ರಾಜಸ್ಥಾನ: ದಲಿತ ಯುವತಿಯ ಸಾಮೂಹಿಕ ಅತ್ಯಾಚಾರ, ಹತ್ಯೆ

Source: Vb | By I.G. Bhatkali | Published on 22nd June 2023, 11:13 PM | National News |

ಜೈಪುರ: ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ 20ರ ಹರೆಯದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿದೆ.

ಮಂಗಳವಾರ ಜಿಲ್ಲೆಯ ಖಾಜುವಾಲಾ ಪ್ರದೇಶದಲ್ಲಿ ಯುವತಿಯ ಮೃತದೇಹ ಪತ್ತೆಯಾಗಿತ್ತು.

ಖಾಜುವಾಲಾ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೇಬಲ್‌ಗಳಾದ ಮನೋಜ್ ತಿವಾರಿ ಮತ್ತು ಭಗೀರಥ ಹಾಗೂ ದಿನೇಶ್ ವಿಪ್ಲೋಯಿ ಸೇರಿದಂತೆ ಮೂವರು ವ್ಯಕ್ತಿಗಳು ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿದ್ದಾರೆ ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಇಬ್ಬರೂ ಪೊಲೀಸರನು ತಕ್ಷಣವೇ ಅಮಾನತುಗೊಳಿಸಲಾ ಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಐಜಿಪಿ ಓಂ ಪ್ರಕಾಶ್‌ ಸುದ್ದಿಸಂಸ್ಥೆಗೆ ತಿಳಿಸಿದರು.

ಈ ಹೇಯ ಕೃತ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎನ್ನಲಾಗಿರುವ ವಿಪ್ಲೋಯಿ ತಲೆ ಮರೆಸಿಕೊಂಡಿದ್ದಾನೆ. ವಿಷ್ಣಯಿ ಮತ್ತು ಯುವತಿ ಪರಸ್ಪರ ಪರಿಚಿತರಾಗಿದ್ದರು ಎಂದು ಮೊಬೈಲ್ ಕರೆ ದಾಖಲೆಗಳನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಅವಕಾಶ ನಿರಾಕರಿಸಿರುವ ಯುವತಿಯ ಸಂಬಂಧಿಗಳು ಆರೋಪಿಗ ಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಕುಟುಂಬದ ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಎಸ್‌ ಪಿ ತೇಜಸ್ವಿನಿ ಗೌತಮ್ ತಿಳಿಸಿದರು.

ಆರೋಪಿ ಪೊಲೀಸರನ್ನು ಈವರೆಗೆ ಬಂಧಿಸದಿರುವುದು ದುರದೃಷ್ಟಕರ ಎಂದು ಟೀಟಿಸಿರುವ ರಾಜಸ್ಥಾನ ವಿಪಕ್ಷ ನಾಯಕ ರಾಜೇಂದ್ರ ರಾಠೋಡ್ ಅವರು, ಕ್ರಮ ಕೈಗೊಳ್ಳುವ ನೆಪದಲ್ಲಿ ಕಾನ್‌ಸ್ಟೇಬಲ್‌ಗಳನ್ನು ಕೇವಲ ಅಮಾನತುಗೊಳಿಸಲಾಗಿದೆ.

ಪೊಲೀಸ್ ಅಧಿಕಾರಿಗಳೇ ಸೋದರಿಯರು ಮತ್ತು ಪುತ್ರಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದರೆ ಮಹಿಳೆಯರನ್ನು ರಕ್ಷಿಸುವವರು ಯಾರು ಎಂದು ಪ್ರಶ್ನಿಸಿದ್ದಾರೆ. ಅಪರಾಧದಲ್ಲಿ ಪೊಲೀಸರು ಭಾಗಿಯಾಗಿರುವುದು ಸರಕಾರಕ್ಕೆ ಕಳಂಕವಾಗಿದೆ ಎಂದೂ ಅವರು ಹೇಳಿದ್ದಾರೆ.

ಪೊಲೀಸರು ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಮತ್ತು ತಪ್ಪಿತಸ್ಥರ ವಿರುದ್ದ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ರಾಜ್ಯದ ಸಚಿವ ಪ್ರತಾಪಸಿಂಗ್ ಖಚರಿಯಾವಾಸ್ ಸುದ್ದಿಸಂಸ್ಥೆಗೆ ತಿಳಿಸಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...