ರಾಮನಗರ:ಬೈಕ್‍ಗಳ ಮುಖಾಮುಖಿ ಡಿಕ್ಕಿ, ಮೂವರ ದುರ್ಮರಣ

Source: ES News | By MV Bhatkal | Published on 29th August 2021, 4:57 PM | Coastal News | Don't Miss |

ಬೆಂಗಳೂರು:ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಸಂಭವಿಸಿದೆ.ಮೃತರನ್ನು ಬಾಲಗೇರಿ ನಿವಾಸಿಗಳಾದ ವೆಂಕಟೇಶ (33) ಮೂರ್ತಿ (30) ಮತ್ತು ಅಚಲದೊಡ್ಡಿಯ ರಘು (19) ಎಂದು ಗುರುತಿಸಲಾಗಿದೆ.
ರಾತ್ರಿ 9 ಗಂಟೆ ಸುಮಾರಿನಲ್ಲಿ ರಾಮನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಸಮೀಪದ ಮಹಿಳಾ ಪ್ರಥಮ ದರ್ಜೆ ಕಾಲೇಜು ಎದುರು ಒಂದು ಬೈಕ್‍ನಲ್ಲಿ ಇಬ್ಬರು, ಮತ್ತೊಂದು ಬೈಕ್‍ನಲ್ಲಿ ಒಬ್ಬರು ಹೋಗುತ್ತಿದ್ದಾಗ ಅತಿ ವೇಗದಿಂದಾಗಿ ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಅಪಘಾತದಲ್ಲಿ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.
ಸುದ್ದಿ ತಿಳಿದು ರಾಮನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿ ವಾರಸುದಾರರಿಗೆ ನೀಡಿದ್ದಾರೆ. ಅಪಘಾತಕ್ಕೆ ಅತಿ ವೇಗವೇ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...