ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣ; ವಿಚಾರಣೆಗೆ ಪಟ್ನಾ ಹೈಕೋರ್ಟ್ ತಡೆ

Source: Vb | By I.G. Bhatkali | Published on 25th April 2023, 1:00 PM | National News |

ಪಟ್ನಾ: 'ಮೋದಿ ಉಪನಾಮ' ಕುರಿತ ಹೇಳಿಕೆಗೆ ಸಂಬಂಧಿಸಿದ ಮಾನನಷ್ಟ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಹಾರದ ವಿಶೇಷ ನ್ಯಾಯಾಲಯ ನಡೆಸುತ್ತಿರುವ ವಿಚಾರಣೆಗೆ ಪಟ್ನಾ ಉಚ್ಚ ನ್ಯಾಯಾಲಯ ಸೋಮವಾರ ಮೇ 16 ವರೆಗೆ ತಡೆ ನೀಡಿದೆ.

ಈ ಹೇಳಿಕೆಗೆ ಸಂಬಂಧಿಸಿ ಈಗಾಗಲೇ ಗುಜರಾತ್‌ ಸೂರತ್ ನ್ಯಾಯಾಲಯ ದಿಂದ ಶಿಕ್ಷೆ ವಿಧಿಸಲಾಗಿದೆ. ಆದುದರಿಂದ ಇದೇ ವಿಷಯಕ್ಕೆ ಮತ್ತೆ ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದ ರಾಹುಲ್ ಗಾಂಧಿ ಅವರ ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂದೀಪ್ ಕುಮಾರ್ ಅವರು ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಿದರು.

2019ರ ಲೋಕಸಭಾ ಚುನಾವಣೆ ಸಂದರ್ಭ ಕರ್ನಾಟಕದಲ್ಲಿ ನಡೆದ ಚುನಾವಣಾ ಡ್ಯಾಲಿಯಲ್ಲಿ ರಾಹುಲ್ ಗಾಂಧಿ ಅವರು ಈ ಮೋದಿ ಉಪನಾಮ ಹೇಳಿಕೆ ನೀಡಿದ್ದರು. ಇದರಿಂದ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲಿಗರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಪ್ರತಿಪಾದಿಸಿ ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...