ಪ್ರೊ. ಬಸವರಾಜ್ ರಿಗೆ ಪಿಎಚ್.ಡಿ ಪದವಿ ಪ್ರದಾನ

Source: sonews | By Staff Correspondent | Published on 21st March 2019, 1:08 PM | Coastal News | Don't Miss |

ಭಟ್ಕಳ: ಇಲ್ಲಿನ ಅಂಜುಮನ್ ಹಾಮಿಯೆ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಅಂಜುಮಾನ್ ತಾಂತ್ರಿಕ ಕಾಲೇಜಿನ ಯಾಂತ್ರಿಕ ವಿಭಾಗದ ಸಹಾಯಕ  ಪ್ರಾಧ್ಯಾಪಕರಾದ ಪ್ರೊ. ಬಸವರಾಜ್ ಎಂ. ವಿ. ರವರು ಸಂಶೋಧನಾ ವಿಭಾಗದ ನಿರ್ದೇಶಕರಾದ ಡಾ. ಉದಯಪ್ರಸನ್ನ ಎಚ್. ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ ಇನ್ವೆಸ್ಟಿಗೇಷನ್ ಇಂಟು ಕ್ರೀಪ್ ಅಂಡ್ ವಿಯರ್ ಪ್ರಾಪರ್ಟೀಸ್ ಆಫ್ ಆಸ್ಟೆಂಪರ್ಡ್ ಹೈ ಸಿಲಿಕಾನ್ ಸ್ಡೀಲ್ ” ಎಂಬ ಸಂಶೋಧನಾ ಪ್ರಬಂಧಕ್ಕೆ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು (ಬೆಳಗಾವಿ) 18ನೇ ಮಾರ್ಚ 2019 ರಂದು ನೆಡೆದ 18 ನೇ ಘಟಿಕೋತ್ಸವದಲ್ಲಿ ಪಿಎಚ್. ಡಿ. ಪದವಿಯನ್ನು ನೀಡಿ ಗೌರವಿಸಲಾಯಿತು. 

ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾನ್ಯತೆ ಪಡೆದಿರುವ ಅಂಜುಮಾನ್ ತಾಂತ್ರಿಕ ಮಹಾವಿದ್ಯಾಲಯದ ಸಂಶೋದನಾ ವಿಭಾಗದಲ್ಲಿ ಅಧ್ಯಯನ ನೆಡೆಸಿರುತ್ತಾರೆ.

ಡಾ. ಬಸವರಾಜ್ ಎಂ. ವಿ. ರವರು ಮೂಲತಃ ದಾವಣಗೆರೆ ಜಿಲ್ಲಾ ಚನ್ನಗಿರಿ ತಾಲ್ಲೂಕಿನ ಆಲೂರು ಗ್ರಾಮದ ಶ್ರೀಮತಿ ರುದ್ರಮ್ಮ ಮತ್ತು ದಿ. ಶ್ರೀ ವೀರಪ್ಪ ಏ. ಇವರ ಮಗನಾಗಿದ್ದು ಕಳೆದ 21 ವರ್ಷಗಳಿಂದ ಅಂಜುಮಾನ್ ತಾಂತ್ರಿಕ ಕಾಲೇಜಿನ ಯಾಂತ್ರಿಕ ವಿಭಾಗದಲ್ಲಿ ಪ್ರಾದ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಉಪ-ಪ್ರಾಚಾರ್ಯರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...