ಉಗ್ರರ ದಾಳಿಯನ್ನು ವಿರೋಧಿಸಿ ಪ್ರೋ|| ಎಂ.ಡಿ.ಎನ್. ರೈತ ಸಂಘದಿಂದ ಧರಣಿ

Source: sonews | By Staff Correspondent | Published on 15th February 2019, 10:50 PM | State News |

ಕೋಲಾರ : ಕಾಶ್ಮೀರದ ಅವಂತಿಪೋರಾದಲ್ಲಿ ಸಿಆರ್‍ಪಿಎಫ್ ಬಸ್‍ಗೆ ಸ್ಪೋಟಗೊಳಿಸಿ ಉಗ್ರರ ದಾಳಿಗೆ 42 ಜನ ಯೋದರು ಬಲಿಯಾಗಿರುವ ಯೋಧರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಮತ್ತೆ  ಇಂತಹ ಅಹಿತಕರ ಘನಟೆ ನಡೆಯಂತೆ ಸೂಕ್ತ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿ ಮಾಲೂರು ತಹಸೀಲ್ದಾರ್‍ರವರ ಮುಖಾಂತರ ರೈತ ನಾಯಕ ಪ್ರೋ|| ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯು ಮನವಿಯನ್ನು ನೀಡಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಕಲ್ವಮಂಜಲಿ ರಾಮು ಶಿವಣ್ಣ ಮಾತನಾಡಿ ಕಾಶ್ಮೀರದ ಅವಂತಿಪೋರಾದಲ್ಲಿ ಸಿಆರ್‍ಪಿಎಫ್ ಬಸ್‍ಗೆ ಜೈಷ್ –ಎ–ಮೊಹಮ್ಮದ್ ಉಗ್ರನೊಬ್ಬ ಸ್ಪೋಟಕ ತುಂಬಿದ್ದ ಸ್ಕಾರ್ಪೀಯೋವನ್ನು ಡಿಕ್ಕಿ ಹೊಡೆಸಿದ್ದರಿಂದ 42 ಜನ ಯೋದರು ಬಲಿಯಾಗಿದ್ದು, ಇದಕ್ಕೆ ಭದ್ರತಾ ಲೋಪವೇ ಕಾರಣವಾಗಿದೆ.

ಶ್ರೀನಗರ – ಜಮ್ಮು ಹೆದ್ದಾರಿಗೆ ಅತಿ ಹೆಚ್ಚು ಭದ್ರತೆ ಇದೆ. ಭಯೋತ್ಪಾದನಾ ಚಟುವಟಿಕೆ ತಡೆ ಕಾರ್ಯಾಚರಣೆಯನ್ನು ಇಲ್ಲಿ ನಿಯಮಿತವಾಗಿ ನಡೆಸಲಾಗುತ್ತಿದೆ.  2500ರಷ್ಟು ಸಿಆರ್‍ಪಿಎಫ್ ಸಿಬ್ಬಂದಿ ಪ್ರಯಾಣಿಸುತ್ತಿರುವಾಗ ಇಂತಹ ದಾಳಿ ನಡೆದಿರುವುದು ಹೇಗೆ ಎಂಬ ಪ್ರಶ್ನೆ ಉದ್ಭವವಾಗುತ್ತದೆ. ಭದ್ರತಾ ಲೋಪ ಉಂಟಾಗಿದೆ ಸೂಕ್ತ ತನಿಖೆಯಾಗಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.  ನಾರಾಯಣಸ್ವಾಮಿ ಮಾತನಾಡಿ ದೇಶವು ಆಕ್ರೋಶ ಮತ್ತು ಸಂಕಟಗೊಂಡಿದೆ. ರಾಷ್ಟ್ರೀಯ ಭದ್ರತೆಯ ಬಗ್ಗೆ ಕೇಂದ್ರ ಸರ್ಕಾರದ ವೈಫಲ್ಯವೇ ಈ ದಾಳಿಗೆ ಕಾರಣ. ರಾಜಕೀಯ ತೀರ್ಮಾನವೇ ಇಲ್ಲದಿರುವುದು ಮತ್ತು ಭಯೋತ್ಪಾದನೆ ತಡೆಗಟ್ಟಲು ನೀತಿ ರೂಪಿಸದಿರುವುದು ಈಗಿ ಅಪಾಯಕಾರಿ ಸ್ಥಿತಿಗೆ ದೇಶವನ್ನು ದೂಡಿದಂತಾಗಿದೆ.

ಮಾನ್ಯ ಪ್ರಧಾನ ಮಂತ್ರಿಗಳೇ, ದಯಮಾಡಿ ಹುತಾತ್ಮ ಯೋಧರ ಕುಟುಂಬಗಳಿಗೆ ಸೂಕ್ತವಾದ ಪರಿಹಾರವನ್ನು ನೀಡಬೇಕು ಮತ್ತೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ರೂಪಸಿಸಬೇಕೆಂದು ಈ ಮೂಲಕ ನಮ್ಮ ಸಂಘಟನೆಯು ಒತ್ತಾಯಿಸುತ್ತದೆ.

ಸಂದರ್ಭದಲ್ಲಿ  ಜಿಲ್ಲಾ ಉಪಾಧ್ಯಕ್ಷ ನಂದಕುಮಾರ್, ಜಿಲ್ಲಾ ಕಾರ್ಯಾಧ್ಯಕ್ಷ ಪ್ರೆಸ್ ಗಣೇಶ್, ಕೋಲಾರ ತಾಲ್ಲೂಕು ಅಧ್ಯಕ್ಷ ಶಿಳ್ಳಂಗೆರೆ ವೇಣುಗೋಪಾಲ್, ಮುಳಬಾಗಿಲು ತಾಲ್ಲೂಕು ಅಧ್ಯಕ್ಷ ಎಲ್.ಎನ್.ಬಾಬು, ನಗರ ಅಧ್ಯಕ್ಷ ಶ್ರೀನಾಥ್, ಬಂಗಾರಪೇಟೆ ತಾಲ್ಲೂಕು ಅಧ್ಯಕ್ಷ ಕದಿರೇನಹಳ್ಳಿ ಶ್ರೀನಿವಾಸ್, ಶ್ರೀನಿವಾಸಪುರ ತಾಲ್ಲುಕು ಆದ್ಯಕ್ಷ ದೊಡ್ಡಕುರುಬರಹಳ್ಳಿ ಶಂಕರಪ್ಪ, ಶಾಲಾ ಮುಖ್ಯಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

              

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...