ಬಾಲಮಂದಿರದಲ್ಲಿ ಮಕ್ಕಳ ಸ್ನೇಹಿ ವಾತಾವರಣ ಕಲ್ಪಿಸಿ: ಜಿಲ್ಲಾಧಿಕಾರಿ ಎಸ್.ಅಶ್ವತಿ

Source: SO News | By Laxmi Tanaya | Published on 8th September 2021, 10:48 PM | State News | Don't Miss |

ಮಂಡ್ಯ : ಜಿಲ್ಲೆಯ ಬಾಲಮಂದಿರಗಳಲ್ಲಿ  ಮಕ್ಕಳ ಸ್ನೇಹಿ ವಾತಾವರಣ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ  ಅಧಿಕಾರಿಗಳಿಗೆ ಸೂಚಿಸಿದರು.

ಬುಧವಾರ ನಗರದ ವಿಶೇಶ್ವರಯ್ಯ ನಗರ ಬಾಲಕಿಯರ ಬಾಲಮಂದಿರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ, 
ಬಾಲಮಂದಿರದಲ್ಲಿ ಮಕ್ಕಳಿಗೆ ಮೂಲಸೌಕರ್ಯಗಳು, ಸಾಂತ್ವನ, ಪುನಶ್ಚೇತನದ ಮೂಲಕ ಮಕ್ಕಳನ್ನು ಸಂರಕ್ಷಿಸಿ ಎಂದು ಹೇಳಿದರು.
ಬಾಲಮಂದಿರದಲ್ಲಿನ ಸಮಸ್ಯೆಗಳು ಕುಂದುಕೊರತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನೂತನ ಬಾಲಮಂದಿರ ನಿರ್ಮಾಣ  ಸ್ಥಳಕ್ಕೆ ಭೇಟಿ ನೀಡಿದರು.

ನಂತರ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಅಲ್ಲಿನ ಪಾರಂಪರಿಕ ಹಾಗೂ ಪ್ರವಾಸಿತಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೋವಿಡ್ 2 ಅಲೆಯ ನಂತರ ಶ್ರೀರಂಗಪಟ್ಟಣದಲ್ಲಿ ಪುನರ್ ಆರಂಭಗೊಂಡ 6 ರಿಂದ 8 ನೇ ತರಗತಿ ಶಾಲೆಗಳಿಗೆ ಭೇಟಿ ನೀಡಿ ಮೂಲಸೌಕರ್ಯ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು, ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ , ಸ್ಯಾನಿಟೈಸರ್ ಬಳಕೆ ಬಗ್ಗೆ  ಅರಿವು ಮೂಡಿಸಿದರು.

ಶ್ರೀರಂಗಪಟ್ಟಣದಲ್ಲಿ ನಡೆಯುತ್ತಿರುವ ಲಸಿಕಾಕರಣ ಕೇಂದ್ರಕ್ಕೆ ಭೇಟಿ ನೀಡಿ, ಲಸಿಕಾಕರಣದ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದರು.

ಈ‌ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಬಾಲಮಂದಿರದ ಅಧಿಕಾರಿಗಳು, ಹಾಗೂ ಶಾಲಾ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...