ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಒದಗಿಸಬೇಕು -ಸಚಿವ ಜಗದೀಶ ಶೆಟ್ಟರ್

Source: uni | Published on 14th July 2020, 12:10 AM | State News | Don't Miss |

ಧಾರವಾಡ: ಅಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ನೋಂದಣಿಯಾಗಿರುವ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳು ತಮ್ಮ ಒಟ್ಟು ಹಾಸಿಗೆಗಳ ಸಾಮಥ್ರ್ಯದ ಶೇ.50 ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಬೇಕು. ಸರ್ಕಾರ ಹಾಗೂ ಜಿಲ್ಲಾಡಳಿತ ಖಾಸಗಿ ಆಸ್ಪತ್ರೆಗಳಿಗೆ ಎಲ್ಲ ರೀತಿಯ ಸಹಕಾರ, ಮಾರ್ಗದರ್ಶನ ನೀಡಲಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ ಶೆಟ್ಟರ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಖಾಸಗಿ ಆಸ್ಪತ್ರೆಗಳ ವೈದ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೊರೊನಾ ವಿರುದ್ಧದ ಹೋರಾಟದಲ್ಲಿ ಖಾಸಗಿ ಆಸ್ಪತ್ರೆಗಳ ಸಹಕಾರ ಮುಖ್ಯವಾಗಿದೆ. ವೈದ್ಯರು ಮತ್ತು ಅರೇವೈದ್ಯಕೀಯ ಸಿಬ್ಬಂದಿ ದೇಶದ ಹಿತಕ್ಕಾಗಿ ಈ ಸಂದರ್ಭದಲ್ಲಿ ತಮ್ಮ ಜವಾಬ್ದಾರಿ ನಿರ್ವಹಿಸಬೇಕು. ಅನಗತ್ಯವಾಗಿ ಭಯಪಡದೇ ಚಿಕಿತ್ಸೆ ನೀಡುವ ಮನೋಭಾವ ಬೆಳೆಸಿಕೊಳ್ಳಬೇಕು. ಹುಬ್ಬಳ್ಳಿಯ ಕಿಮ್ಸ್ ವೈದ್ಯರು ಮತ್ತು ಸಿಬ್ಬಂದಿ ಕಳೆದ ನಾಲ್ಕುವರೆ ತಿಂಗಳಿನಿಂದ ಈ ನಿಟ್ಟಿನಲ್ಲಿ ಮಾದರಿಯಾದ ಸೇವೆ ನೀಡುತ್ತಿವೆ. ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ಸಿಬ್ಬಂದಿಗೆ ಅಗತ್ಯ ತರಬೇತಿ ಮತ್ತು ಮಾರ್ಗದರ್ಶನ ನೀಡಲು ಕಿಮ್ಸ್ ತಂಡ ಸಿದ್ಧವಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳಡಿ ಬಾಕಿ ಇರುವ ಅನುದಾನವನ್ನು ಬಿಡುಗಡೆ ಮಾಡಲು ಕ್ರಮ ವಹಿಸಲಾಗುವುದು ಎಂದರು.
 ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿ, ಲಕ್ಷಣ ರಹಿತ ಕೋವಿಡ್ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಚಿಕಿತ್ಸೆಗೆ ಹಾಸಿಗೆಗಳು ಲಭ್ಯವಿವೆ. ಲಕ್ಷಣ ಇರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ತಮ್ಮ ಸಾಮಾಥ್ರ್ಯದ ಶೇ.50 ರಷ್ಟು ಹಾಸಿಗೆ, ಐಸಿಯು ಹಾಗೂ ವೆಂಟಿಲೇಟರ್‍ಗಳನ್ನು ಮೀಸಲಿಡಬೇಕು ಎಂದರು. ಅರೆವೈದ್ಯಕೀಯ ಸಿಬ್ಬಂದಿ ಬೇರೆ ಊರುಗಳಿಂದ ಬರುತ್ತಿದ್ದರೆ ಅವರು ಬಯಸಿದರೆ ಲಾಕ್‍ಡೌನ್ ಅವಧಿಯಲ್ಲಿ ಸರ್ಕಾರದ ಹಾಸ್ಟೇಲ್‍ಗಳಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಆರ್. ದಿಲೀಪ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ:ಬಿ.ಸಿ. ಸತೀಶ್ ಹಾಗೂ ಮತ್ತಿತರರು ಸಭೆಯಲ್ಲಿ ಇದ್ದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...