ಎಸ್ಸೆಸ್ಸೆಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ

Source: sonews | By Staff Correspondent | Published on 20th June 2020, 10:08 PM | State News |

ಶ್ರೀನಿವಾಸಪುರ: ಎಸ್ಸೆಸ್ಸೆಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಹೇಳಿದರು.

ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ  ಏರ್ಪಡಿಸಿದ್ದ ಸಮಾರಂಭದಲ್ಲಿ ಶ್ರೀನಿವಾಸಪುರ ರೋಟರಿ ಸಂಸ್ಥೆ ಹಾಗೂ ಬೆಂಗಳೂರಿನ ಆರ್ಕಿಡ್‌ ಸಂಸ್ಥೆ ವತಿಯಿಂದ ನೀಡಲಾದ ಮಾಸ್ಕ್‌ ವಿತರಿಸಿ ಮಾತನಾಡಿ, ತಾಲ್ಲೂಕಿನಲ್ಲಿ 13 ಪರೀಕ್ಷಾ ಕೇಂದ್ರಗಳಲ್ಲಿ 2859 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸೋಂಕು ನಿವಾರಕ ಔಷಧ ಸಿಂಪರಣೆ ಮಾಡಲಾಗಿದೆ. ಪರೀಕ್ಷೆಗೆ ಬರೆಯಲು ಬರುವ ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಸರ್‌ ಹಾಕಲಾಗುವುದು. ಥರ್ಮಲ್‌ ಸ್ಕ್ಯಾನಿಂಗ್‌ ಮಾಡಿ, ಮಾಸ್ಕ್‌ನಿಂದಿಗೆ ಒಳಗೆ ಬಿಡಲಾಗುವುದು ಎಂದು ಹೇಳಿದರು.

ಆರ್ಕಿಡ್‌ ಸಂಸ್ಥೆಯ ಟೀಚ್‌ ಮಿಷನ್‌ ಘಟಕದ ಜಿಲ್ಲಾ ನಿರ್ದೇಶಕ ಆರ್‌.ಎಸ್‌.ಗುರುನಾಗೇಶ್‌ ಮಾತನಾಡಿ, ತಾಲ್ಲೂಕಿನ ವಿದ್ಯಾರ್ಥಿಗಳಿಗೆ ವಿತರಿಸಲು 3 ಸಾವಿರ ಮಾಸ್ಕ್‌ ನೀಡಲಾಗಿದೆ. ಸಂಸ್ಥೆಯಿಂದ ಈವರೆಗೆ 2.5ಲಕ್ಷ ಮಾಸ್ಕ್‌ ವಿತರಿಸಲಾಗಿದೆ ಎಂದು ಹೇಳಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಆರ್‌.ವಿ.ರವೀಂದ್ರಯ್ಯ ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳು ವೈಯಕ್ತಿಕ ಸ್ವಚ್ಛತೆ ಪಾಲಿಸಬೇಕು. ಕೊರೊನಾಗೆ ಹೆದರುವ ಅಗತ್ಯವಿಲ್ಲ. ಎಚ್ಚರಿಕೆ ವಹಿಸಬೇಕು. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ಹೇಳಿದರು.

ಮುಖಂಡರಾದ ಕೃಷ್ಣಮೂರ್ತಿ, ಬೈರೇಗೌಡ, ಎಲ್‌.ಗೋಪಾಲಕೃಷ್ಣ, ಎಸ್‌.ವಿ.ಸುಧಾಕರ್‌, ರವೀಂದ್ರ, ವೆಂಕಟೇಶ್‌, ಎನ್‌.ಬಿ.ಗೋಪಾಲಗೌಡ ಇದ್ದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...