ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ ಪ್ರತಿಭಟನಾ ಪ್ರದರ್ಶನ

Source: SO News | By Laxmi Tanaya | Published on 3rd December 2021, 9:31 PM | Coastal News | Don't Miss |

ಮಂಗಳೂರು : ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ,‌ ಸಂವಿಧಾನಬದ್ದ ರಕ್ಷಣೆ ನೀಡಲು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಸಮಗ್ರ ಅಭಿವ್ರದ್ದಿಗೆ ಒತ್ತಾಯಿಸಿ ಸಿಪಿಐಎಂ ಕೇಂದ್ರ ಸಮಿತಿ ಕರೆಯ ಮೇರೆಗೆ ನಗರದಲ್ಲಿಂದು  ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನವನ್ನು ನಡೆಸಲಾಯಿತು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಸಿಪಿಐಎಂ ಕಾರ್ಯಕರ್ತರು, ಕೋಮುದ್ವೇಷ ಹಬ್ಬಿಸುವ ಬಿಜೆಪಿ ಸಂಘಪರಿವಾರದ ವಿರುದ್ದ ಆಕ್ರೋಶಭರಿತರಾಗಿ ಘೋಷಣೆಗಳನ್ನು ಮೊಳಗಿಸಿದರು.

 ಬಳಿಕ ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ CPIM ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿಯವರು ಸ್ವಾತಂತ್ರ್ಯ ಚಳುವಳಿಯ ಕಾಲಘಟ್ಟದಲ್ಲೇ ಕೋಮುದ್ವೇಷವನ್ನು ಹಬ್ಬಿಸಿ ತನ್ನ ನೀಚ ರಾಜಕೀಯವನ್ನು ಪ್ರದರ್ಶಿಸಿದ ಆರ್ಎಸ್ಎಸ್ ಗೆ ದೇಶದ ಜನತೆ ಅಂದೇ ಸರಿಯಾದ ಪಾಠವನ್ನು ಕಲಿಸಿದ್ದರೂ ದೇಶ ವಿಭಜನೆಗೊಳ್ಳುವಲ್ಲಿ ಆರ್ ಎಸ್ ಎಸ್ ನ ಕುತಂತ್ರವೂ ಅಡಗಿದೆ. ಕಳೆದ 3 ದಶಕಗಳಿಂದ ಸಂಘಪರಿವಾರವು ವ್ಯವಸ್ಥಿತ ಸಂಘಟನಾ ಜಾಲದಿಂದಾಗಿ ದೇಶದ ಜಾತ್ಯಾತೀತ ತತ್ವಕ್ಕೆ ತಿಲಾಂಜಲಿಯನ್ನಿಡಲು ಹೊರಟಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲುಗೊಳಿಸಿ ಸರ್ವಾಧಿಕಾರಿ ಫ್ಯಾಸಿಸ್ಟ್ ನಡೆಯತ್ತ ದೇಶ ಹೋಗುತ್ತಿರುವುದು ತೀರಾ ಗಂಭೀರ ಅಂಶವಾಗಿದೆ. ದೇಶದ ಪ್ರತಿಯೊಂದು ಸಮಸ್ಯೆಗಳಿಗೆ ಅಲ್ಪಸಂಖ್ಯಾತರೇ ಕಾರಣವೆಂಬ ಸುಳ್ಳನ್ನು ಸಾವಿರ ಸಾವಿರ ಬಾರಿ ಹೇಳಿ ಕೋಮುಭಾವನೆ ಕೆರಳಿಸಿ ಅಲ್ಪಸಂಖ್ಯಾತರ ಮೇಲೆ ಅವ್ಯಾಹತವಾಗಿ ದಾಳಿ ದಬ್ಬಾಳಿಕೆ ಹತ್ಯೆಗಳನ್ನು ನಡೆಸಲಾಗುತ್ತಿದೆ. ಇಂತಹ ದುಷ್ಕ್ರತ್ಯಗಳನ್ನು ತಡೆಯಲು ದೇಶದ ಜನತೆ ಒಂದಾಗಬೇಕಾಗಿದೆ ಎಂದು ಹೇಳಿದರು.

ಸಿಪಿಐಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಮುನೀರ್ ಕಾಟಿಪಳ್ಳ ರವರು ಮಾತನಾಡುತ್ತಾ, ಮತಾಂತರದ ನೆಪ ಒಡ್ಡಿ, ಕ್ರೈಸ್ತರ ಧಾರ್ಮಿಕ ಆರಾಧನಾ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ, ಈ ದಾಳಿಗಳಲ್ಲಿ ಹಿಂಸೆಗೆ ಒಳಗಾದ ಬಹುತೇಕ ಜನರು ಆದಿವಾಸಿಗಳು ಮತ್ತು ದಲಿತರಾಗಿದ್ದಾರೆ. ಗೋರಕ್ಷಣೆ, ಲವ್ ಜಿಹಾದ್ ಗಳೆಂಬ ದುಷ್ಕೃತ್ಯದ ಹೆಸರಲ್ಲಿ ಮುಸ್ಲಿಂ ಅಲ್ಪ ಸಂಖ್ಯಾತ ಸಮುದಾಯದ ಸದಸ್ಯರ ಮೇಲಿನ ಹಿಂಸಾಚಾರ ಪ್ರಕರಣಗಳು ಮುಂದುವರಿಯುತ್ತಿವೆ. ಮಸೀದಿಗಳನ್ನು ಹಾಳುಗೆಡವುತ್ತಿದ್ದಾರೆ, ಬೀದಿ ಬದಿ ವ್ಯಾಪಾರಿಗಳನ್ನು ಬೆದರಿಸಲಾಗುತ್ತಿದೆ, ಶಿಕ್ಷಣ ಸಂಸ್ಥೆಗಳಲ್ಲಿ ಸಹ ಹೊಸ,ಹೊಸ ಸಮಸ್ಯೆಗಳನ್ನು ಬೇಕೆಂದೇ ಸೃಷ್ಟಿಸಲಾಗುತ್ತಿದೆ. ಅಲ್ಲದೇ ಸೌರ್ಹಾಧತೆಯ ಕೇಂದ್ರಗಳಾಗಬೇಕಾದ ಇವುಗಳನ್ನು ಕೋಮು ವಿಭಜನೆ ತರುವ , ಪರಸ್ಪರ ನಂಬಿಕೆ, ವಿಶ್ವಾಸಗಳು ಇಲ್ಲದಂತೆ ಪರಿವರ್ತಿಸಿ ನಿರ್ಮಾಣಮಾಡುವ ಕೇಂದ್ರಗಳನ್ನಾಗಿಸುತ್ತಿವೆ. ಇಂತಹ ಪ್ರಯತ್ನಗಳನ್ನು ಸರ್ಕಾರ ನಿರ್ದಾಕ್ಷಿಣ್ಯವಾಗಿ ತಡೆಯಬೇಕಾಗಿದೆ ಎಂದರು. 

ಸಿಪಿಐಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್ ರವರು, ದ.ಕ.ಜಿಲ್ಲೆಯಲ್ಲಿ ಸಂಘ ಪರಿವಾರವು ಕಳೆದ ಕೆಲವು ದಶಕಗಳಿಂದ ನಡೆಸಿಕೊಂಡು ಬರುತ್ತಿರುವ ಕೊಮು ರಾಜಕೀಯವನ್ನು ಹಾಗೂ ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ಎಳೆಎಳೆಯಾಗಿ ಬಿಡಿಸಿ ಹೇಳುತ್ತಾ ಕೋಮು ರಾಜಕಾರಣಕ್ಕೆ ಎದುರಾಗಿ ರಾಜಕೀಯವನ್ನು ಬೆಳೆಸಬೇಕಾಗಿದೆ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ CPIM ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸಂತೋಷ್ ಬಜಾಲ್ ರವರು, ಅಲ್ಪಸಂಖ್ಯಾತರ ಮೇಲಿನ ದಾಳಿಗೆ ಕುಮ್ಮಕ್ಕು ನೀಡುತ್ತಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೋಮು ರಾಜಕಾರಣವನ್ಮು ಒತ್ತಿ ಹೇಳುತ್ತಾ, ಅಲ್ಪಸಂಖ್ಯಾತರ ಸಂವಿಧಾನಬದ್ದ ಹಕ್ಕುಗಳ ರಕ್ಷಣೆಗಾಗಿ ಕಟಿಬದ್ದರಾಗಬೇಕೆಂದು ಹೇಳಿದರು.

ಪ್ರತಿಭಟನೆಯಲ್ಲಿ CPIM ಮಂಗಳೂರು ನಗರ ದಕ್ಷಿಣ ಮತ್ತು ಉತ್ತರ ಸಮಿತಿಗಳ ಮುಖಂಡರಾದ ಬಶೀರ್ ಅಹಮ್ಮದ್, ದಯಾನಂದ ಶೆಟ್ಟಿ, ಬಿ.ಕೆ.ಇಮ್ತಿಯಾಜ್, ನವೀನ್ ಕೊಂಚಾಡಿ, ಅಶೋಕ್ ಶ್ರೀಯಾನ್, ಕ್ರಷ್ಣ ತಣ್ಣೀರುಬಾವಿ, ಪ್ರಮೀಳಾ ಶಕ್ತಿನಗರ, ಶ್ರೀನಾಥ್ ಕಾಟಿಪಳ್ಳ, ದಿನೇಶ್ ಶೆಟ್ಟಿ, ಭಾರತಿ ಬೋಳಾರ, ಮುಸ್ತಾಫ, ಇಕ್ಬಾಲ್, ಸಾಮಾಜಿಕ ಹೋರಾಟಗಾರರಾದ ಜೆರಾಲ್ಡ್ ಟವರ್ ಮುಂತಾದವರು ಭಾಗವಹಿಸಿದ್ದರು.

Read These Next

ಭಟ್ಕಳ ಸೆಂಟ್ರಲ್ ಫತ್ರ್ ಕಮಿಟಿ ವತಿಯಿಂದ ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಓರ್ವ ಮಹಿಳೆ ಮೃತ್ಯು, ಇಬ್ಬರ ಸ್ಥಿತಿ ಗಂಭೀರ!

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರ ...