ಜಿಲ್ಲೆಯಲ್ಲಿ ಎಂ ಸ್ಯಾಂಡ್ ಉತ್ಪಾದನೆಗೆ ಉತ್ತೇಜನ : ಕೋಟ ಶ್ರೀನಿವಾಸ ಪೂಜಾರಿ.

Source: SO News | By Laxmi Tanaya | Published on 26th January 2023, 10:21 PM | Coastal News | Don't Miss |

ಕಾರವಾರ : ಜಿಲ್ಲೆಯ ಸಾರ್ವಜನಿಕ ಮತ್ತು ಸರ್ಕಾರಿ ಕಾಮಗಾರಿಗಳಿಗೆ ನದಿ ಮರಳಿಗೆ ಪರ್ಯಾಯವಾಗಿ ಎಂ ಸ್ಯಾಂಡ್ ಬಳಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಹಾಗೂ  ಪ್ರಸ್ತುತ ಜಿಲ್ಲೆಯಲ್ಲಿ  ಉತ್ಪಾದನೆ ಕಡಿಮೆ ಇದ್ದು ಕ್ರಷರ್ ಘಟಕಗಳಿಂದ M-Sand ಉತ್ಪಾದನೆಗೆ ಉತ್ತೇಜನ ನೀಡಿ ಮರಳಿನ ಪೂರೈಕೆ ಮಾಡಲು ಸೂಕ್ತ ಕ್ರಮ ವಹಿಸುವಂತೆ  ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ರವರು ಸೂಚಿಸಿದರು. 

 ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಂಗ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಸಿರು ಪೀಠದ ಆದೇಶದಂತೆ ನಿಯಂತ್ರಣ ವಲಯದಲ್ಲಿ ಮರಳು ದಿಬ್ಬ ತೆರವುಗೊಳಸುವಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಮರಳನ್ನು ತೆರವುಗೊಳಿಸಲು ಅನುಮತಿ ಕೋರಿ ಪ್ರಸ್ತಾವನೆ ಸರ್ಕಾರದ ಹಂತದಲ್ಲಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿ ಕಾಮಗಾರಿಗಳಿಗೆ ಮರಳಿನ ಪೂರೈಕೆ ಇಲ್ಲದಿರುವುದರಿಂದ ಹೊಸ ಮರಳು ನೀತಿ-2020 ರಲ್ಲಿ ನೀಡಿರುವ ಅವಕಾಶಗಳ ಅನುಸಾರ ಸಾರ್ವಜನಿಕ ಮತ್ತು ಸರ್ಕಾರಿ ಕಾಮಗಾರಿಗಳಿಗೆ ಮರಳು ಒದಗಿಸುವ ದೃಷ್ಟಿಯಿಂದ ಅಣೆಕಟ್ಟು, ಜಲಾಶಯ, ಹಾಗೂ ಅಣೆಕಟ್ಟು ಜಲಾಶಯಗಳ ಹಿನ್ನೀರಿನ ನದಿ ಪಾತ್ರದ ಪ್ರದೇಶಗಳಲ್ಲಿರುವ ಹೂಳಿನಲ್ಲಿ ದೊರೆಯಬಹುದಾದ ಮರಳನ್ನು ತೆರವುಗೊಳಿಸುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಜಲಾಶಯಗಳಲ್ಲಿ ಶೇಖರಣೆಯಾಗಿರುವ ಮರಳು ಪ್ರಮಾಣದ ಮಾಹಿತಿಯನ್ನು  ತುರ್ತಾಗಿ ಪಡೆದು ಜಿಲ್ಲಾಡಳಿತಕ್ಕೆ ಒದಗಿಸುವಂತೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಅರಣ್ಯ ಇಲಾಖೆಯ ಅಧಿಕಾರಿಗಳು ಜಂಟಿ ಪರಿಶೀಲನೆ ಕೈಗೊಂಡು ಹೂಳು ತೆರವುಗೊಳಿಸುವ ಸಾಧಕ-ಬಾಧಕಗಳ ಕುರಿತು ಪರಿಶೀಲನೆ ನಡೆಸಿ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಜಿಲ್ಲೆಯ ನಾನ್ ಸಿಆರ್ಜಡ್  ವ್ಯಾಪ್ತಿಯ ಹಳಿಯಾಳ, ಯಲ್ಲಾಪುರ, ಶಿರಸಿ, ಸಿದ್ದಾಪುರ ತಾಲೂಕಿನ 1, 2 ಮತ್ತು 3 ನೇ ಶ್ರೇಣಿಯಲ್ಲಿನ ಕೆರೆ, ಹಳ್ಳ, ಕೊಳ್ಳಗಳಲ್ಲಿ ದೊರೆಯಬಹುದಾದ ಮರಳು ನಿಕ್ಷೇಪಗಳನ್ನು ಗುರುತಿಸಲು ಸಂಬಂಧಿಸಿದ ಪಂಚಾಯಿತಿಯ ಕಾರ್ಯನಿರ್ವಹಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದೊರೆಯಬಹುದಾದ ಮರಳು ನಿಕ್ಷೇಪಗಳ ಬಗ್ಗೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮರಳು ಬ್ಲಾಕ್‌ಗಳನ್ನು ಗುರುತಿಸಿ ವಿಲೇವಾರಿಗೆ ಕ್ರಮ ವಹಿಸುವಂತೆ ಹಾಗೂ ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ ತಾಲೂಕಿನ 4,5, ಮತ್ತು 6 ನೇ ಶ್ರೇಣಿಯಲ್ಲಿನ ನದಿ ಪಾತ್ರದಲ್ಲಿ ದೊರೆಯಬಹುದಾದ ಮರಳು ನಿಕ್ಷೇಪಗಳನ್ನು ಗುರುತಿಸಿ ಸೂಕ್ತ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ  ಶಾಸಕಿ ರೂಪಾಲಿ ನಾಯ್ಕ,   ವಿಧಾನ ಪರಿಷತ್‌ ಸದಸ್ಯ ಗಣಪತಿ ಉಳ್ವೆಕರ್‌, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ , ಉಪವಿಭಾಗಾಧಿಕಾರಿಗಳು ಜಯಲಕ್ಷ್ಮಿ ರಾಯಕೋಡ, ಡಿಎಫ್ಓ ಪ್ರಶಾಂತ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...