ಉಪವಿಭಾಗಾಧಿಕಾರಿ ಕಚೇರಿ ಎದುರು ನಾರಾಯಣಗುರುನಗರದ ನಿವಾಸಿಗಳ ಪ್ರತಿಭಟನೆ ಕಂದಾಯ ಇಲಾಖೆ ಆದೇಶ ಹಿಂಪಡೆಯಲು ಒತ್ತಾಯ

Source: S O News Service | By Office Staff | Published on 18th February 2020, 10:02 PM | Coastal News |

ಶಿರಸಿ: ತಾಲೂಕಿನ ನಾರಾಯಣಗುರುನಗರದ ಸರ್ವೆ ನಂಬರ್ 53ರ ನಿವೇಶನಗಳು ಡಿಫಾರೆಸ್ಟ್ ಆಗಿಲ್ಲ ಎಂಬ ನೆಪವೊಡ್ಡಿ, ಯಾವುದೇ ವ್ಯವಹಾರ ನಡೆಸದಂತೆ ಕಂದಾಯ ಇಲಾಖೆಯಿಂದ ಹೊರಡಿಸಲಾಗಿರುವ ಆದೇಶವನ್ನು ಹಿಂಪಡೆಯಬೇಕು ಎಂದು ನಾರಾಯಣಗುರುನಗರ ಹಿತರಕ್ಷಣಾ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. 
ನಗರದ ವಿಕಾಸಾಶ್ರಮ ಬಯಲಿನಿಂದ ಉಪವಿಭಾಗಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ಮೂಲಕ ತೆರಳಿದ ಪ್ರತಿಭಟನಾಕಾರರು, ಬಳಿಕ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವೈಜ್ಞಾನಿಕ ಆದೇಶ ನೀಡಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಲಾಯಿತು.
ಸಮಸ್ಯೆ ಏನು?: ಕಳೆದ ನಾಲ್ಕೈದು ದಶಕಗಳಿಂದ ನಾರಾಯಣಗುರುನಗರದಲ್ಲಿ ಜನರು ಮನೆ ಕಟ್ಟಿಕೊಂಡು ವಾಸ ಮಾಡುತ್ತಿದ್ದಾರೆ. ಅಲ್ಲದೇ ಕಂದಾಯ ಇಲಾಖೆಯಿಂದಲೇ ಇಲ್ಲಿನ ನಿವೇಶನಗಳಿಗೆ ಪಟ್ಟಾ ನೀಡಿ ಹಂಚಿಕೆ ಮಾಡಲಾಗಿದೆ. ಆದರೆ, ಸುಮಾರು ಒಂದೂವರೆ ವರ್ಷದ ಹಿಂದೆ ಇದ್ದಕ್ಕಿದ್ದಂತೆ ಇಲ್ಲಿನ ನಿವೇಶನಗಳು ಡಿಫಾರೆಸ್ಟ್ ಆಗಿಲ್ಲದ ಕಾರಣ ನಿವೇಶನಗಳ ಮಾರಾಟ, ಕೊಳ್ಳುವಿಕೆ, ಬ್ಯಾಂಕ್ ವ್ಯವಹಾರ ಇತ್ಯಾದಿಯನ್ನು ನಿಷೇಧಿಸಿ ತಹಶೀಲ್ದಾರರು ಆದೇಶ ನೀಡಿದ್ದಾರೆ. 
      ಇದರಿಂದ ನಿವೇಶನದ ಮೇಲೆ ಲಕ್ಷಾಂತರ ರೂ. ಸಾಲ ಮಾಡಿ ಮನೆ ಕಟ್ಟಿಕೊಂಡವರಿಗೆ, ಇರುವ ಇದೊಂದೇ ಸಣ್ಣ ಆಸ್ತಿಯನ್ನು ನಂಬಿ ಬದುಕುತ್ತಿರುವ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಸಂಕಷÀ್ಟವಾಗಿದೆ. ಹಾಗಾಗಿ ತಹಶೀಲ್ದಾರರು ಹೊರಡಿಸಿರುವ ಆದೇಶವನ್ನು ಹಿಂಪಡೆಯಲು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಒಂದೊಮ್ಮೆ ಬೇಡಿಕೆ ಈಡೇರಿಸಲು ಶೀಘ್ರದಲ್ಲಿ ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಮತ್ತು ಬರುವ ಗ್ರಾಮ ಪಂಚಾಯತ್ ಚುನಾವಣಾ ಮತದಾನದಿಂದ ನಾರಾಯಣಗುರುನಗರ ಜನತೆ ಬಹಿಷ್ಕರಿಸಲಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.   
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಗೌರೀಶ ನಾಯ್ಕ, ಪ್ರಧಾನಕಾರ್ಯದರ್ಶಿ ಉಮೇಶ ಬಂಕಾಪುರ, ಜೀವನ ಪೈ, ನಾಗರಾಜ ಭುಜಂಗ್ ಶೆಟ್ಟಿ, ರಾಮಾ ಪೂಜಾರಿ, ಯೋಗಿಶ ನಾಯ್ಕ, ಸದಾನಂದ ಗೌಡರ, ಸುನಂದಾ ಗೌಡಾ, ನವೀನ ಶೆಟ್ಟಿ, ನಾಗರಾಜ ಶೆಟ್ಟಿ, ಪ್ರದೀಪ ಮೈಸೂರು, ಶಾಂತಲಾ ಶೆಟ್ಟಿ ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಇದ್ದರು.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...