ಮುಝಫರ್‌ನಗರ: ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಪ್ರತಿಭಟನೆ ಮುಂದುವರಿಯಲಿದೆ: ಟಿಕಾಯತ್

Source: VB | By S O News | Published on 9th March 2021, 9:15 AM | National News |

ಮುಝಫರ್‌ನಗರ: ವಿವಾದಾತ್ಮಕ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವರೆಗೆ ತಮ್ಮ ಚಳವಳಿ ಮುಂದುವರಿಯಲಿದೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕೇಂದ್ರ ಸರಕಾರದ ಕೃಷಿ ಕಾಯ್ದೆಗಳ ವಿರುದ್ದ ದಿಲ್ಲಿ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ 100 ದಿನ ಪೂರ್ಣಗೊಂಡ ಹಿನ್ನೆಲೆಯಲ್ಲಿ ಮುಝಪ್ಟರ್‌ನಗರ್‌ನ ರಾಮರಾಜ್ ಪಟ್ಟಣದಲ್ಲಿ ಶನಿವಾರ ಅವರು ಮಾತನಾಡಿದರು. ಮೂರು ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂಪಡೆಯಲು ರೈತರು ಆಗ್ರಹಿಸುತ್ತಿದ್ದಾರೆ. ಅಲ್ಲದೆ, ಕೇಂದ್ರ ಸರಕಾರ ತಮ್ಮ ಬೇಡಿಕೆ ಈಡೇರಿಸುವವರೆಗೆ ಚಳವಳಿ ಮುಂದುವರಿಯಲಿದೆ ಎಂದು ಟಿಕಾಯತ್ ಹೇಳಿದ್ದಾರೆ. ಟ್ರ್ಯಾಕ್ಟರ್ ಕ್ಯಾಲಿಗೆ ಹಸಿರು ನಿಶಾನೆ ತೋರಿಸಿದ ಕಾರ್ಯಕ್ರಮದಲ್ಲಿ ಅವರು, ತಾನು ಉತ್ತರಪ್ರದೇಶ ಹಾಗೂ ಉತ್ತರಾ ಖಂಡದ ಜಿಲ್ಲೆಗಳಾದ್ಯಂತ ಪ್ರವಾಸ ಕೈಗೊಳ್ಳ ಲಿದ್ದೇನೆ ಹಾಗೂ ಮಾರ್ಚ್ 27ರಂದು ಘಾಝಿಪುರದ ಪ್ರತಿಭಟನಾ ಸ್ಥಳಕ್ಕೆ ತಲುಪ ಲಿದ್ದೇನೆ ಎಂದರು.

 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...