ಲಾಕ್‍ಡೌನ್‍ನಿಂದ ನಷ್ಟ ಸೂಕ್ತ ಪರಿಹಾರ ನೀಡುವಂತೆ ರೈತ ಸಂಘ ಆಗ್ರಹ

Source: sonews | By Staff Correspondent | Published on 6th April 2020, 9:41 PM | State News |

ಕೋಲಾರ: ಜಿಲ್ಲಾದ್ಯಾಂತ ಕೋರೋನಾ ವೈರಸ್ ಲಾಕ್‍ಡೌನ್‍ನಿಂದ ನಷ್ಟವಾಗಿರುವ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವ ಜೊತೆಗೆ ಬೆಳೆ ಮಾಡಲು ಉಚಿತ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಸರ್ಕಾರದಿಂದ ನೀಡಬೇಕೆಂದು ರೈತಸಂಘದಿಂದ ತೋಟಗಾರಿಕೆ ಸಹಾಯಕ ನಿರ್ದೇಶಕರ ಮುಖಾಂತರ ಮುಖ್ಯಮಂತ್ರಿಗಳನ್ನು ಮನವಿ ನೀಡಿ ಅಗ್ರಹಿಸಲಾಯಿತು.

ಮನವಿ ನೀಡಿ ಮಾತನಾಡಿದ ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಹಾಮಾರಿ ಕೋರೋನಾ ನಿಯಂತ್ರಣಕ್ಕೆ ಭಾರತಾದ್ಯಾಂತ ಲಾಕ್‍ಡೌನ್ ಮಾಡಿರುವುದಕ್ಕೆ ರೈತರ ಅಭ್ಯಂತರವಿಲ್ಲ ಆದರೆ ಜಿಲ್ಲಾದ್ಯಾಂತ ಸಾಲ ಮಾಡಿ ಬೆಳೆದಿರುವ ಸಾವಿರಾರು ಎಕರೆ ಟೋಮೋಟೋ ಕ್ಯಾಪ್ಸಿಕಾಂ, ಹೂಕೋಸು ಮತ್ತಿತರ ವಾಣಿಜ್ಯ ಬೆಳೆಗಳು ಸಮೃದ್ದವಾಗಿ ಪಸಲು ಬಂದಿದ್ದು, ಮಾರುಕಟ್ಟೆಯಲ್ಲಿ ಬೆಲೆಯಿಲ್ಲದೆ ರಸ್ತೆಗೆ ಸುರಿಯುವ ಜೊತೆಗೆ ತೋಟದಲ್ಲಿ ಬೆಳೆ ನಾಶ ಮಾಡಬೇಕಾದ ಪರಿಸ್ಥಿತಿ ಜೊತೆಗೆ ಸಾಲ ಮಾಡಿ ಹಾಕಿದ ಬಂಡವಾಳ ಬಾರದೆ ಲಕ್ಷಾಂತರ ರೈತ ಕುಟುಂಬಗಳು ಸಂಕಷ್ಟದಲ್ಲಿವೆ.

ಜೊತೆಗೆ ಈಗಾಗಲೇ ಸಾಲದ ಸುಳಿಗೆ ಸಿಲುಕಿ ಮುಂದೆ ಬೆಳೆಯಿಡಲು ಹಣವಿಲ್ಲದೆ ಸಾಲ ಸಿಗದೆ ತೊಂದರೆಯಲ್ಲಿರುವ ರೈತ ಕುಟುಂಬಗಳನ್ನು ರಕ್ಷಣೆ ಮಾಡಲು ಬೆಳೆ ನಷ್ಟ ಪರಿಹಾರವನ್ನು ನೀಡುವ ಜೊತೆಗೆ ಮುಂದೆ ಕೃಷಿ ಮಾಡಲು ಅಗತ್ಯವಿರುವ ರಸಗೊಬ್ಬರ, ಬಿತ್ತನೆ ಬೀಜಗಳನ್ನು ಉಚಿತವಾಗಿ ಸರ್ಕಾರದಿಂದ ನೀಡಬೇಕೆಂದು ಅಗ್ರಹಿಸಿದರು.ಮನವಿ ಸ್ವೀಕರಿಸಿ ಮಾತನಾಡಿದ ಸಹ ನಿರ್ದೇಶಕರಾದ ಮಂಜುಳಾ ಜಿಲ್ಲಾದ್ಯಾಂತ ಸಾವಿರಾರು ಎಕರೆ ಬೆಳೆ ನಷ್ಟವಾಗಿದೆ. ನಿಮ್ಮ ಮನವಿಯನ್ನು ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಕಳುಹಿಸಿ, ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದರು.

ಮನವಿ ನೀಡುವಾಗ ಮಹಿಳಾ ಜಿಲ್ಲಾದ್ಯಕ್ಷೆ ಎ.ನಳಿನಿ, ಐತಾಂಡಹಳ್ಳಿ ಮಂಜುನಾಥ್, ನಳಿನಿ.ವಿ ಮುಂತಾದವರಿದ್ದರು

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...