ಮುರ್ಡೇಶ್ವರದಲ್ಲಿ ನಡೆಯಲಿರುವ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

Source: so news | By MV Bhatkal | Published on 26th January 2023, 12:31 AM | Coastal News |

ಭಟ್ಕಳ: ಮುರ್ಡೇಶ್ವರದಲ್ಲಿ ಫೆ.17ರಂದು ನಡೆಯಲಿರುವ ಭಟ್ಕಳ ತಾಲೂಕಾ 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಎಲ್ಲರೂ ಕೈಜೋಡಿಸೋಣ ಎಂದು ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್. ಕರೆ ನೀಡಿದರು. 
ಅವರು ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತೆಗೆ ಸಂಬಂಧಿಸಿದಂತೆ ಸಹಾಯಕ ಆಯುಕ್ತರ ಕಚೇರಿಯಲ್ಲಿ ನಡೆದ ನಡೆದ ವಿವಿಧ ಇಲಾಖೆಗಳು ಹಾಗೂ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. 
ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ ನಿರ್ವಹಿಸಲು ವಿವಿಧ ಇಲಾಖೆಗಳು ನಿರ್ವಹಿಸಬೇಕಾದ ಜವಾಬ್ದಾರಿಗಳ ಕುರಿತು ತಿಳಿಸಿದರಲ್ಲದೇ ಸಮ್ಮೇಳನದ ಮೆರವಣಿಗೆಯಲ್ಲಿ ವಿವಿಧ ಇಲಾಖೆಗಳು ವ್ಯವಸ್ಥೆಗೊಳಿಸುವ  ಸ್ತಬ್ಧ ಚಿತ್ರಗಳಲ್ಲಿ ಭಟ್ಕಳ ತಾಲೂಕಿನ ಇತಿಹಾಸ, ಪರಂಪರೆಯನ್ನು ಬಿಂಬಿಸುವಂತ ಅಂಶಗಳಿರಲಿ ಎಂದು ಸೂಚಿಸಿದರು. 
ಕಸಾಪ ತಾಲೂಕಾ ಅಧ್ಯಕ್ಷ ಗಂಗಾಧರ ನಾಯ್ಕ ಸ್ವಾಗತಿಸಿ, ಮಾತನಾಡಿ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ವಿವರಗಳನ್ನು ಸಭೆಗೆ ನೀಡಿದರು.  ಸಭೆಯಲ್ಲಿ ತಹಶೀಲ್ದಾರ ಅಶೋಕ ಭಟ್, ತಾ.ಪಂ. ಕಾರ್ಯನಿರ್ವಹಣಾಧಿಖಾರಿ ಪ್ರಭಾಕರ ಚಿಕ್ಕನಮನೆ, ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ., ಜಾಲಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ರಾಮಚಂದ್ರ ವೆರ್ಣೇಕರ್, ಹಿರಿಯ ಸಾಹಿತಿ ಆರ್.ವಿ.ಸರಾಫ್, ಭಟ್ಕಳ ಅರ್ಬನ ಬ್ಯಾಂಕಿನ ಉಪಾಧ್ಯಕ್ಷ  ಎಂ.ಆರ್.ನಾಯ್ಕ, ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯರಾದ ಎಂ.ಪಿ.ಬಂಢಾರಿ, ವೆಂಕಟೇಶ ನಾಯ್ಕ ಆಸರಕೇರಿ, ನ್ಯೂ ಇಂಗ್ಲೀಷ್ ಪ.ಪೂ.ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶಾನಭಾಗ, ಜನತಾ ವಿದ್ಯಾಲಯದ ಪ್ರಾಂಶುಪಾಲ ಅಮೃತ್ ರಾಮರಥ, ಮುರ್ಡೇಶ್ವರ ಗ್ರಾಮೀಣ ಪ್ರತಿಷ್ಠಾನದ ಅಧ್ಯಕ್ಷ ಎಸ್.ಎಸ್.ಕಾಮತ್, ಲಯನ್ಸ ಕ್ಲಬ್ ಅಧ್ಯಕ್ಷ ಎಂ.ವಿ.ಹೆಗಡೆ, ಭುವನೇಶ್ವರಿ ಕನ್ನಡ ಸಂಘದ  ರಮೇಶ ನಾಯ್ಕ, ಸ್ಪಂದನ ಚಾರಿಟೇಬಲ್ ಟ್ರಸ್ಟ ಹಾಗೂ ಕ್ರಿಯಾಶೀಲ ಗೆಳೆಯರ ಸಂಘದ ಕಾರ್ಯದರ್ಶಿ ಪಾಂಡುರಂಗ ನಾಯ್ಕ,  ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಭಾಗೀರಥಿ ನಾಯ್ಕ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೋಹನ ನಾಯ್ಕ, ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟ, ಶಿಕ್ಷಣ ಇಲಾಖೆ, ಲೋಕೋಪಯೋಗಿ, ಪೋಲೀಸ ಇಲಾಖೆ, ಹೆಸ್ಕಾಂ, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪ್ರತಿನಿದಿಗಳು ಉಪಸ್ಥಿತರಿದ್ದರು.

Read These Next

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...