ವಾಯುಭಾರ ಕುಸಿತ : ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳು ತತ್ತರ.

Source: SO News | By Laxmi Tanaya | Published on 21st September 2020, 7:25 AM | State News |

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ  ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹವಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿಯ ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ , ಶಿವಮೊಗ್ಗ , ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಪ್ಟೆಂಬರ್ 22 ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಳೆಯವರೆಗೆ ಮಳೆ ಮುಂದುವರಿಯುವ ಸಂಭವವಿದೆ.

ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯ ಹೆಚ್ಚಾಗಿದೆ. ಉಡುಪಿಯಲ್ಲಿ ನಾಲ್ಕು ದಶಕಗಳಲ್ಲಿಯೆ ಅತಿ ಹೆಚ್ಚು ಮಳೆ ದಾಖಲಾಗಿದೆ. 

ಉಡುಪಿಯಲ್ಲಿ ಸುರಿದ ಮಳೆಗೆ ಅಪಾರ ಹಾನಿಯಾಗಿದೆ. ಜಿಲ್ಲಾಡಳಿತದಿಂದ ಸುಮಾರು 827 ಕುಟುಂಬಗಳ 2874 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಮಂಗಳೂರಿನಲ್ಲಿ ವರುಣನ ಆರ್ಭಟಕ್ಕೆ 25 ಮನೆಗಳಿಗೆ ಹಾನಿಯಾಗಿವೆ. ಓರ್ವ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರ, ನೇತ್ರಾವತಿ, ಫಲ್ಗುಣಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಕೊಡಗು ಜಿಲ್ಲೆಯಲ್ಲಿ ಎರಡು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇನ್ನೂ ಕೂಡ ಗುಡುಗು ಸಹಿತ ವಾರೀ ಮಳೆ ಬೀಳುವ ಸಾಧ್ಯತೆ ಇದೆ. 

ಹೆಚ್ಚು ಸರಾಸರಿ ಮಳೆ : ಉಡುಪಿಯಲ್ಲಿ 197 ಮಿ.ಮಿ,, ದಕ್ಷಿಣಕನ್ನಡ 149 ಮಿ.ಮಿ, ಚಿಕ್ಕಮಗಳೂರು 258_ ಮಿ.ಮೀ, ಶಿವಮೊಗ್ಗ 82 ಮಿ.ಮೀ,  ಕುಂದಾಪುರ 222 ಮಿ.ಮೀ. ಸರಾಸರಿ ಮಳೆ ಸುರಿದಿದೆ.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...