ಮಕ್ಕಳ ಸುರಕ್ಷತೆ, ವಿದ್ಯಾಭ್ಯಾಸಕ್ಕೆ ಆದ್ಯತೆ ನೀಡಿ: ಹಿಂ.ವ.ಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹಸಿನ್

Source: so news | Published on 19th October 2019, 12:00 PM | State News | Don't Miss |


ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಇರುವ ಪ್ರತಿ ಹಾಸ್ಟೆಲ್‍ಗಳಿಗೆ ಆಯಾ ತಾಲೂಕಾ ಅಧಿಕಾರಿಗಳು ಪ್ರತಿವಾರ ಅನೀರಿಕ್ಷಿತ ಭೇಟಿ ನೀಡಿ ಕಡ್ಡಾಯವಾಗಿ ಪ್ರಗತಿ ಪರಿಶೀಲಿಸಬೇಕು. ಮತ್ತು ವಸತಿ ನಿಲಯಗಳಲ್ಲಿನ ಗ್ರಂಥಾಲಯ, ಅಂತರ್ಜಾಲಸೇವೆ ಹಾಗೂ ಪಠ್ಯಪುಸ್ತಕಗಳ ಸದ್ಭಳಕೆ ಮಾಡಿಕೊಂಡು ವಿದ್ಯಾರ್ಥಿಗಳ ಸುರಕ್ಷತೆಗೆ ಆಧ್ಯತೆ ನೀಡಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸರಕಾರದ ಕಾರ್ಯದರ್ಶಿ ಮೊಹಮ್ಮದ ಮೊಹಸಿನ್ ಅವರು ಅಧಿಕಾರಿಗಳು ತಿಳಿಸಿದರು. 
ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮ, ಮೂರಾರ್ಜಿ ದೇಸಾಯಿ ವಸತಿಶಾಲೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿ, ಅವರು ಮಾತನಾಡಿದರು. 
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ವಿವಿಧ ಸಮುದಾಯಗಳಿಗೆ ಸಮುದಾಯ ಭವನ ನಿರ್ಮಿಸಲು ಅನುದಾನ ಬಿಡುಗಡೆ ಮಾಡಲಾಗಿದೆ. ನಿಯಮಾನುಸಾರವಿಲ್ಲದ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸದಿರುವ ಸಂಘ, ಸಂಸ್ಥೆ, ಟ್ರಸ್ಟ್‍ಗಳಿಗೆ ಅಂತಿಮ ತಿಳುವಳಿಕೆ ಪತ್ರ ನೀಡಿ, ಪ್ರಸ್ತಾವನೆಗಳನ್ನು ರದ್ದುಪಡಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳಿಗೆ ಅವರು ಸೂಚಿಸಿದರು. 
ಎಲ್ಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾಧಿಕಾರಿಗಳಿಗೆ ವಾಹನ ಸೌಕರ್ಯ ನೀಡಲಾಗಿದೆ. ಪ್ರತಿವಾರ ಪ್ರತಿ ಹಾಸ್ಟಲ್‍ಗೆ ಅಧಿಕಾರಿ ಕಡ್ಡಾಯವಾಗಿ ಭೇಟಿ ನೀಡಬೇಕು. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳ ಆಭ್ಯಾಸಕ್ಕೆ ಅನುಮೂಲವಾಗಲು ಗ್ರಂಥಾಲಯ, ಅಂತರ್ಜಾಲಸೇವೆ ಮತ್ತು ಪಠ್ಯಪುಸ್ತಕ ನೀಡಲಾಗಿದೆ. ಅವುಗಳ ಸದ್ಭಳಕೆ ಆಗುವಂತೆ ಎಚ್ಚರಿಕೆ ವಹಿಸಬೇಕು. 
ವಾರ್ಡನ್‍ಗಳು ತಮ್ಮ ವಿದ್ಯಾರ್ಥಿವಸತಿನಿಲಯಗಳ ಸಮೀಪದಲ್ಲಿದ್ದು, ಪ್ರತಿ ಸಮಯದ ಉಪಹಾರ,  ಊಟ, ನೀರು, ವಿದ್ಯುತ್ ಸೇರಿದಂತೆ ಎಲ್ಲ ಸೌಕರ್ಯಗಳು ಉತ್ತಮ ಗುಣಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ದೊರೆಯುವಂತೆ ಜಾಗೃತೆ ವಹಿಸಬೇಕು. ಮತ್ತು ಪ್ರತಿದಿನ ಸಂಜೆ ವಿದ್ಯಾರ್ಥಿಗಳಿಗೆ ವಿಶೇಷ ವರ್ಗ ನಡೆಸಬೇಕು ಎಂದು ಹೇಳಿದರು. 
ಬಾಲಕೀಯರವಸತಿನಿಲಯಗಳಿಗೆ ಕಡ್ಡಾಯವಾಗಿ ಮಹಿಳಾ ವಾರ್ಡನ್ ಮತ್ತು ಮಹಿಳಾ ಅಡುಗೆಯವರನ್ನು ನೇಮಿಸಬೇಕು. ಮಕ್ಕಳ ಸುರಕ್ಷತೆಗೆ ಆಧ್ಯತೆ ನೀಡಬೇಕು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳ ಅರ್ಜಿ ಸಲ್ಲಿಸುವಾಗ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ವಿವರ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆಯಲು ಅಧಿಕಾರಿಗಳಿಗೆ ಸೂಚಿಸಿದರು. 
ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿರುವ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಉನ್ನತ ದರ್ಜೆಯಲ್ಲಿ ಬರುವಂತೆ ಪ್ರತಿಯೊಬ್ಬ ಅಧಿಕಾರಿ, ವಾರ್ಡನ್‍ಗಳು ಮುತುವರ್ಜಿ ವಹಿಸಬೇಕು. ಪಾಲಕರ ಭರವಸೆಯನ್ನು ಹುಸಿಗೊಳಿಸಬಾರದು ಎಂದು ಅವರು ತಿಳಿಸಿದರು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಲಾಖೆಯ ವಸತಿನಿಲಯಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳ ಬೇಡಿಕೆ ಹೆಚ್ಚಾಗಿದೆ. ಆದ್ದರಿಂದ ಇಲಾಖೆಯಿಂದ ಶೇಕಡಾ 20 ರಷ್ಟು ಹೆಚ್ಚುವರಿ ಹಾಸ್ಟೆಲ್ ಪ್ರವೇಶಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, 45 ಕೋಟಿ ರೂ.ಗಳ ಹೆಚ್ಚುವರಿ ಅನುದಾನ ಕೇಳಿದ್ದು, ಪ್ರಸ್ತಾವನೆಯು ಆರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ ಎಂದು ಅವರು ತಿಳಿಸಿದರು. 
ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ ಮಾತನಾಡಿ, ಧಾರವಾಡ ಜಿಲ್ಲೆಯಲ್ಲಿ ಮೆಟ್ರಿಕ್ ಪೂರ್ವ 26 ಮತ್ತು ಮೆಟ್ರಿಕ್ ನಂತರದ 41 ವಿದ್ಯಾರ್ಥಿನಿಲಯಗಳಿವೆ. ಬಾಲಕ ಮತ್ತು ಬಾಲಕಿಯರಿಗೆ ಸೇರಿದಂತೆ ಒಟ್ಟು 67 ವಿದ್ಯಾರ್ಥಿನಿಲಯಗಳಿದ್ದು 5420 ಜನ ಪ್ರವೇಶ ಪಡೆದಿದ್ದಾರೆ. ಖಾಸಗಿ ಅನುದಾನಿತ 4 ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿವೆ. ವಿದ್ಯಾರ್ಥಿನಿಲಯಗಳಿಗೆ 67 ಕಟ್ಟಡಗಳ ಅಗತ್ಯವಿದ್ದು, ಅದರಲ್ಲಿ 31 ಸ್ವಂತ ಕಟ್ಟಡಗಳು ಮತ್ತು 36 ಬಾಡಿಗೆ ಕಟ್ಟಡಗಳಲ್ಲಿ ವಿದ್ಯಾರ್ಥಿನಿಲಯಗಳಿವೆ ಎಂದು ತಿಳಿಸಿದರು. 
ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ 2006-07 ರಿಂದ 2018-19 ರವರೆಗೆ ಜಿಲ್ಲೆಯ ವಿವಿಧ ತಾಲೂಕಿನಲ್ಲಿ 71 ಸಮುದಾಯ ಭವನಗಳು ಮತ್ತು 9 ವಿದ್ಯಾರ್ಥಿನಿಲಯಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು.  
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಗುರುರಾಜ ಕುಲಕರ್ಣಿ ಮಾತನಾಡಿ, ನಿಗಮದ ವಿವಿಧ ಪಲಾನುಭವಿಗಳ ಆಯ್ಕೆ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಶೀಘ್ರದಲ್ಲಿ ಶಾಸಕರ ಅನುಮೋದನೆ  ಪಡೆದು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು. 
ಮೂರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರಾಚಾರ್ಯರು ಮಾತನಾಡಿ, ವಿದ್ಯಾರ್ಥಿಗಳ ಅಭ್ಯಾಸ, ಸಾಧನೆ ಕುರಿತು ವಿವರಿಸಿದರು. 
ಸಭೆಯಲ್ಲಿ ಇಲಾಖೆ ಉಪಕಾರ್ಯದರ್ಶಿ ಕೃಷ್ಣವೇಣಿ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾ ಅಧಿಕಾರಿಗಳು, ಮೂರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜುಗಳ ಪ್ರಾಚಾರ್ಯರು ಪಾಲ್ಗೊಂಡಿದ್ದರು. 

 

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...