ಕೋವಿಡ್ ಎರಡನೇ ಅಲೆ ಬಗ್ಗೆ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್

Source: SO News | By Laxmi Tanaya | Published on 21st April 2021, 8:10 AM | National News |

ಹೊಸದಿಲ್ಲಿ : ವಲಸೆ ಕಾರ್ಮಿಕರು ತಮ್ಮ ಸ್ಥಳದಲ್ಲೇ ಉಳಿದುಕೊಳ್ಳಬೇಕು. ಅವರಿಗೆ ಲಸಿಕೆಯನ್ನು ಒದಗಿಸಲಾಗುವುದು ಹಾಗೂ ಅವರು ಉದ್ಯೋಗಗಳನ್ನು ಕಳೆದುಕೊಳ್ಳುವುದಿಲ್ಲವೆಂದು ಭರವಸೆ ನೀಡುವೆ. 

# ದೇಶದ ವಿವಿಧ ಭಾಗಗಳಲ್ಲಿ ಆಮ್ಲಜನಕದ ಸಿಲಿಂಡರ್‌ಗಳಿಗಾಗಿ ಬೇಡಿಕೆ ಹೆಚ್ಚಾಗುತ್ತಿದೆ. ಕೇಂದ್ರ, ರಾಜ್ಯ ಸರಕಾರ ಹಾಗೂ ಖಾಸಗಿ ವಲಯವು ಕೋವಿಡ್-19 ರೋಗಿಗಳ ಚಿಕಿತ್ಸೆಗೆ ಆಮ್ಲಜನಕ ಲಭ್ಯವಾಗುವಂತೆ ಮಾಡಲು ಯತ್ನಿಸಲಿವೆ. ಈ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಆಸ್ಪತ್ರೆಗಳಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆಗಾಗಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲು ಶ್ರಮಿಸಲಾಗುತ್ತಿದೆ. ಕೆಲವು ನಗರಗಳಲ್ಲಿ ಕೋವಿಡ್-19 ರೋಗಿಗಳ ಚಿಕಿತ್ಸೆಗೆಂದೇ ದೊಡ್ಡ ಮಟ್ಟದ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ. 

# ಭಾರತವು ಎರಡನೇ ಮೇಡ್ ಇನ್ ಇಂಡಿಯಾ ಲಸಿಕೆಗಳನ್ನು ಸಿದ್ಧಪಡಿಸಿದೆ. ಈವರೆಗೆ 12 ಕೋಟಿಗೂ ಅಧಿಕ ವ್ಯಾಕ್ಸಿನ್‌ನ ಡೋಸ್‌ಗಳನ್ನು ನೀಡಲಾಗಿದೆ. ಈ ಆರೋಗ್ಯಕಾರ್ಯಕರ್ತರ ನೋವು, ಬವಣೆಯನ್ನು ನಾನು ಅರಿತಿದ್ದೇನೆ. ಯಾವುದೇ ಸನ್ನಿವೇಶದಲ್ಲಿಯೂ ನಾವು ತಾಳ್ಮೆ ಕಳೆದುಕೊಳ್ಳಬಾರದು.

Read These Next

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಬಿಜೆಪಿ ಶಾಮಿಲು; ತೀರ್ಥಹಳ್ಳಿಯಲ್ಲಿ ಬಿಜೆಪಿ ಸದಸ್ಯನನ್ನು ಬಂಧಿಸಿದ NIA

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (NIA) ...

ಪತಂಜಲಿಯಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ; ಕಾನೂನು ಕ್ರಮ ಎದುರಿಸಲು ಸಿದ್ದರಾಗಿ ಪತಂಜಲಿಗೆ ಸುಪ್ರೀಂ ಕೋರ್ಟ್ ಚಾಟಿ

ವೈಜ್ಞಾನಿಕ ತಳಹದಿಯ ಔಷಧಿಗಳನ್ನು ಟೀಕಿಸುವ ಹಾಗೂ ಜನರನ್ನು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸುವುದನ್ನು ...