶಹರ ಮೇಲ್ವಿಚಾರಕಿ ದೀಪಾ.ಸಿ.ಮೇದಾರ ನಿರೂಪಿಸಿ ವಂದಿಸಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...