ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ, ಮೊದಲನೇ ಪಿಯು ವಿದ್ಯಾರ್ಥಿಗಳಿಗೆ ಪ್ರಮೋಷನ್

Source: VB | By S O News | Published on 5th May 2021, 9:09 PM | State News |

ಬೆಂಗಳೂರು: ರಾಜ್ಯದಲ್ಲಿ ಕೊರೋನ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಸುರಕ್ಷತೆಯ ದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆ ಮುಂದೂಡುವುದು ಅನಿವಾರ್ಯವಾಗಿದೆ.

ಮುಂದಿನ ಪರೀಕ್ಷಾ ದಿನಾಂಕವನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದೆಂದು ತಿಳಿಸಿದರು.

ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗಬಾರದು. ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸ ಹಾಗೂ ಪರೀಕ್ಷಾ ತಯಾರಿಯನ್ನು ಎಂದಿನಂತೆ ಮುಂದುವರಿಸಬೇಕೆಂದು ಅವರು ಮನವಿ ಮಾಡಿದರು.

ಮೊದಲನೇ ಪಿಯು ವಿದ್ಯಾರ್ಥಿಗಳಿಗೆ ಪ್ರಮೋಷನ್:

ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದ್ದು, ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸ್‌ಗಳನ್ನು ನಡೆಸಲಾಗುತ್ತದೆ. ಹಾಗೆಯೇ ಇಲಾಖೆಯೂ ಯೂಟ್ಯೂಬ್ ಚಾನೆಲ್ ಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸ್ ಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳುವುದು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಪಿಯು ಮಂಡಳಿಯ ನಿರ್ದೇಶಕಿ ಆರ್. ಸ್ನೇಹಲ್ ಮತ್ತಿತರರು ಭಾಗವಹಿಸಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...