ಮತದಾನ ಮಹತ್ವ ಸಾರಿದ ರಂಗೋಲಿ ಚಿತ್ತಾರಗಳು

Source: so news | By MV Bhatkal | Published on 4th April 2019, 12:34 AM | State News | Don't Miss |

 

ಧಾರವಾಡ:ಜಿಲ್ಲಾ ಸ್ವಿಪ್ ಸಮಿತಿಯಿಂದ ಧಾರವಾಡ ಹಳೆಬಸ್‌ನಿಲ್ದಾಣದಲ್ಲಿ ಇಂದು ಬೆಳಿಗ್ಗೆ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯು ಮತದಾನದ ಮಹತ್ವ ಸಾರಿತು. ಮತದಾನ ಜಾಗೃತಿಗಾಗಿ ಅನೇಕ ರೀತಿಯ ರಂಗೋಲಿ ಚಿತ್ತಾರಗಳನ್ನು ವಿದ್ಯಾರ್ಥಿಗಳು ಶಿಕ್ಷಕರು, ಅಧಿಕಾರಿಗಳು ಬಿಡಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.
ಜಿಲ್ಲಾಧಿಕಾರಿ ದೀಪಾ ಚೋಳನ್ ಹಾಗೂ ಸಿಇಓ ಡಾ. ಬಿ.ಸಿ. ಸತೀಶ್ ಅವರು ಸ್ವತ: ರಂಗೋಲಿ ಸ್ಪರ್ಧೆಗೆ ಕೈ ಜೋಡಿಸುವ ಮೂಲಕ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದರು.
ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಅಧಿಕಾರಿಗಳು ಮತಯಂತ್ರ, ಚುನಾವಣಾ ಆಯೋಗ ಲಾಂಛನ, ಮತದಾನ ಮಾಡಿದ ತೋರುಬೆರಳು, ಹೂವು, ಮತದಾನ ಜಾಗೃತಿ, ಮದುವೆ ಆಮಂತ್ರಣ ಸೇರಿದಂತೆ ವಿವಿಧ ರೀತಿಯ ನವೀನ ರಂಗೋಲಿ ಚಿತ್ರ, ಮತಜಾಗೃತಿ ಛತ್ರಿ (ಕೊಡೆ) ಚಿತ್ರಗಳನ್ನು ಬಿಡಿಸಿ ಮತದಾನ ಜಾಗೃತಿಯ ಘೋಷವಾಕ್ಯಗಳನ್ನು ಬರೆದಿದ್ದರು.
ಗ್ರಾಮೀಣ ಪ್ರದೇಶಗಳ ನೂರಾರು ಪ್ರಯಾಣಿಕರು ಬಸ್ಸಿನಿಂದ ಇಳಿದು ನೇರವಾಗಿ ರಂಗೋಲಿ ಬಿಡಿಸಿದ ಸ್ಥಳಕ್ಕೆ ಬಂದು ನೋಡಿ ತಮ್ಮ ಸಂತಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮಕ್ಕಳು ಕೇಕ್ ಕತ್ತರಿಸುವ ಮೂಲಕ ಸಿಹಿ ವಿತರಿಸಿದರು.
ಬಸ್‌ನಿಲ್ದಾಣಕ್ಕೆ ಬಂದು ಸಾರ್ವಜನಿಕ ಪ್ರಯಾಣಿಕರಿಗೆ ‘ಭಾರತಕ್ಕಾಗಿ ಮತ’, ‘ತಪ್ಪದೇ ಮತದಾನ ಮಾಡಿ’, ‘ಮತದಾನ ಹಕ್ಕು ಮತ್ತು ಕರ್ತವ’್ಯ ಘೋಷವಾಕ್ಯಗಳನ್ನು ಅವರ ಅಂಗೈ ಮೇಲೆ ಮೆಹಂದಿ ಬಳಸಿ ಬರೆಯುವ ಕಾರ್ಯವನ್ನು ಅಂಜುಮನ್ ಕಾಲೇಜ್ ವಿದ್ಯಾರ್ಥಿಗಳು ಮಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ ಜಿ.ಬಿ. ಮನ್ನಿಕೇರಿ, ಬಿಇಓಗಳಾದ ಎಂ.ಲ್. ಹಂಚಾಟೆ, ಎ.ಎ. ಖಾಜಿ, ವಿದ್ಯಾ ನಾಡಿಗೇರ, ಕೆ.ಎಂ. ಶೇಖರ್ ಸೇರಿದಂತೆ ವಿವಿಧ ಅಧಿಕಾರಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...