ಅಬಕಾರಿ ನೀತಿ ಪ್ರಕರಣ; 9 ಗಂಟೆಗಳ ಕಾಲ ಕೇಜ್ರಿವಾಲ್ ವಿಚಾರಣೆ

Source: Vb | By I.G. Bhatkali | Published on 17th April 2023, 8:14 AM | National News |

ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸಿಬಿಐ ರವಿವಾರ 9 ಗಂಟೆಗಳ ಕಾಲ ವಿಚಾರಣೆ ನಡೆಸಿತು.

ಸಿಬಿಐ ಶುಕ್ರವಾರ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿತ್ತು. ಸಿಬಿಐ ಕೇಂದ್ರ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಮುನ್ನ ಕೇಜ್ರಿವಾಲ್ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ತುಂಬಾ ಪ್ರಭಾವಶಾಲಿ. ಅಪರಾಧ ಮಾಡಿದ್ದರೂ ಮಾಡದೇ ಇದ್ದರೂ ಜೈಲಿಗೆ ಕಳುಹಿಸುವ ಸಾಮರ್ಥ್ಯವನ್ನು ಅದು ಹೊಂದಿದೆ ಎಂದಿದ್ದಾರೆ.

“ನನ್ನನ್ನು ಬಂಧಿಸಬಹುದು ಎಂದು ಬಿಜೆಪಿ ಸಿಬಿಐಗೆ ಆದೇಶಿಸಬಹುದು' ಎಂದು ಕೇಜ್ರಿವಾಲ್ ಹೇಳಿದರು.

ಬಿಜೆಪಿ ಈಗ ಆದೇಶ ಜಾರಿ ಮಾಡಿದರೆ ಸಿಬಿಐಗೆ ಏನು ಮಾಡಲು ಸಾಧ್ಯ? ಬಿಜೆಪಿಯವರು ಅಧಿಕಾರದ ಬಗ್ಗೆ ಅತ್ಯಂತ ಅಹಂಕಾರಿಗಳಾಗಿ ಮಾರ್ಪಟ್ಟಿದ್ದಾರೆ. ಅವರು ನ್ಯಾಯಾಧೀಶರು, ಮಾಧ್ಯಮ ಪ್ರತಿನಿಧಿಗಳು, ರಾಜ್ಯ ಸರಕಾರಗಳು, ಉದ್ಯಮಿಗಳ ವರೆಗೆ ಎಲ್ಲರಿಗೂ ಬೆದರಿಕೆ ಹಾಕುತ್ತಿದ್ದಾರೆ. “ನಮ್ಮ ಮಾತು ಕೇಳಿ, ಇಲ್ಲದೇ ಇದ್ದರೆ ಜೈಲಿಗೆ ಹಾಕುತ್ತೇವೆ'' ಎಂದು ಪರೋಕ್ಷವಾಗಿ ಹೇಳುತ್ತಿದ್ದಾರೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...