ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಸೇರಿ ಉನ್ನತ ನಾಯಕರ ಸಮ್ಮುಖದಲ್ಲಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

Source: PTI | By MV Bhatkal | Published on 25th June 2022, 12:44 AM | National News |

ನವದೆಹಲಿ: 2022ನೇ ಸಾಲಿನ ರಾಷ್ಟ್ರಪತಿ ಚುನಾವಣೆಗೆ (President election) ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಒಡಿಶಾ ಮೂಲದ ಬುಡಕಟ್ಟು ಜನಾಂಗದ ಮಹಿಳೆ, ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು (Draupadi Murmu) ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ಸಂಪುಟದ ಉನ್ನತ ಸಚಿವರು, ಬಿಜೆಪಿ ಮತ್ತು ಎನ್ ಡಿಎ ಮೈತ್ರಿಕೂಟದ ರಾಜ್ಯಗಳ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಇಂದು ಮಧ್ಯಾಹ್ನ ದೆಹಲಿಯ ಸಂಸತ್ತು ಭವನದಲ್ಲಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು

ಅವರ ಉಮೇದುವಾರಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಮೊದಲು ಸೂಚಿಸಿದ್ದಾರೆ. ಮುರ್ಮು ಅವರ ಉಮೇದುವಾರಿಕೆಗೆ ಬಿಜೆಪಿ ನಾಲ್ಕು ಪ್ರತಿಯ ನಾಮಪತ್ರಗಳನ್ನು ಸಿದ್ಧಪಡಿಸಿತು. ಪ್ರಧಾನಿಯವರು ಮಾತ್ರವಲ್ಲದೆ, ಹಿರಿಯ ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ನಾಮಪತ್ರಕ್ಕೆ ಸಹಿ ಹಾಕಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಗುಜರಾತ್‌ ಸಿಎಂ ಭೂಪೇಂದರ್ ಪಟೇಲ್ ಸೇರಿದಂತೆ ಎಲ್ಲಾ ಬಿಜೆಪಿ ನೇತೃತ್ವದ ರಾಜ್ಯಗಳ ಮುಖ್ಯಮಂತ್ರಿಗಳು, ಹಾಗೆಯೇ ಪಕ್ಷದ ಮಹಿಳೆಯರು ಮತ್ತು ಬುಡಕಟ್ಟು ಸಂಸದರು ಮತ್ತು ಶಾಸಕರ ಸಂಪೂರ್ಣ ತಂಡ ಸಹ ಸಹಿ ಹಾಕಿದ್ದಾರೆ. 

ಎನ್‌ಡಿಎ ನಾಯಕರ ಜೊತೆಗೆ, ಮೈತ್ರಿಕೂಟದ ಭಾಗವಾಗಿರದ ವೈಎಸ್‌ಆರ್ ಕಾಂಗ್ರೆಸ್‌ನ ವಿಜಯಸಾಯಿ ರೆಡ್ಡಿ ಮತ್ತು ಬಿಜೆಡಿ ನಾಯಕ ಸಸ್ಮಿತ್ ಪಾತ್ರಾ ಅವರು ಎನ್ ಡಿಎ ನಾಮನಿರ್ದೇಶನವನ್ನು ಬೆಂಬಲಿಸಲು ಇಂದು ಸಂಸತ್ತಿನಲ್ಲಿದ್ದರು.

ಎಐಎಡಿಎಂಕೆ ನಾಯಕ ಓ ಪನೀರ್‌ಸೆಲ್ವಂ ಮತ್ತು ಜೆಡಿಯುನ ರಾಜೀವ್ ರಂಜನ್ ಸಿಂಗ್ ಇಂದು ಬೆಳಗ್ಗೆಯೇ ಸಂಸತ್ತಿಗೆ ಬಂದರು. 

ರಾಷ್ಟ್ರನಾಯಕರ ಪ್ರತಿಮೆಗಳಿಗೆ ಪುಷ್ಪ ನಮನ: ತಮ್ಮ ಪತ್ರಗಳನ್ನು ಸಲ್ಲಿಸುವ ಮೊದಲು, ಮುರ್ಮು ಅವರು ಮಹಾತ್ಮ ಗಾಂಧಿ, ಬಿಆರ್ ಅಂಬೇಡ್ಕರ್ ಮತ್ತು ಬಿರ್ಸಾ ಮುಂಡಾ ಅವರ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದರು. 

ರಾಷ್ಟ್ರಪತಿಯಾಗಿ ಆಯ್ಕೆಯಾಗಬೇಕಾದರೆ ಪ್ರತಿ ನಾಮನಿರ್ದೇಶನವು ಚುನಾಯಿತ ಪ್ರತಿನಿಧಿಗಳಲ್ಲಿ 50 ಪ್ರತಿಪಾದಕರು ಮತ್ತು 50 ಎರಡನೇ ಅನುಯಾಯಿಗಳನ್ನು ಹೊಂದಿರಬೇಕು. ಮುರ್ಮು ಅವರು ಆಯ್ಕೆಯಾದರೆ, ದೇಶದ ಮೊದಲ ಬುಡಕಟ್ಟು ಜನಾಂಗದ ರಾಷ್ಟ್ರಪತಿ ಮತ್ತು ಎರಡನೇ ಮಹಿಳೆ ಎನಿಸಿಕೊಳ್ಳಲಿದ್ದಾರೆ

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...