ಪಾರದರ್ಶಕ ಮತದಾನಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಎಸ್.ಅಶ್ವತಿ

Source: SO News | By Laxmi Tanaya | Published on 3rd December 2021, 9:44 PM | State News | Don't Miss |

ಮಂಡ್ಯ : ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಮುಕ್ತ ಹಾಗೂ ಪಾರದರ್ಶಕ ಮತದಾನಕ್ಕೆ ಅಗತ್ಯವಿರುವ ಎಲ್ಲಾ ಕ್ರಮ ಕೈಗೊಳ್ಳುವಂತೆ ಮತದಾರರನ್ನು  ಗುರುತು ಹಚ್ಚುವ ಅಧಿಕಾರಿ, ಪಿ‌ ಡಿ ಓ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ  ಸೂಚಿಸಿದರು.  

ನಗರದ  ಅಂಬೇಡ್ಕರ್ ಭವನದಲ್ಲಿ 15-ಮಂಡ್ಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಗೆ  ಚುನಾವಣೆ ಸಂಬಂಧ ಮತದಾರರನ್ನು  ಗುರುತು ಹಚ್ಚುವ ಅಧಿಕಾರಿ, ಪಿ‌ ಡಿ ಓ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ತರಬೇತಿ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಂಡ್ಯ ಜಿಲ್ಲೆಯ 232 ಗ್ರಾಮ ಪಂಚಾಯಿತಿ ಸದಸ್ಯರುಗಳು, ನಗರಸಭೆ ಮಂಡ್ಯ, ಪುರಸಭೆ, ಮದ್ದೂರು, ಮಳವಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ಕೆ.ಆರ್.ಪೇಟೆ, ನಾಗಮಂಗಲ ಹಾಗೂ ಬೆಳ್ಳೂರು ಪಟ್ಟಣ ಪಂಚಾಯಿತಿ ಸದಸ್ಯರುಗಳು, ಲೋಕಸಭಾ ಸದಸ್ಯರು, ವಿಧಾನಸಭಾ ಸದಸ್ಯರು ಮತ್ತು ನಗರ ಸ್ಥಳೀಯ ಸಂಸ್ಥೆಗಳ ನಾಮ ನಿರ್ದೇಶಿತ ಸದಸ್ಯರುಗಳು ಈ ಕ್ಷೇತ್ರದ ಮತದಾರರಾಗಿರುತ್ತಾರೆ ಎಂದು ಹೇಳಿದರು.

ಈ ಚುನಾವಣೆಯ ಮತದಾನವೂ  ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದ್ದು, ಈ ಚುನಾವಣಾ ಪ್ರಕ್ರಿಯೆ ಬಗ್ಗೆ ಈ ತರಬೇತಿಯಲ್ಲಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು  ಮತದಾನದ ಬಗ್ಗೆ ಅರಿವು ಮೂಡಿಸಿ ಎಂದರು.

ಚುನಾವಣೆ ಪ್ರಕ್ರಿಯೆ ಬಗ್ಗೆ  ಯಾವುದಾದರೂ  ಸಮಸ್ಯೆ, ಗೊಂದಲಗಳಿದ್ದರೇ  ಬಗೆಹರಿಸಿಕೊಳ್ಳಿ ಹಾಗೂ ಮತದಾನದ ಗೌಪ್ಯತೆಯನ್ನು ಕಾಪಾಡಿ ನಿಮ್ಮ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಅರಿತುಕೊಳ್ಳಿ ಎಂದರು.

ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪಿ.ಡಿ.ಓಗಳು ಗ್ರಾಮಪಂಚಾಯಿತಿ ಸದಸ್ಯರುಗಳಿಗೆ ಮತದಾನದ ಪ್ರಕ್ರಿಯೆ, ವಿಧಾನಗಳ ಬಗ್ಗೆ ಅರಿವು ಮೂಡಿಸಿ ಎಂದರು.

ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ದಿವ್ಯಪ್ರಭು, ಅಪರ ಜಿಲ್ಲಾಧಿಕಾರಿ ವಿ.ಆರ್ ಶೈಲಜಾ, ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಧನಂಜಯ, ತಹಶೀಲ್ದಾರ್ ಗಳಾದ ಶಿವಮೂರ್ತಿ, ನರಸಿಂಹಮೂರ್ತಿ,  ವಿಜಯಣ್ಣ, ಶ್ವೇತಾ, ಪ್ರಮೋದ್ ಪಾಟೀಲ್, 
ಕುಂಞ ಅಹಮದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...