ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದರೆ ಕಠಿಣ ಕ್ರಮ: ಎಸ್ಪಿ ಎನ್ ವಿಷ್ಣುವರ್ಧನ

Source: Press Release | Published on 4th August 2022, 6:59 PM | Coastal News | Don't Miss |

ಉಡುಪಿ: ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದಷ್ಟು ಮಂದಿ ಪ್ರಚೋದನಕಾರಿ ಹೇಳಿಕೆಗಳನ್ನು ಹಾಕುತ್ತಿರುವ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಗಂಭೀರವಾಗಿ ಪರಿಗಣಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶ ಅಥವಾ ಹೇಳಿಕೆಗಳನ್ನು ಹಾಕಿದಲ್ಲಿ ಅಂತವರ ವಿರುದ್ದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮ್ಯಾಂಗಲೋರಿಯನ್ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು ಫೇಸ್ ಬುಕ್, ವಾಟ್ಸಾಪ್, ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಹಾಗೂ ಪರಸ್ಪರ ಗುಂಪಿನ ನಡುವೆ ದ್ವೇಷ ಭಾವನೆ ಬರುವಂತಹ ಪ್ರಚೋದನಕಾರಿ ಹೇಳಿಕೆ (ಪೋಸ್ಟ್) ಗಳನ್ನು ಹಾಕುವವರ/ಫಾರ್ವರ್ಡ್ ಮಾಡುವವರ ವಿರುದ್ದವೂ ಕಾನೂನು ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಈ ಬಗ್ಗೆ ವಾಟ್ಸಪ್, ಗ್ರೂಪ್ ಅಡ್ಮಿನ್ ಗಳು ಬಳಕೆದಾರರು ಹಾಗೂ ಸಂದೇಶಗಳನ್ನು ಫಾರ್ವರ್ಡ್ ಮಾಡುವವರು ಸೂಕ್ತ ಎಚ್ಚರಿಕೆಯನ್ನು ವಹಿಸುವುದು ಹಾಗೂ ವಾಟ್ಸಾಪ್ ಗ್ರೂಪ್ ಅಡ್ಮಿನ್ ಗಳು ತಮ್ಮ ಗುಂಪಿನ ಸದಸ್ಯರಿಗೆ ಸೂಕ್ತ ತಿಳುವಳಿಕೆ ನೀಡಬೇಕು.

ಸಂಘಟನೆ, ವ್ಯಕ್ತಿಗಳು ಸೇರಿದಂತೆ ಸಾಮಾಜಿಕ ಜಾಲ ತಾಣದಲ್ಲಿ ಸಕ್ರಿಯವಾಗಿರುವ ನಾನಾ ವ್ಯಕ್ತಿಗಳು, ಗುಂಪುಗಳ ಮೇಲೆ ಕಠಿಣ ನಿಗಾ ಇರಿಸಲಾಗಿದೆ. ಆನ್ಲೈನ್ ಮಾಧ್ಯಮ, ವೆಬ್ ಪೇಜ್, ಮುದ್ರಣ ಮಾಧ್ಯಮ ಮೇಲೂ ನಿಗಾ ವಹಿಸಲಾಗಿದೆ.

ಸಾಮಾಜಿಕ ಜಾಲತಾಣಗಳ ಮೂಲಕ ಕೋಮು ಭಾವನೆ ಸೃಷ್ಟಿಸಿ, ಜಾತಿ ಧರ್ಮಗಳ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡುವ ಫೋಸ್ಟ್ಗಳ ಮೇಲೆ ನಿಗಾ ವಹಿಸಲಾಗುತ್ತಿದ್ದು, ಇಂತಹ ಪೋಸ್ಟ್ಗಳನ್ನು ಲೈಕ್, ಶೇರ್, ಫಾರ್ವಡ್ ಹಾಗೂ ಆಕ್ಷೇಪಾರ್ಹವಾಗಿ ಕಮೆಂಟ್ ಮಾಡುವವರ ವಿರುದ್ಧವೂ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಯಾರೇ ಆದರೂ ವಿವಾದಾತ್ಮಕ ಪೋಸ್ಟರ್, ಪ್ರಚೋಧನಾಕಾರಿ ಹೇಳಿಕೆ, ಗುಂಪುಗಾರಿಕೆ, ಗಲಾಟೆ ಮಾಡಿ ಸಮಾಜದ ಶಾಂತಿ, ನೆಮ್ಮದಿಗೆ ಭಂಗ ತರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಪೋಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...