ಸಾಮಾಜಿಕ ಭದ್ರತಾ ಪಿಂಚಣಿ ಅರ್ಜಿಗಳ ತ್ವರಿತ ವಿಲೇವಾರಿ : ಡಾ.ಎಸ್.ಸೆಲ್ವಕುಮಾರ್

Source: SO News | By Laxmi Tanaya | Published on 8th September 2021, 11:07 PM | State News | Don't Miss |

ಶಿವಮೊಗ್ಗ : ಪಿಂಚಣಿಗೆ ಕೋರಿ ಸಲ್ಲಿಸಲಾಗಿರುವ ಸಾಮಾಜಿಕ ಭದ್ರತಾ ಯೋಜನೆಗಳ ಅರ್ಜಿಗಳನ್ನು ಆದಷ್ಟು ಬೇಗನೇ ವಿಲೇವಾರಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಸಂಧ್ಯಾ ಸುರಕ್ಷಾ ಯೋಜನೆಯಡಿ ಒಟ್ಟು 909 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 369 ಅರ್ಜಿಗಳು ವಿಲೇವಾರಿಗೆ ಬಾಕಿ ಇದೆ. ವೃದ್ದಾಪ್ಯ ವೇತನ ಯೋಜನೆಯಡಿ 540 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 245 ಬಾಕಿಯಿವೆ. ವಿಧವಾ ವೇತನ ಯೋಜನೆಯಡಿ 769 ಅರ್ಜಿಗಳು ಸ್ವೀಕರಿಸಿದ್ದು, 283 ಬಾಕಿಯಿವೆ. ಅಂಗವಿಕಲ ವೇತನ ಯೋಜನೆಯಡಿ 218 ಅರ್ಜಿಗಳನ್ನು ಸ್ವೀಕರಿಸಿದ್ದು, 82 ವಿಲೇವಾರಿಗೆ ಬಾಕಿಯಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಮಾಹಿತಿ ನೀಡಿದರು. 

ಅತಿವೃಷ್ಟಿ ಹಾನಿ: ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಈ ಬಾರಿ 6 ಜೀವ ಹಾನಿ ಸಂಭವಿಸಿದ್ದು, 5ಪ್ರಕರಣಗಳಲ್ಲಿ ಪರಿಹಾರ ಧನ ನೀಡಲಾಗಿದೆ. 126 ಮನೆಗಳು ಪೂರ್ಣ ಹಾನಿ, 478 ಮನೆಗಳಿಗೆ ತೀವ್ರ ಹಾನಿ ಹಾಗೂ 532ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಮರಳು ಜಮೆಗೊಂಡು 1174 ಹೆಕ್ಟೇರ್ ಕೃಷಿ ಭೂಮಿ ಹಾನಿಗೀಡಾಗಿದ್ದು, ಎನ್‍ಡಿಆರ್‍ಎಫ್ ಮಾರ್ಗಸೂಚಿ ಪ್ರಕಾರ 1.43 ಕೋಟಿ ರೂ. ಪರಿಹಾರ ಒದಗಿಸಬೇಕಾಗಿದೆ. ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಹಾನಿಯುಂಟಾಗಿದ್ದು 4086 ಹೆ. ಭತ್ತ, 773 ಹೆ. ಮುಸುಕಿನ ಜೋಳ, 233 ಹೆ. ಅಡಿಕೆ ಸೇರಿದಂತೆ 6285 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳಿಗೆ ಹಾನಿ ಉಂಟಾಗಿದೆ. ಬೆಳೆ ಹಾನಿಗೆ ಇನ್‍ಪುಟ್ ಸಬ್ಸಿಡಿ ಒದಗಿಸಲು ಡಾಟಾ ಎಂಟ್ರಿ ಕಾರ್ಯ ಪ್ರಗತಿಯಲ್ಲಿದ್ದು 7352 ಅರ್ಜಿಗಳ ಪೈಕಿ 1044 ಅರ್ಜಿಗಳಿಗೆ ಅನುಮೋದನೆ ನೀಡಲಾಗಿದೆ. ಡಾಟಾ ಎಂಟ್ರಿ ಕಾರ್ಯವನ್ನು ವಾರದ ಒಳಗಾಗಿ ಪೂರ್ಣಗೊಳಿಸುವಂತೆ ಸೆಲ್ವಕುಮಾರ್ ಅವರು ಸೂಚನೆ ನೀಡಿದರು.

ನೆರೆ ಸಂತ್ರಸ್ತರ ಪುನರ್ವಸತಿ ಕಾರ್ಯಗಳಿಗೆ ಪ್ರಸ್ತುತ ಸಾಲಿನಲ್ಲಿ 7.93 ಕೋಟಿ ರೂ. ಬಿಡುಗಡೆಯಾಗಿದ್ದು, 303 ಮನೆಗಳ ನಿರ್ಮಾಣ ಕಾರ್ಯ ಪ್ರಾರಂಭವಾಗಬೇಕಿದೆ ಎಂದು ಹೊನ್ನಳ್ಳಿ ಅವರು ತಿಳಿಸಿದರು. 
ಘನತ್ಯಾಜ್ಯ ನಿರ್ವಹಣೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಘನತ್ಯಾಜ್ಯ ನಿರ್ವಹಣೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸೆಲ್ವಕುಮಾರ್ ಅವರು ಸೂಚನೆ ನೀಡಿದರು. ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ 190 ವಾರ್ಡ್‍ಗಳಲ್ಲಿ ಪ್ರತಿದಿನ 280 ಟನ್ ಕಸ ಉತ್ಪತ್ತಿಯಾಗುತ್ತಿದ್ದು, ಘನತ್ಯಾಜ್ಯ ವಸ್ತು ನಿರ್ವಹಣೆಗೆ 90 ಎಕರೆ ಜಮೀನು ಹೊಂದಲಾಗಿದೆ. ಪ್ರಸ್ತುತ ಮನೆಮನೆಯಿಂದ ಶೇ.100ರಷ್ಟು ಕಸ ಸಂಗ್ರಹಿಸಲಾಗುತ್ತಿದ್ದು, ಪ್ರಾಥಮಿಕ ಹಂತದಲ್ಲಿ ಶೇ.80ರಷ್ಟು ಕಸವನ್ನು ವಿಂಗಡಿಸಲಾಗುತ್ತಿದೆ. ಸ್ವಚ್ಛಭಾರತ್ ಮಿಷನ್ ಅಡಿ 17.96 ಕೋಟಿ ರೂ. ಬಿಡುಗಡೆಯಾಗಿದ್ದು, 5.89 ಕೋಟಿ ರೂ. ವೆಚ್ಚವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಆಸ್ತಿ ತೆರಿಗೆ: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈ ಹಣಕಾಸು ಸಾಲಿನಲ್ಲಿ ಇದುವರೆಗೆ 26 ಕೋಟಿ ರೂ. ಆಸ್ತಿ ತೆರಿಗೆ ವಸೂಲು ಮಾಡಲಾಗಿದ್ದು, ಇನ್ನೂ 10 ಕೋಟಿ ರೂ. ವಸೂಲಿಗೆ ಬಾಕಿ ಇದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 103249 ನೀರು ಸಂಪರ್ಕವಿದ್ದು, ಈ ವರ್ಷ 3ಕೋಟಿ ರೂ. ಶುಲ್ಕ ವಸೂಲು ಮಾಡಲಾಗಿದೆ. ಇನ್ನೂ 38 ಕೋಟಿ ರೂ. ವಸೂಲಾತಿಗೆ ಬಾಕಿಯಿದೆ. ನೀರಿನ ಶುಲ್ಕ ವಸೂಲಾತಿ ಕಡಿಮೆಯಿದ್ದು, ಇದನ್ನು ಸರಿಪಡಿಸಬೇಕು ಎಂದು ಸೆಲ್ವಕುಮಾರ್ ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...