ರಮಝಾನ್ ಹಬ್ಬದ ಪ್ರಯುಕ್ತ ಶಾಂತಿ ಸಭೆ

Source: sonews | By Staff Correspondent | Published on 22nd May 2020, 11:05 PM | Coastal News |

ಮುಂಡಗೋಡ :  ರಮಝಾನ್ ಹಬ್ಬದ ಪ್ರಯುಕ್ತ ತಹಶೀಲ್ದಾರ ಕಚೇರಿಯಲ್ಲಿ ತಹಶೀಲ್ದಾರ ಶ್ರೀಧರ ಮುಂದಲಮನಿ ಅಧ್ಯಕ್ಷತೆಯಲ್ಲಿ ತಾಲೂಕ ಮುಸ್ಲೀಂ ಸಮಾಜದ ಮುಖಂಡರ ಜೊತೆ ಶಾಂತಿ ಸಭೆ ಶುಕ್ರವಾರ ನಡೆಯಿತು.

ರಮಝಾನ್ ಹಬ್ಬದಂದು ಈದ್ಗಾ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿಷೇಧಿಸಲಾಗಿದೆ. ಮನೆಯಲ್ಲಿ ಹಬ್ಬವನ್ನು ಆಚರಣೆ ಮಾಡಬೇಕು. ಹಬ್ಬದೊಂದು ಕೈಕುಲಕುವುದು ಅಪ್ಪಿಕೊಂಡು ಶುಭಾಶಯ ವಿನಿಮಯ ಮಾಡಿಕೊಳ್ಳವುದು ಮಾಡಬಾರದು ಎಂದು ಸೂಚಿಸಿದ ಅವರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ಸಮಾಜಿಕ ಅಂತರವನ್ನು ಕಾಯ್ದುಕೊಂಡು ಹೋಗಬೇಕು ತಿಳಿಸಿದರು

ಸೋಮವಾರ ಹಬ್ಬವಿದೆ ರವಿವಾರ ಜನತಾ ಕಫ್ರ್ಯೂ ಇದೆ ಆದ್ದರಿಂದ ಎರಡು ತಾಸು ಅಂಗಡಿಗಳಿಂದ ದಿನಸಿಗಳನ್ನು ಖರೀಧಿಸಲು ಸಮಯವಕಾಶ ನೀಡಬೇಕು ಎಂದು ಮುಸ್ಲಿಂ ಬಾಂದವರು ತಹಶೀಲ್ದಾರರನ್ನು ಕೇಳಿ ಕೊಂಡರು. ಇದಕ್ಕೆ ನೀರಾಕರಿಸಿದ ತಹಶೀಲ್ದಾರ ಅಂದು ಯಾರೂ ಕೂಡ ಹೋರಗೆ ಬರುವಂತಿಲ್ಲ ಎಂದರು

ಸಭೆಯಲ್ಲಿ ಪಿಎಸೈ ಬಸವರಾಜ ಮಬನೂರ, ಮೋಹಿನಿ ಶೇಟ್ಟಿ, ಪಟ್ಟಣದ ಐದು ಮಸೀದಿಗಳ ಸೇರಿದಂತೆ ತಾಲೂಕಿನ ಆಯಾ ಮಸೀದಿಗಳ ಅಧ್ಯಕ್ಷರು ಸೇಕ್ರಟರಿಗಳು ಸದಸ್ಯರು ಹಾಗೂ ಸಮಾಜ ಮುಖಂಡರು ಉಪಸ್ಥಿತರಿದ್ದರು
 

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...