ನಿಷೇಧಿತ ಪ್ಲಾಸ್ಟಿಕ್ ವಶ-ದಂಡ ವಸೂಲಿ

Source: SO News | By Laxmi Tanaya | Published on 17th July 2023, 9:29 PM | Coastal News | Don't Miss |

ಉಡುಪಿ : ಉಡುಪಿ ನಗರಸಭೆಯ ವತಿಯಿಂದ ಜಿಲ್ಲೆಯ ವಿವಿಧೆಡೆ ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿ, ಒಟ್ಟು 107.81 ಕೆ. ಜಿ. ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 47,500 ರೂ. ದಂಡ ವಸೂಲಿ ಮಾಡಲಾಯಿತು.

       ಜೂನ್ 26 ರಂದು ಮಲ್ಪೆಯಲ್ಲಿ 41.87 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 24,000 ರೂ., ಜೂನ್ 28 ರಂದು ಪರ್ಕಳದಲ್ಲಿ 29.44 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು 10,500 ರೂ. ಹಾಗೂ ಇಂದು ಶ್ರೀ ಕೃಷ್ಣ ಮಠದ ಬಳಿ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳಿಗೆ ದಾಳಿ ನಡೆಸಿ 36.5 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ಗಳನ್ನು ವಶಪಡಿಸಿಕೊಂಡು ರೂ. 12,500 ದಂಡ ವಿಧಿಸಲಾಯಿತು. 

ದಾಳಿಯಲ್ಲಿ ನಗರಸಭೆಯ ಪರಿಸರ ಅಭಿಯಂತರರು, ಹಿರಿಯ ಆರೋಗ್ಯ ನಿರೀಕ್ಷಕರು, ಕಿರಿಯ ಆರೋಗ್ಯ ನಿರೀಕ್ಷಕರು, ಸ್ಯಾನೀಟರಿ ಸೂಪರ್ವೈಸರ್ ಹಾಗೂ ಪೌರಕಾರ್ಮಿಕರು ಭಾಗವಹಿಸಿದ್ದರು.
ಸಾರ್ವಜನಿಕರು, ಉದ್ದಿಮೆದಾರರು, ವ್ಯಾಪಾರಿಯವರು ನಿಷೇಧಿತ ಪ್ಲಾಸ್ಟಿಕ್ಗಳನ್ನು ಉಪಯೋಗಿಸುವುದು ಕಂಡು ಬಂದಲ್ಲಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಿ, ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಸಾರ್ವಜನಿಕರಿಗೆ ಕರಪತ್ರ ವಿತರಿಸಿ ಮತದಾನ ಜಾಗೃತಿ ಮೂಡಿಸಿದ ಜಿಲ್ಲಾಧಿಕಾರಿ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೇ 7 ರಂದು ನಡೆಯಲಿರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ , ಸಾರ್ವಜನಿಕರು ಹೆಚ್ಚಿನ ...

ಕಾರವಾರ: 16.41 ಲಕ್ಷ ಮತದಾರರು: 1977 ಮತಗಟ್ಟೆಗಳು: 6939 ಸಿಬ್ಬಂದಿಗಳು; ಲೋಕಸಭಾ ಚುನಾವಣೆಗೆ ನಾವ್ ರೆಡಿ ಎಂದ ಜಿಲ್ಲಾಡಳಿತ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬAಧಿಸಿದAತೆ, ಮುಕ್ತ, ಪಾರದರ್ಶಕ ಮತ್ತು ಶಾಂತಿಯುತ ಚುನಾವಣೆಗಾಗಿ ಜಿಲ್ಲೆಯಲ್ಲಿ ಸಕಲ ...