ವಕ್ಫ್ ಆಸ್ತಿಗಳ ರಕ್ಷಣೆಗೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ

Source: SO News | By Laxmi Tanaya | Published on 15th January 2021, 9:05 PM | State News | Don't Miss |

ಧಾರವಾಡ : ತೋಟಗಾರಿಕೆ ಇಲಾಖೆಯ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ, ಕೃಷಿಭಾಗ್ಯ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಜಾರಿಯಾಗುತ್ತಿರುವ ಜನಪರ ಯೋಜನೆಗಳನ್ನು ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನದೊಂದಿಗೆ ಅನುಷ್ಠಾನಗೊಳಿಸಬೇಕು. ಅಲ್ಪಸಂಖ್ಯಾತರ ಶಿಕ್ಷಣ, ಸಮಗ್ರ ವಿಕಾಸಕ್ಕೆ ಸರ್ಕಾರದ ಯೋಜನೆಗಳ ಸದ್ಬಳಕೆಯಾಗಬೇಕು. ಜಿಲ್ಲೆಯ ವಕ್ಫ್ ಸಂಸ್ಥೆಗಳ ಆಸ್ತಿಗಳ ಸಂರಕ್ಷಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಮೂರನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನವಲಗುಂದ ಮತ್ತು ಕುಂದಗೋಳದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನೂತನವಾಗಿ ನಿರ್ಮಾಣವಾಗುತ್ತಿರುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳ ಕಟ್ಟಡ ಕಾಮಗಾರಿಗಳನ್ನು ಇನ್ನೊಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ನೂತನವಾಗಿ ರಚನೆಯಾಗಿರುವ ಸಮಿತಿ ಸದಸ್ಯರಿಗೆ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಚಟುವಟಿಕೆಗಳನ್ನು ಖುದ್ದು ಭೇಟಿ ಮೂಲಕ ಪರಿಚಯ ಮಾಡಿಸಬೇಕು. ಸಮಿತಿಯ ಸದಸ್ಯರು ತಮ್ಮ ಸಮುದಾಯಗಳ ಅರ್ಹ ಸದಸ್ಯರ ಪಟ್ಟಿ ಮಾಡಿ ನೀಡಿದರೆ, ಸರ್ಕಾರದಿಂದ ದೊರೆಯುವ ಸೌಕರ್ಯಗಳನ್ನು ಒದಗಿಸಲಾಗುವುದು. ಗಾಮನಗಟ್ಟಿ ಕೈಗಾರಿಕೆ ಪ್ರದೇಶದಲ್ಲಿ ಉದ್ಯಮ ಸ್ಥಾಪನೆಗೆ ನಿವೇಶನ ಪಡೆದಿರುವ ಅಲ್ಪಸಂಖ್ಯಾತ ಉದ್ಯಮ ಸಂಸ್ಥೆಗಳಿಗೆ ಅಗತ್ಯವಿರುವ ಕೌಶಲ್ಯಾಭಿವೃದ್ಧಿ ತರಬೇತಿ ನೀಡಬೇಕು. ವಕ್ಫ್ ಸಂಸ್ಥೆಗಳ ಆಸ್ತಿಗಳ ರಕ್ಷಣೆಗೆ ಅಗತ್ಯ ಕ್ರಮವಹಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಾರ್ವಜನಿಕರೇ ಸ್ವಯಂ ಪ್ರೇರಣೆಯಿಂದ ಮುಂದೆ ಬರಲಿ ಎಂದು ವಿಳಂಬ ಮಾಡದೇ, ಅರ್ಹರನ್ನು ಗುರುತಿಸಿ ಯೋಜನೆಗಳನ್ನು ತಲುಪಿಸಬೇಕು ಎಂದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸುಶೀಲಾ ಮಾತನಾಡಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಶ್ರಮಶಕ್ತಿ ಸಾಲ ಯೋಜನೆ, ಮೈಕ್ರೋ ಸಾಲದ ಯೋಜನೆ, ಗಂಗಾ ಕಲ್ಯಾಣ ಮತ್ತಿತರ ಯೋಜನೆಗಳಲ್ಲಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿಯನ್ನು ಸಮಿತಿಗಳು ನೀಡಿವೆ,  ನಿಯಮಾನುಸಾರ ಸೌಲಭ್ಯಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅಬ್ದುಲ್ ರಷೀದ್ ಮಿರ್ಜಣ್ಣವರ, ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮ ಅನುಷ್ಠಾನ ಸಮಿತಿಯ ಸದಸ್ಯರಾದ ಅಭಿಷೇಕ ಹೊನ್ನಪ್ಪನವರ, ಹುಬ್ಬಳ್ಳಿಯ ಸಿಂಧಿ ಪಂಚಾಯತ್, ಛಬ್ಬಿಯ ಅತ್ತಿಮಬ್ಬೆ ಮಹಿಳಾ ಮಂಡಳ, ಕ್ರಿಶ್ಚಿಯನ್ ಫಾಲೋಶಿಪ್ ಚರ್ಚ್ ಮತ್ತಿತರ ಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...