ಸಿವಿಲ್ ಜಡ್ಜ್ ಹುದ್ದೆಗೆ ಪೂರ್ವಭಾವಿ ಪರೀಕ್ಷೆ. ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Source: SO News | By Laxmi Tanaya | Published on 25th September 2020, 8:00 AM | State News | Don't Miss |

ಶಿವಮೊಗ್ಗ :  ಹೈಕೋರ್ಟ್ ಆಫ್ ಕರಸರ್ಕಾರಿ್ನಾಟಕವು ಸಿವಿಲ್ ಜಡ್ಜ್ ಹುದ್ದೆಗೆ ಪೂರ್ವಭಾವಿ ಪರೀಕ್ಷೆಯನ್ನು ನಗರದ ಬಿಹೆಚ್.ರಸ್ತೆ, ಸೈನ್ಸ್ ಮೈದಾನದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜು ಕೇಂದ್ರದಲ್ಲಿ ಸೆಪ್ಟಂಬರ್  27 ರಂದು ನಡೆಯಲಿದ್ದು,  ಪರೀಕ್ಷಾ ದಿನದಂದು ಬೆಳಿಗ್ಗೆ  7.30 ರಿಂದ ಸಂಜೆ 5.30ರವರೆಗೆ ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ 200 ಮೀ ಫಾಸಲೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಆದೇಶ ನೀಡಿದ್ದಾರೆ.

 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಗೆ ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳನ್ನು ಹೊರತುಪಡಿಸಿ ಇತರೆ ವ್ಯಕ್ತಿಗಳು ಪರೀಕ್ಷಾ ಕೇಂದ್ರಗಳೊಳಗೆ ಪ್ರವೇಶಿಸುವುದನ್ನು ನಿಷೇಧಿಸಿದೆ.  ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಟೈಪಿಂಗ್, ಝೆರಾಕ್ಸ್ ಅಂಗಡಿಗಳು ತೆರೆಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಪರೀಕ್ಷಾ ಕೇಂದ್ರದ ಮುಖ್ಯದ್ವಾರದಲ್ಲಿ ಕಡ್ಡಾಯವಾಗಿ ಆರಕ್ಷಕ ಸಿಬ್ಬಂದಿಯನ್ನು ನಿಯೋಜಿಸಿ, ಅನಗತ್ಯ ವ್ಯಕ್ತಿಗಳ ಚಲನ-ವಲನಗಳನ್ನು ನಿಯಂತ್ರಿಸಲು ಸಂಬಂಧಪಟ್ಟ ಠಾಣಾ ಮುಖ್ಯಸ್ಥರಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ. ಈ ನಿರ್ಬಂಧಿತ ಪ್ರದೇಶದ ಸುತ್ತಮುತ್ತಲಲ್ಲಿ ಐದು ಮತ್ತು ಐದಕ್ಕಿಂತ ಹೆಚ್ಚಿನ ಜನರು ಸೇರುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಮೊಬೈಲ್ ಬಳಕೆಯನ್ನು ನಿಷೇದಿಸಿ (ಭಾ.ದಂ.ಪ್ರ.ಸಂ.ಕಲಂ. 144) ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. 

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...