ಮಂಗಳೂರಿನ ರಾಕೇಶ ಕೃಷ್ಣಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ

Source: SO News | By Laxmi Tanaya | Published on 27th January 2021, 11:08 AM | National News | Don't Miss |

ಮಂಗಳೂರು :  ಪ್ರತೀ ವರ್ಷ ಗಣರಾಜ್ಯೋತ್ಸವದ ಸಂದರ್ಭ ಕೇಂದ್ರ ಸರಕಾರ ನೀಡುವ ‘ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ’ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿ ಆಯ್ಕೆಯಾಗಿದ್ದಾರೆ.

ವಿಜ್ಞಾನ ಅನ್ವೇಷಣೆ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ  ಪ್ರಶಸ್ತಿಗೆ ಆಯ್ಕೆಯಾದ ಕನ್ನಡಿಗ.

 ಈತನಿಗೆ ಆವಿಷ್ಕಾರ ವಿಭಾಗದಲ್ಲಿ ಪುರಸ್ಕಾರ ಲಭಿಸಿದೆ. ಕೇಂದ್ರ ಸರಕಾರ ಪ್ರತೀ ವರ್ಷ ಬಾಲ ಪ್ರತಿಭೆಗಳನ್ನು ಗುರುತಿಸಿ ಈ ಪ್ರಶಸ್ತಿ ನೀಡುತ್ತಿದೆ. ಪ್ರಶಸ್ತಿಯ ಪದಕ 1 ಲಕ್ಷ ರೂ. ನಗದು ಒಳಗೊಂಡಿದೆ. ವಿಜೇತರೊಂದಿಗೆ ಪ್ರಧಾನಿ ಮೋದಿವೀಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ರಾಕೇಶ್ ಕೃಷ್ಣ ಅವರು ಬನ್ನೂರು ನಿವಾಸಿ ರವಿಶಂಕರ್ ನೆಕ್ಕಿಲ ಮತ್ತು ಡಾ.ದುರ್ಗಾರತ್ನಾ ದಂಪತಿಯ ಪುತ್ರ. ಇವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ.

ಭಾರತ ಸರಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಇನ್ ಸ್ಪೈರ್ ಅವಾರ್ಡ್ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನ ಗಳಿಸಿದ್ದರು. ಅಲ್ಲದೆ ಜಪಾನಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ವಿಜ್ಞಾನ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. 

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...