ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್

Source: PTI | Published on 1st August 2020, 12:49 AM | National News | Don't Miss |

 

ನವದೆಹಲಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈಗ ಕಾಂಗ್ರೆಸ್ ರಾಜಸ್ಥಾನ ಹೈಕೋರ್ಟ್ ಆದೇಶ ಪ್ರಶ್ನಿಸಿ ಮತ್ತೆ ಸುಪ್ರೀಂ ಮೆಟ್ಟಿಲೇರಿದೆ.
ಕಾಂಗ್ರೆಸ್ ಬಂಡಾಯ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್ ಸೇರಿದಂತೆ 19 ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ರಾಜಸ್ಥಾನ ಹೈಕೋರ್ಟ್ ವಿಧಾನಸಭೆ ಸ್ಪೀಕರ್ ಗೆ ಆದೇಶಿಸಿದ್ದು, ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಮುಖ್ಯ ಸಚೇತಕ ಮಹೇಶ್ ಜ್ಯೋಶಿ ಅವರು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಜುಲೈ 24ರಂದು ರಾಜಸ್ಥಾನ ಹೈಕೋರ್ಟ್ ಬಂಡಾಯ ಶಾಸಕರ ಅನರ್ಹತೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜಸ್ಥಾನ ಸ್ಪೀಕರ್ ಸಿಪಿ ಜೋಶಿ ಅವರು ಸಹ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ.
ಇಂದು ಮಹೇಶ್ ಜೋಶಿ ಅವರ ಪರವಾಗಿ ವಕೀಲ ವರುಣ್ ಚೋಪ್ರಾ ಅವರು ಸುಪ್ರೀಂ ಕೋರ್ಟ್ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ಆದೇಶವು ಅಸಂವಿಧಾನಿಕ, ಕಾನೂನುಬಾಹಿರವಾಗಿದೆ. ಕಿಹೊಟೋ ಹೊಲೋಹೊನ್ ಪ್ರಕರಣದಲ್ಲಿ 1992 ರ ತೀರ್ಪಿನಲ್ಲಿ ಅನರ್ಹತೆ ವಿಚಾರಣೆಯನ್ನು ನಿರ್ಧರಿಸುವ ಅಧಿಕಾರ ಸ್ಪೀಕರ್‌ಗೆ ಇದೆ ಮತ್ತು ಈ ಪ್ರಕ್ರಿಯೆಯಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಉಲ್ಲೇಖಿಸಿದ್ದಾರೆ.
ಸ್ಪೀಕರ್ ಸಿ. ಪಿ. ಜೋಶಿ ನೀಡಿದ್ದ ಅನರ್ಹತೆ ನೋಟಿಸ್‌ ಅನ್ನು ಸಚಿನ್ ಪೈಲೆಟ್ ಮತ್ತು ಇತರ 18 ಶಾಸಕರು ರಾಜಸ್ಥಾನ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿತ್ತು

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...