ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಪ್ರಮಾಣ ವಚನ ಸ್ವೀಕಾರ

Source: The New Indian Express | By MV Bhatkal | Published on 22nd July 2022, 12:46 AM | National News |

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷರಾಗಿ ರಾನಿಲ್ ವಿಕ್ರಮಸಿಂಘೆ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಜುಲೈ 20 ರಂದು ಬುಧವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲ್ಲುವ ಮುಖೇನ ರಾನಿಲ್ ವಿಕ್ರಮಸಿಂಘೆ ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ.
ರಾನಿಲ್ ವಿಕ್ರಮಸಿಂಘೆ ಅವರು ಎದುರಾಳಿಗಳ ಎದುರು ಸುಮಾರು 134 ಮತಗಳನ್ನು ಗಳಿಸಿ ಜಯಗಳಿಸಿದ್ದರು. ರಾನಿಲ್ ವಿಕ್ರಮಸಿಂಘೆ ಅವರ ವಿರುದ್ಧ ಭಾರೀ ಪ್ರತಿಭಟನೆಗಳ ನಡುವೆಯೇ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದರು.
ಚುನಾವಣೆಯಲ್ಲಿ ಗೆದ್ದ ಬೆನ್ನಲ್ಲೇ ಅವರು ಸ್ಪೀಕರ್ ಅವರನ್ನು ಉದ್ದೇಶಿಸಿ ಸಂಸತ್ತಿನ ಸಂಕೀರ್ಣದ ಒಳಗೆ ಸಂಸತ್ತಿನ ಸಭಾಂಗಣದ ಹೊರಗೆ ಪ್ರಮಾಣವಚನ ಸ್ವೀಕರಿಸಲು ಸ್ಪೀಕರ್‌ಗೆ ಅನುಮತಿ ಕೋರಿದರು. ಶ್ರೀಲಂಕಾವನ್ನು ಅಭೂತಪೂರ್ವ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ಎಲ್ಲಾ ಪಕ್ಷಗಳೊಂದಿಗೆ ಕೆಲಸ ಮಾಡುವುದಾಗಿ ಅವರು ಪ್ರತಿಪಕ್ಷಗಳಿಗೆ ಭರವಸೆ ನೀಡಿದರು.
ಈ ಹಿಂದೆ, ರಾನಿಲ್ ಅವರ ಖಾಸಗಿ ನಿವಾಸಕ್ಕೆ ಬೆಂಕಿ ಹಚ್ಚಲಾಯಿತು ಮತ್ತು ಅವರು ಪ್ರಧಾನಿಯಾಗಿದ್ದಾಗ ಅವರ ಅಧಿಕೃತ ನಿವಾಸವನ್ನು ಪ್ರತಿಭಟನಾಕಾರರು ಮುತ್ತಿಗೆ ಹಾಕಿದರು, ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...