ಕಚ್ಚಿದ ಮಾರುದ್ದದ ಹೆಬ್ಬಾವಿನೊಂದಿಗೆ ಆಸ್ಪತ್ರೆಗೆ ಬಂದ ವ್ಯಕ್ತಿ!

Source: so news | By MV Bhatkal | Published on 22nd June 2019, 6:43 AM | Coastal News | Don't Miss |

ಭಟ್ಕಳ: ಕಚ್ಚಿದ ಹೆಬ್ಬಾವನ್ನು ಹಿಡಿದುಕೊಂಡೇ ವ್ಯಕ್ತಿಯೊಬ್ಬ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿರುವ ಘಟನೆ ಭಟ್ಕಳದಲ್ಲಿ ಶುಕ್ರವಾರ ನಡೆದಿದೆ.
ಭಟ್ಕಳ ತಾಲ್ಲೂಕಿನ ಪುರವರ್ಗದ ವೆಂಕಟರಮಣ ನಾಯ್ಕ ಹೆಬ್ಬಾವಿನಿಂದ ಕಚ್ಚಿಸಿಕೊಂಡು, ಸ್ನೇಹಿತರ ಸಹಾಯದಿಂದ ಹಾವನ್ನು ಆಸ್ಪತ್ರೆಗೆ ತಂದಿದ್ದಾರೆ.
ಭಟ್ಕಳದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ, ಕಾಲುವೆಗಳು ತುಂಬಿ ಹರಿಯುತ್ತಿವೆ. ಹೀಗೆ ಚೌಥನಿ ಹೊಳೆಯ ಬಳಿ ಹರಿಯವ ನೀರಿನಲ್ಲಿ ಹೆಬ್ಬಾವೊಂದು ಹರಿದು ಬರುತ್ತಿತ್ತು. ನಡೆದಾಡುವ ರಸ್ತೆಯಲ್ಲಿ ಸಿಕ್ಕಿ, ಯಾರಿಗಾದರೂ ಕಚ್ಚಿದರೆ ಅಪಾಯ ಎಂದು ಮನಗಂಡು ವೆಂಕಟರಮಣ ಹಾಗೂ ಅವರ ಕೆಲವು ಸ್ನೇಹಿತರು ಅದನ್ನು ಹಿಡಿಯಲು ಪ್ರಯತ್ನಿಸಿದರು‌.
ಈ ವೇಳೆ ವೆಂಕಟರಮಣ ಅವರಿಗೆ ಹಾವು ಕಡಿದು, ಗಾಯಗೊಳಿಸಿದೆ. ಇದರಿಂದ ವಿಚಲಿತಗೊಂಡ ಅವರು, ಆರೇಳು ಅಡಿ ಉದ್ದದ ಹೆಬ್ಬಾವನ್ನು ಸ್ನೇಹಿತರೊಂದಿಗೆ ಹಿಡಿದುಕೊಂಡೇ ಆಸ್ಪತ್ರೆಗೆ ಬಂದರು.
ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಹಾವನ್ನು ಹಿಡಿದುಕೊಂಡು, ಅರಣ್ಯ ಪ್ರದೇಶದಲ್ಲಿ ಬಿಟ್ಟು ಬಂದರು. ವೆಂಕಟರಮಣ ಅವರಿಗೆ ಭಟ್ಕಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...