45 ವರ್ಷ ಮೇಲ್ಪಟ್ಟವರ ಲಸಿಕಾಕರಣಕ್ಕೆ ಆದ್ಯತೆ ನೀಡಿ: ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್

Source: SO News | By Laxmi Tanaya | Published on 5th June 2021, 8:43 PM | State News | Don't Miss |

ಮಂಡ್ಯ : ಜಿಲ್ಲೆಯಲ್ಲಿ ಕರೋನಾ ನಿಯಂತ್ರಿಸಲು ಸೋಂಕಿತರ ಪತ್ತೆ ಹಚ್ಚಿ ಚಿಕಿತ್ಸೆ ನೀಡಿ ಹಾಗೂ ಕೋವಿಡ್ ಲಸಿಕೆ ನೀಡುವ ಸಂಬಂಧ ಮೊದಲು 45 ವರ್ಷ ಮೇಲ್ಪಟ್ಟವರಿಗೆ  ಮೊದಲ ಆದ್ಯತೆ ನೀಡಿ  ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಅವಲೋಕನ, ಪರಿಶೀಲನೆ ಹಾಗೂ ಪರಿವೀಕ್ಷಣೆ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಖಂಖಿ ಟೆಸ್ಟ್ , ಆರ್ ಟಿ ಪಿ ಸಿ ಆರ್  ಪರೀಕ್ಷೆಯನ್ನು  ಹೆಚ್ಚು ಮಾಡಿ ಎಂದರು.

ಹಳ್ಳಿಗಳಲ್ಲಿ ಮನೆಮನೆಗೆ ಭೇಟಿ ನೀಡಿ ಸಂಪರ್ಕಿತರನ್ನು ಪತ್ತೆ ಹಚ್ಚುವ ಕೆಲಸ ಮತ್ತಷ್ಟು ಹೆಚ್ಚಾಗಲಿ ಎಂದರು.
ಜಿಲ್ಲೆಯಲ್ಲಿ ಲಭ್ಯವಿರುವ ಬೆಡ್, ವೆಂಟಿಲೇಟರ್ಸ್, ಸಿಲಿಂಡರ್ಸ್, ಆಕ್ಸಿಜನ್ ಕಾನ್ಸನ್ ಟ್ರೇಟಸ್ರ್ಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
ಮಕ್ಕಳು ಸಹ ಕೋವಿಡ್ ಗೆ ತುತ್ತಾಗುತ್ತಿದ್ದು, ಮಕ್ಕಳ ಚಿಕಿತ್ಸೆಗೆ ಹೆಚ್ಚಿನ ಒತ್ತು ನೀಡಿ ಎಂದರು.

ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳ ವ್ಯವಸ್ಥೆ ಮತ್ತು ಅವಶ್ಯಕತೆಗಳ ಬಗ್ಗೆ ಚರ್ಚಿಸಿದರು.

ಜಿಲ್ಲೆಯ ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್ ಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡು ಕರೋನಾ ನಿಯಂತ್ರಿಸಲು ಅಲ್ಲಿನ ಜನಪ್ರತಿನಿಧಿಗಳು, ಗ್ರಾಮ ಪಂಚಾಯತಿ ನೌಕರರು, ಅಧ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಒ ಗಳಿಗೆ ಈ ಸಂಬಂಧ ಹೆಚ್ಚಿನ ಜವಾಬ್ದಾರಿ ನೀಡಿ ಎಂದರು.

ಲಸಿಕೆ ನೀಡುವ ಸಂಬಂಧ ಶಿಬಿರಗಳನ್ನು ಆಯೋಜಿಸಿ, 18 ವರ್ಷ ಮೇಲ್ಪಟ್ಟವರಿಗೆ , 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಆದ್ಯತಾ  ವಲಯ ಕಾರ್ಯಕರ್ತರ ನಿಕಟ ಕುಟುಂಬ ಸದಸ್ಯರು, ಕೋವಿಡ್-19 ಕರ್ತವ್ಯದಲ್ಲಿರುವ ಶಿಕ್ಷಕರು, ಸರ್ಕಾರಿ ಸಾರಿಗೆ ಸಿಬ್ಬಂದಿ, ಆಟೋ ಚಾಲಕರು, ಕ್ಯಾಬ್ ಚಾಲಕರು, ಬೀದಿ ಬದಿ ವ್ಯಾಪಾರಿಗಳು, ವಿದ್ಯುಚ್ಛಕ್ತಿ, ನೀರು ಪೂರೈಕೆ ಸಿಬ್ಬಂದಿ, ಅಂಚೆ ಇಲಾಖೆ ನೌಕರರು, ರಸ್ತೆ ಕಾಮಗಾರಿ ಮಾಡುವವರು, ಭದ್ರತಾ ಮತ್ತು ಹೌಸ್ ಕೀಪಿಂಗ್ ಸಿಬ್ಬಂದಿ, ಕಚೇರಿಗಳಲ್ಲಿ, ನ್ಯಾಯಾಂಗ ಅಧಿಕಾರಿಗಳ ಬಳಿ ಕೆಲಸ ಮಾಡುವವರು,ಕಟ್ಟಡಕಾರ್ಮಿಕರು, ಗಾಮೆರ್ಂಟ್ಸ್ ಕಾರ್ಮಿಕರು,ಹಿರಿಯರು ಮತ್ತು ರೋಗಿಗಳನ್ನು ನೋಡಿಕೊಳ್ಳುವವರು, ಮಕ್ಕಳ ರಕ್ಷಣಾ ಅಧಿಕಾರಿಗಳು,  ಇವರಿಗೆ ಲಸಿಕೆ ನೀಡುವ ಕೆಲಸ ಕ್ಷಿಪ್ರಗತಿಯಲ್ಲಿ ಸಾಗಬೇಕು ಎಂದರು.
ಲಸಿಕೆ ನಿಡುವ ಸಂಬಂಧ ಹೆಚ್ಚು ಕರೋನಾ ಪ್ರಕರಣಗಳಿರುವ  ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಲಸಿಕೆಯನ್ನು ನೀಡಿ ಎಂದರು.

ಕೋವಿಡ್ ನಿಂದ ಕೊರೊನಾ ವಾರಿಯರ್ಸ್ ಗಳು ಮೃತರಾದರೇ, ಪರಿಹಾರಧನ ಹಾಗೂ ಪಿಂಚಣಿ ನೀಡಲು ಸೂಕ್ತ  ಕ್ರಮಕೈಗೊಳ್ಳಿ ಎಂದರು.

ಸಭೆಯಲ್ಲಿ ಪ್ರಾದೇಶಿಕ ಆಯುಕ್ತರಾದ ಡಾ.ಜಿ.ಸಿ ಪ್ರಕಾಶ್,  ಜಿಲ್ಲಾಧಿಕಾರಿ ಎಸ್ ಅಶ್ವಥಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ, ಜಿ.ಪಂ ಸಿ.ಇ.ಒ ದಿವ್ಯಾಪ್ರಭು, ಅಪರ ಜಿಲ್ಲಾಧಿಕಾರಿ ಶೈಲಜಾ, ಆರೋಗ್ಯಾಧಿಕಾರಿ ಧನಂಜಯ, ಮಿಮ್ಸ್‍ನ ನಿರ್ದೇಶಕ ಎಂ.ಆರ್ ಹರೀಶ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಸೋಮಶೇಖರ್, ಮತ್ತಿತರರು ಉಪಸ್ಥಿತರಿದ್ದರು.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...