ಅತಿವೃಷ್ಟಿಯಿಂದ ಹಾನಿಗೊಳಗಾದ ಕೆರೆಗಳ ತ್ವರಿತ ದುರಸ್ತಿ : ಸಚಿವ ಜೆ.ಸಿ.ಮಾಧುಸ್ವಾಮಿ

Source: SO News | By Laxmi Tanaya | Published on 7th September 2021, 9:51 PM | State News | Don't Miss |

ಧಾರವಾಡ : ಅತಿವೃಷ್ಟಿಯಿಂದ ಹಾನಿಗೊಳಗಾದ ಉತ್ತರ ಕನ್ನಡ ಹಾಗೂ ಧಾರವಾಡ ಜಿಲ್ಲೆಯ ಕೆರೆ, ಏತ ನೀರಾವರಿ ಮತ್ತಿತರ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ, ಪರಿಶೀಲಿಸಲಾಗಿದೆ. ಆದಷ್ಟು ಬೇಗ ಅವುಗಳನ್ನು ದುರಸ್ತಿಪಡಿಸಲಾಗುವುದು ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಹೇಳಿದರು.

 ಅಳ್ನಾವರ ತಾಲೂಕಿನ ಹೂಲಿಕೆರೆ ಗ್ರಾಮದ ಇಂದಿರಮ್ಮನ ಕೆರೆ ಒಡೆದ ಪ್ರದೇಶಕ್ಕೆ ಭೇಟಿ ನೀಡಿದ ಅವರು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

 ಇಂದು ಇಡೀ ದಿನ ಉತ್ತರ ಕನ್ನಡ ಜಿಲ್ಲೆಯ ಹೋಟೆಗಾಳಿ ಕೆರೆ, ಹೊನ್ನಳ್ಳಿ ಹಾಗೂ ಗುಳ್ಳಾಪುರ ಏತ ನೀರಾವರಿ ಯೋಜನೆಗಳು, ಯಡೋಗಾ, ಮಂಗಳವಾಡಾ ಬಾಂದಾರಗಳು ಹಾಗೂ ಧಾರವಾಡ ಜಿಲ್ಲೆಯ ಹೂಲಿಕೆರೆ ಗ್ರಾಮದ ಇಂದಿರಮ್ಮನ ಕೆರೆ ಹಾನಿಯನ್ನು ವೀಕ್ಷಿಸಿದ್ದೇನೆ. ಆದಷ್ಟು ಬೇಗ ದುರಸ್ತಿಪಡಿಸಲಾಗುವುದು. ಸ್ಥಳೀಯ ಶಾಸಕರು ಹಾಗೂ ತಜ್ಞರ ಸಲಹೆಗಳನ್ನೂ ಕೂಡ ಪಡೆಯಲಾಗುವುದು. 
2019 ರಲ್ಲಿ  ನಡೆದಿದೆ ಎನ್ನಲಾದ ಕೆಲವು ಕಾಮಗಾರಿಗಳ ಬಿಲ್‍ಗಳ ಕುರಿತು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ಐಐಎಸ್‍ಸಿ ಅಥವಾ ಇಂಜಿನಿಯರಿಂಗ್ ಕಾಲೇಜುಗಳ ತಂಡದಿಂದ ಮೂರನೇ ಪಾರ್ಟಿ ಪರಿಶೀಲನೆ ಮಾಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

 ಮಹದಾಯಿ-ಕಳಸಾ ಬಂಡೂರಿ ಯೋಜನೆಯು ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಗೆ ಒಳಪಡುವುದಿಲ್ಲ. ಈ ಯೋಜನೆಗಾಗಿ ಹೋರಾಡಿದ ಬಸವರಾಜ ಬೊಮ್ಮಾಯಿ ಅವರೇ ಈಗ ಮುಖ್ಯಮಂತ್ರಿಯಾಗಿದ್ದಾರೆ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರಿಗೂ ಯೋಜನೆಯ ಸಂಪೂರ್ಣ ಮಾಹಿತಿ ಇದೆ. ನ್ಯಾಯಾಧೀಕರಣದ ಮುಂದೆ ಗೋವಾ ರಾಜ್ಯ ಸಲ್ಲಿಸಿರುವ ಆಕ್ಷೇಪಣೆ ಇತ್ಯರ್ಥವಾದ ಕೂಡಲೇ ಕಾಮಗಾರಿ ಪ್ರಾರಂಭಿಸಿ, ಯೋಜನೆಗೆ ಅಗತ್ಯವಿರುವ ಹಣಕಾಸು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು.

 ಕಲಘಟಗಿ ಶಾಸಕ ಸಿ.ಎಂ. ನಿಂಬಣ್ಣವರ ಮಾತನಾಡಿ, ಇಂದಿರಮ್ಮನ ಕೆರೆ ದುರಸ್ತಿಗೆ 9.4 ಕೋಟಿ ರೂ.ಅಂದಾಜು ಪ್ರಸ್ತಾವನೆಗೆ ಸಣ್ಣ ನೀರಾವರಿ ಇಲಾಖೆ ಪ್ರಾಥಮಿಕ ಒಪ್ಪಿಗೆ ನೀಡಿದೆ, ತಾಂತ್ರಿಕ ಅನುಮೋದನೆ ಬಳಿಕ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

 ಸಣ್ಣ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ವಿನಾಯಕ ಮತ್ತಿತರರು ಇದ್ದರು..

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...