ವಿವಾದಿತ ಕಾಯ್ದೆಗಳಿಗೆ ರಾಷ್ಟ್ರಪತಿ ಅಂಕಿತ

Source: Vb | By I.G. Bhatkali | Published on 13th August 2023, 11:17 PM | National News |

ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಅಂಗೀಕಾರಗೊಂಡಿರುವ ನಾಲ್ಕು ಮಸೂದೆಗಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಶನಿವಾರ ಅಂಕಿತ ಹಾಕಿದ್ದಾರೆ. ಅವರ ಸಹಿಯೊಂದಿಗೆ ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣಾ ಮಸೂದೆ, ಜನನ ಮತ್ತು ಮರಣಗಳ ನೋಂದಣಿ (ತಿದ್ದುಪಡಿ) ಮಸೂದೆ, ಜನ ವಿಶ್ವಾಸ್ (ವಿಧಿಗಳ ತಿದ್ದುಪಡಿ) ಮಸೂದೆ ಮತ್ತು ದಿಲ್ಲಿ ರಾಷ್ಟ್ರ ರಾಜಧಾನಿ ಭೂಭಾಗ ಸರಕಾರ (ತಿದ್ದುಪಡಿ) ಮಸೂದೆಗಳು ಈಗ ಕಾನೂನುಗಳಾಗಿವೆ.

ಈ ಪೈಕಿ ಎರಡು ಮಸೂದೆಗಳಿಗೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.

ದಿಲ್ಲಿ ರಾಷ್ಟ್ರ ರಾಜಧಾನಿ ಭೂಭಾಗ ಸರಕಾರ (ತಿದ್ದುಪಡಿ) ಮಸೂದೆ, 2023ನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್ 1ರಂದು ಲೋಕಸಭೆಯಲ್ಲಿ ಮಂಡಿಸಿದ್ದರು. ಈ ಮಸೂದೆಯು ದಿಲ್ಲಿಯ ಅಧಿಕಾರಿಗಳ ನಿಯಂತ್ರಣವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಮಸೂದೆಯು ರಾಜ್ಯಸಭೆಯಲ್ಲಿ ಆಗಸ್ಟ್ 7ರಂದು ಅಂಗೀಕಾರಗೊಂಡಿತ್ತು. 131 ಸಂಸದರು ಮಸೂದೆಯ ಪರವಾಗಿ ಮತ ಹಾಕಿದರೆ, 102 ಸಂಸದರು ವಿರುದ್ಧವಾಗಿ ಮತ ಚಲಾಯಿಸಿದರು.

ಇದು ಸಂಸತ್‌ನಲ್ಲಿ ಈವರೆಗೆ ಮಂಡನೆಯಾದ ಮಸೂದೆಗಳಲ್ಲೇ ಅತ್ಯಂತ ಅಪ್ರಜಾಸತ್ತಾತ್ಮಕ ಮಸೂದೆ ಎಂಬುದಾಗಿ ಆಮ್ ಆದ್ದಿ ಪಕ್ಷವು ಬಣ್ಣಿಸಿದೆ.

ರಾಷ್ಟ್ರ ರಾಜಧಾನಿಯ ಅಧಿಕಾರಿಗಳ ಅಮಾನತು ಮತ್ತು ವಿಚಾರಣೆ ಮುಂತಾದ ಕ್ರಮಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಈ ಮಸೂದೆಯು ಕೇಂದ್ರ ಸರಕಾರಕ್ಕೆ ನೀಡುತ್ತದೆ.

ದಿಲ್ಲಿ ಜನರನ್ನು ಗುಲಾಮರಾಗಿಸಲು ಈ ಕಾನೂನನ್ನು ತರಲಾಗುತ್ತಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜಿವಾಲ್‌ ಬಣ್ಣಿಸಿದ್ದರು.

ಡಿಜಿಟಲ್ ವೈಯಕ್ತಿಕ ದತ್ತಾಂಶ ರಕ್ಷಣಾ ಮಸೂದೆಯನ್ನು ಮಣಿಪುರ ಹಿಂಸಾಚಾರದ ವಿಷಯದಲ್ಲಿ ಪ್ರತಿಪಕ್ಷಗಳ ಸದಸ್ಯರ ಘೋಷಣೆಗಳ ನಡುವೆ ಧ್ವನಿಮತದಿಂದ ಅಂಗೀಕರಿಸಲಾಗಿತ್ತು. ಈ ಮಸೂದೆಗೆ ಪ್ರತಿಪಕ್ಷಗಳು ಸೂಚಿಸಿರುವ ತಿದ್ದುಪಡಿಗಳನ್ನು ಧ್ವನಿಮತದಿಂದ ಸೋಲಿಸಲಾಯಿತು.

ಈ ಕಾಯ್ದೆಯು ವೈಯಕ್ತಿಕ ದತ್ತಾಂಶಗಳ ಬಹಿರಂಗಕ್ಕೆ 250 ಕೋಟಿ ರೂ. ದಂಡ ವಿಧಿಸುತ್ತದೆ. ಆನ್‌ಲೈನ್ ವೇದಿಕೆಗಳು ವ್ಯಕ್ತಿಗಳ ವೈಯಕ್ತಿಕ ದತ್ತಾಂಶಗಳನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ತಡೆಯುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ.

ಆದರೆ, ಈ ಕಾಯ್ದೆಯು ದೇಶವನ್ನು ಕಣ್ಣಾವಲು ನಿರತ ದೇಶವನ್ನಾಗಿ ಮಾಡುತ್ತದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ವ್ಯಕ್ತಿಯ ಒಪ್ಪಿಗೆಯಿಲ್ಲದೆ ವೈಯಕ್ತಿಕ ದತ್ತಾಂಶಗಳನ್ನು ವಿಶ್ಲೇಷಿಸಲು ಅವಕಾಶ ನೀಡಿದರೆ, ನಾಗರಿಕರ ಖಾಸಗಿತನದ ಮೂಲಭೂತ ಹಕ್ಕಿನ ಮೇಲೆ ಗಂಭೀರ ಪರಿಣಾಮಗಳನ್ನು ಬೀರಬಹುದಾಗಿದೆ ಎಂಬ ಆತಂಕವನ್ನು ಪ್ರತಿಪಕ್ಷಗಳು ವ್ಯಕ್ತಪಡಿಸಿವೆ.

ಈ ಕಣ್ಣಾವಲಿನಿಂದ ಸರಕಾರವನ್ನು ಹೊರಗಿಡಲಾಗಿದೆ. ಅದೂ ಅಲ್ಲದೆ, ಕೆಲವು ಕಂಪೆನಿಗಳಿಗೂ ವ್ಯಾಪಕ ವಿನಾಯಿತಿಗಳನ್ನು ನೀಡಲಾಗಿರುವುದು ವಿವಾದಕ್ಕೆ ಕಾರಣವಾಗಿದೆ.

ಈ ಕಾಯ್ದೆಯ ಕೆಲವು ವಿಧಿಗಳು ಪತ್ರಿಕಾ ಸ್ವಾತಂತ್ರ್ಯದ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಬಹುದಾಗಿದೆ ಎಂದು ಭಾರತೀಯ ಎಡಿಟರ್ಸ್ ಗಿಲ್ಡ್ ಕೂಡ ಆತಂಕ ವ್ಯಕ್ತಪಡಿಸಿತ್ತು. ಇದು ಪತ್ರಕರ್ತರು ಮತ್ತು ಅವರ ಮೂಲಗಳು ಸೇರಿದಂತೆ ನಾಗರಿಕರ ಮೇಲೆ ಕಣ್ಣಾವಲು ಇಡುವ ವ್ಯವಸ್ಥೆಯೊಂದನ್ನು ಸೃಷ್ಟಿಸುತ್ತದೆ ಎಂದು ಹೇಳಿಕೆಯೊಂದರಲ್ಲಿ ಅದು ಹೇಳಿದೆ.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...