ತಿ. ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಮಾರಾಟ ನಿಷೇಧ

Source: SO News | By Laxmi Tanaya | Published on 20th April 2021, 9:29 AM | State News | Don't Miss |

ಮೈಸೂರು : ರಾಷ್ಟ್ರೀಯ ಹಸಿರು ನ್ಯಾಯಾಧೀಶರ ಆದೇಶದಂತೆ ತಿ.ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಒಂದು ಬಾರಿ ಬಳಸಿ ಬಿಸಾಡುವಂತಹ ಕೈಚೀಲಗಳು, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ, ಥರ್ಮೋಕೋಲ್, ಪ್ಲಾಸ್ಟಿಕ್ ಫ್ಲೆಕ್ಸ್ ಇತ್ಯಾದಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮತ್ತು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ.

ಈ ಹಿನ್ನೆಲೆಯಲ್ಲಿ ತಿ.ನರಸೀಪುರ ಪುರಸಭೆ ವ್ಯಾಪ್ತಿಯಲ್ಲಿ ಯಾವುದೇ ಸಂದರ್ಭಗಳಲ್ಲಿಯೂ ಒಂದು ಬಾರಿ ಬಳಸಿ ಬಿಸಾಡುವ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡಬಾರದು. ನಿಯಮ ತಪ್ಪಿದ್ದಲ್ಲಿ ಪ್ಲಾಸ್ಟಿಕ್ ಮಾರಾಟ, ಬಳಕೆ ಮಾಡುವವರಿಗೆ ದಂಡ ವಿಧಿಸುವುದರ ಜೊತೆಗೆ ವಾಣಿಜ್ಯ ಚಟುವಟಿಕೆ ನಡೆಯುವ ಕಟ್ಟಡದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಡಿತಗೊಳಿಸಿ ಕಟ್ಟಡದ ಬೀಗ ಮುದ್ರೆ ಮಾಡುವ ಮೂಲಕ ಮುಚ್ಚಿಸಲಾಗುವುದು.

ಪ್ರತಿಯೊಬ್ಬ ತ್ಯಾಜ್ಯ ಉತ್ಪಾದಕರು ತಮ್ಮಲ್ಲಿ ಉತ್ಪಾದನೆಯಾಗುವ ತ್ಯಾಜ್ಯಾವಸ್ತುಗಳನ್ನು ಅಂದರೆ, ಹಸಿಕಸ, ಒಣಕಸ ಹಾಗೂ ಗೃಹಬಳಕೆ ಹಾನಿಕಾರಕ ತ್ಯಾಜ್ಯವೆಂದು 3 ವಿಧಗಳಾಗಿ ವಿಂಗಡಿಸಿ ಪ್ರತ್ಯೇಕ ಕಸದ ಬುಟ್ಟಿ ಸಂಗ್ರಹಿಸಿ ಪ್ರತಿದಿನ ಪುರಸಭೆಯಿಂದ ನಿಯೋಜಿಸಲ್ಪಟ್ಟಿರುವ ಆಟೋ, ಟಿಪ್ಪರ್‍ಗಳ ಮೂಲಕ ಕಸ ಒಯ್ಯುವರಿಗೆ ನೀಡಬೇಕು. ಇಲ್ಲವಾದಲ್ಲಿ ದಂಡ ವಿಧಿಸಿ ನಿಮ್ಮ ಮನೆಗೆ ಕಲ್ಪಿಸಲಾಗಿರುವ ಮೂಲಕ ಸೌಕರ್ಯಗಳನ್ನು ಬಂದ್ ಮಾಡಲಾಗುವುದು ಎಂದು ತಿ.ನರಸೀಪುರದ ಪುರಸಭೆಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...