ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹಕ್ಕೆ ಬ್ರೇಕ್: ಟ್ರಸ್ಟ್ ಅಂದಾಜು 2,500 ಕೋಟಿ ಸಂಗ್ರಹ, 3 ವರ್ಷ ನಿರ್ಮಾಣ!

Source: ANI | By MV Bhatkal | Published on 7th March 2021, 6:56 PM | National News |

ನವದೆಹಲಿ: ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಕೆಯನ್ನು ನಿಲ್ಲಿಸಲಾಗಿದ್ದು ಟ್ರಸ್ಟ್ ಅಂದಾಜಿಸಿದಂತೆ 2,500 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಇನ್ನು ಮೂವರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ಮುಂದುವರೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ.
ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಕೆಯನ್ನು ನಿಲ್ಲಿಸಲಾಗಿದ್ದು ಟ್ರಸ್ಟ್ ಅಂದಾಜಿಸಿದಂತೆ 2,500 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಇನ್ನು ಮೂವರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ಮುಂದುವರೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. 
ದೇಣಿಗೆ ಸಂಗ್ರಹ ಕಾರ್ಯ ನಿಲ್ಲಿಸಿದ್ದರೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಹಣ ನೀಡುತ್ತಿದ್ದಾರೆ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಮಾಹಿತಿ ನೀಡಿದ್ದಾರೆ. 
ದೇಶಾದ್ಯಂತ 9 ಲಕ್ಷ ಸ್ವಯಂಸೇವಕರು ನಾಲ್ಕು ಲಕ್ಷ ಹಳ್ಳಿಗಳ 10 ಕೋಟಿ ಮನೆಗಳಿಂದ ದೇಣಿಗೆ ಸಂಗ್ರಹಿಸಿದ್ದಾರೆ ಎಂದು ಚಂಪತ್ ರೈ ಹೇಳಿದ್ದಾರೆ. 
ಅಯೋಧ್ಯೆಯಲ್ಲಿ 70 ಎಕರೆಯಲ್ಲಿ ಮಂದಿರ ನಿರ್ಮಾಣಕ್ಕೆ ಟ್ರಸ್ಟ್ ಮುಂದಾಗಿತ್ತು. ಆದರೆ ಇದೀಗ ಹೆಚ್ಚುವರಿಯಾಗಿ ಜಮೀನನ್ನು ಖರೀದಿಸಿ 107 ಎಕರೆಗೆ ವಿಸ್ತರಿಸಲು ಟ್ರಸ್ಟ್ ಯೋಜನೆ ರೂಪಿಸಿದೆ. ಅದಕ್ಕಾಗಿ ಸ್ಥಳೀಯ ನಿವಾಸಿಗಳ ಜಮೀನನ್ನು ಖರೀದಿಸಲಾಗುತ್ತಿದೆ ಎಂದರು.

 

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...