ಭಟ್ಕಳ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ನಿಧನ

Source: sonews | By Staff Correspondent | Published on 16th September 2017, 3:29 PM | Coastal News | Don't Miss |

 

ಮುಂಜಾಗೃತ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ; ಸ್ವಯಂ ಘೋಷಿತ ಬಂದ್

ಭಟ್ಕಳ: ಪುರಸಭೆ ಅಂಗಡಿ ತೆರವು ಕಾರ್ಯಾಚರಣೆ ಸಂದರ್ಭ ಉದ್ವೇಗಕ್ಕೊಳಗಾಗಿ ಎರಡು ದಿನಗಳ ಹಿಂದೆ ಪುರಸಭೆ ಕಟ್ಟಡದೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಆಸರಕೇರಿಯ ರಾಮಚಂದ್ರಪ್ಪ ನಾಯ್ಕ ಶುಕ್ರವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶನಿವಾರ ಪುರಸಭೆ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಜಿಲ್ಲಾಡಳಿತ ಘಟನೆಯ ಗಂಭಿರತೆಯನ್ನು ಪರಿಗಣಿಸಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಹಾಕಲಾಗಿದ್ದು, ಬೇರೆ ಜಿಲ್ಲೆಗಳಿಂದಲೂ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.

ರಾಮಚಂದ್ರ ನಾಯ್ಕ ರ ಮೃತದೇಹವನ್ನು ಬೆಳಿಗ್ಗೆ ೯ಗಂಟೆಗೆ ಭಟ್ಕಳ ತರಲಾಗಿದ್ದು ಆಸರಕೇರಿಯ ಅವರ ನಿವಾಸದ ಮುಂದೆ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಶವಸಂಸ್ಕಾರವನ್ನು ನೆರವೇರಿಸಲಾಗಿದೆ.  ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೆ ಪರಿಸ್ಥಿತಿ ಶಾಂತವಾಗಿದೆ. ಪರಿಸ್ಥಿಯನ್ನು ನಿಯಂತ್ರಿಸಲು ಜಿಲ್ಲಾಡಳಿತ ಸಿದ್ದವಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಭಟ್ಕಳದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ. ಸಾರ್ವಜನಿಕರು ಯಾವುದೇ ರೀತಿಯ ಭಯಪಡುವ ಅವಶ್ಯಕತೆಯಿಲ್ಲ. ಇಲ್ಲಿ ಪರಿಸ್ಥಿತಿ ತಿಳಿಯಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. 

Read These Next

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ವ್ಯಾಪಕವಾಗಿ ಪರಿಶೀಲಿಸಿ : ಜಿಲ್ಲಾಧಿಕಾರಿ

ಕಾರವಾರ :ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ...

ಮಳೆಗಾಲದಲ್ಲಿ ಮುನ್ನೆಚ್ಚರಿಕೆ; ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರವಹಿಸಲು ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿ ಸೂಚನೆ

ಮಳೆಗಾಲದಲ್ಲಿ ಕಂಡು ಬರಬಹುದಾದ ಡೆಂಗಿ, ಚಿಕುನ್ ಗುನ್ಯಾ, ಮಲೇರಿಯಾ, ಮಿದುಳು ಜ್ವರ ಮತ್ತಿತರ ರೋಗಗಳ ಲಕ್ಷಣಗಳು, ಅವುಗಳ ಹರಡುವಿಕೆ ಹಾಗೂ ...

ಸರ್ಕಾರದಿಂದ ಕೋಟಿಗಟ್ಟಲೆ ಅನುದಾನ ಬಂದರೂ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಭಟ್ಕಳ ತಾಲೂಕು

ನೀರಿನ ಸಮಸ್ಯೆಯಿಂದಾಗಿ ಭಟ್ಕಳದ ನಗರ ಮತ್ತು ಗ್ರಾಮೀಣ ಪ್ರದೇಶಗಳ ನಿವಾಸಿಗಳು ಟ್ಯಾಂಕರ್ ಮೂಲಕ ಸರಬರಾಜು ಮಾಡುವ ನೀರಿಗಾಗಿ ಸರತಿ ...

ರಾಷ್ಟಿಯ ಹೆದ್ದಾರಿ ಕಾಮಗಾರಿಗಳನ್ನು ನಿಗದಿತ ಯೋಜನೆಯಂತೆ ಪೂರ್ಣಗೊಳಿಸಿ - ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಜಿಲ್ಲೆಯಲ್ಲಿ ಹಾದು ಹೋಗಿರುವ ಚತುಷ್ಪತ ರಾಷ್ಟಿಯ ಹೆದ್ದಾರಿಯ ಕಾಮಗಾರಿಯಲ್ಲಿ , ಉದ್ದೇಶಿತ ಯೋಜನೆಯಲ್ಲಿ ತಿಳಿಸಿರುವ ಎಲ್ಲಾ ...