ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸುವೇಂದು ಅಧಿಕಾರಿ

Source: ANI | By MV Bhatkal | Published on 9th June 2021, 7:59 PM | National News | Don't Miss |

ನವದೆಹಲಿ: ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ಹಾಗೂ ವಿಧಾನಸಭೆಯ ವಿರೋಧಪಕ್ಷದ ನಾಯಕ ಸುವೇಂದು ಅಧಿಕಾರಿ ಬುಧವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದರು.
ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.‍ಪಿ. ನಡ್ಡಾ ಸೇರಿದಂತೆ ಪಕ್ಷದ ಹಿರಿಯ ನಾಯಕರನ್ನು ಭೇಟಿಯಾಗಿದ್ದ ಸುವೇಂದು ಅಧಿಕಾರಿಯವರು, ಇಂದು ಪ್ರಧಾನಿ ಮೋದಿವರನ್ನು ಅವರನ್ನು, ಇಲ್ಲಿನ ಅವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ಪಶ್ಚಿಮ ಬಂಗಾಳ ಚುನಾವಣೆ ನಂತರ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ನಂತರ ಇದೇ ಮೊದಲ ಬಾರಿಗೆ ಸುವೇಂದು ಅಧಿಕಾರಿ ಅವರು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ, ಸಿಂಗೂರು ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಅವರು ಸೋಲಿಸಿದ್ದರು.

Read These Next

ರಿಲಯನ್ಸ್ ಜೊತೆ ನಂಟು ಹೊಂದಿರುವ ಕಂಪೆನಿಯಿಂದ ಬಿಜೆಪಿಗೆ 375 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್

ರಿಲಯನ್ಸ್ ಗುಂಪಿನೊಂದಿಗೆ ನಂಟು ಹೊಂದಿರುವ, ಆದರೆ ಹೊರಜಗತ್ತಿಗೆ ಅಪರಿಚಿತವಾಗಿರುವ ಕಂಪೆನಿ ಕ್ವಿಕ್ ಸಪ್ಪೆ ಚೇನ್ ಪ್ರೈವೇಟ್ ...

ಲೋಕಸಭಾ ಚುನಾವಣೆ; ಕಾಂಗ್ರೇಸ್ ನ ಎರಡನೇ ಪಟ್ಟಿ ಬಿಡುಗಡೆ; ಉ.ಕ ಕ್ಷೇತ್ರಕ್ಕೆ ಅಂಜಲಿ ನಿಂಬಾಳ್ಕರ್

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರ್ನಾಟಕದ 17, ಅರುಣಾಚಲ ...

ಸಿಎಎ ನಿಯಮಾವಳಿಗಳಿಗೆ ತಡೆ ಕೋರುವ ಅರ್ಜಿಗಳ ವಿಚಾರಣೆ ; ಸು.ಕೋರ್ಟ್‌ನಿಂದ ಕೇಂದ್ರಕ್ಕೆ ನೋಟಿಸ್

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯ ನಿಯಮಗಳಿಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಮಂಗಳವಾರ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...