ಐವರು ಬಾಲ ಕಾರ್ಮಿಕರ ರಕ್ಷಣೆ. ಮಾಲೀಕರ ಮೇಲೆ ಪ್ರಕರಣ ದಾಖಲು.

Source: SO News | By Laxmi Tanaya | Published on 22nd October 2020, 9:26 PM | State News | Don't Miss |

ಬಳ್ಳಾರಿ : ತಾಲೂಕು ಮಟ್ಟದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಅಡಿಯಲ್ಲಿ ನೇಮಕವಾದ ನಿರೀಕ್ಷಕರ ಟಾಸ್ಕ್ ಪೋರ್ಸ್ ಕಾರ್ಯಕಾರಿ ಸಮಿತಿ ಅಧಿಕಾರಿಗಳು ಗುರುವಾರರಂದು ನಗರದ ಎಪಿಎಂಸಿ ಮಾರ್ಕೆಟ್ ಹತ್ತಿರ ಪಂಚರ್ ಶಾಪ್, ಟಿಂಕರಿಂಗ್ ಶಾಪ್, ಗ್ಯಾರೇಜ್ ವುಡ್ ವರ್ಕ್ಸ್ ಶಾಪ್, ಮೆಕ್ಯಾನಿಕ್ ಶಾಪ್ ಇತ್ಯಾದಿ ಅಂಗಡಿ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ ಐವರು ಬಾಲಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಓರ್ವ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಿದೆ.

  ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕರು
 ನಡೆಸಿದ ದಾಳಿ ಬಳಿಕ ಒಬ್ಬ ಮಾಲೀಕನ ಮೇಲೆ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಯಿತು. ಉಳಿದ ನಾಲ್ಕು ಮಾಲೀಕರ ಮೇಲೆ ಕಾರ್ಮಿಕ ಕಾಯ್ದೆಯಡಿಯಲ್ಲಿ ನೋಟಿಸ್ ಜಾರಿ ಮಾಡಲಾಯಿತು. ಮಕ್ಕಳನ್ನು ಪೋಷಕರೊಂದಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಅಂಗಡಿ ಮತ್ತು ಉದ್ದಿಮೆ ಮಾಲೀಕರಿಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳಬಾರದೆಂದು ಜಾಗೃತಿ ಮೂಡಿಸಲಾಯಿತು.

ಈ ದಾಳಿ ಮಾಡಿದ ಸಂದರ್ಭದಲ್ಲಿ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ 2ನೇ ವೃತ್ತ ಕಾರ್ಮಿಕ ನಿರೀಕ್ಷಕರಾದ ಎಂ.ರವಿದಾಸ್, ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಎ.ಮೌನೇಶ್, 1ನೇ ವೃತ್ತ ಕಾರ್ಮಿಕ ನಿರೀಕ್ಷಕರಾದ ಸಿ.ಎನ್ ರಾಜೇಶ್, ಕ್ಷೇತ್ರಾಧಿಕಾರಿಗಳಾದ ಪಿ.ಎಂ.ಈಶ್ವರಯ್ಯ, ಕಂದಾಯ ನಿರೀಕ್ಷಕರಾದ ಎಸ್ ಸುರೇಶ್, ಶಿಕ್ಷಣ ಇಲಾಖೆಯ ರುದ್ರಮಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಗಂಗಾಧರ, ಚೈಲ್ಡ್ ಲೈನ್ ಸಿಬ್ಬಂದಿಗಳಾದ ಕಾರ್ತಿಕ್ ಮತ್ತು ಚಂದ್ರಕಲಾ, ಗ್ರಾಮ ಲೆಕ್ಕಾಧಿಕಾರಿಯಾದ ಪ್ರಭುಲಿಂಗ ಸೇರಿದಂತೆ ಇತರರು ಇದ್ದರು.

Read These Next

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...